ಸಂಗನಾಳ ಗ್ರಾಮದಲ್ಲಿ ಶ್ರೀ ಕನಕದಾಸರ ಜಯಂತಿಯನ್ನು ಸರಳವಾಗಿ ಆಚರಣೆ ನೇರವೇರಿಸಿದರು…

Spread the love

ಸಂಗನಾಳ ಗ್ರಾಮದಲ್ಲಿ ಶ್ರೀ ಕನಕದಾಸರ ಜಯಂತಿಯನ್ನು ಸರಳವಾಗಿ ಆಚರಣೆ ನೇರವೇರಿಸಿದರು…

. ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕೇಲವಕೆಲವು ಬ್ರಾಹ್ಮಣೆತರ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರು ದಂಡನಾಯಕರಾಗಿದ್ದು ಯುದ್ದವೊಂದರಲ್ಲಿ ಸೋತ ಅವರಿಗೆ ಉಪರತಿ/ವೈರಾಗ್ಯ ಉಂಟಾಗಿ, ಹರಿಭಕ್ತರಾದರಂತೆ. ಜನನ ಕನಕದಾಸರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ 1509ರಲ್ಲಿ ಕುರುಬ ಜನಾಂಗಕ್ಕೆ ಸೇರಿದ ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿಗಳ ಮಗನಾಗಿ ಜನಿಸಿದರು. ಕನಕದಾಸರು ಬರಿ ಕುರುಬ ಜಾತಿಗೆ ಸೀಮಿತವಾದ ಭಕ್ತರಲ್ಲ ಎಲ್ಲಾ ಜಾತಿಗಳಿಗೆ ಬೇಕಾದವರು. 15-16 ನೆಯ ಶತಮಾನದಲ್ಲೇ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ಕನಕದಾಸರು ಎಂದರೆ ತಪ್ಪಾಗಲಾರದು. ಕನಕದಾಸರು ಅನೇಕ ತತ್ವ ಪದಗಳನ್ನು ರಚಿಸಿದ್ದಾರೆ. ಐತಿಹ್ಯ ಸುಮಾರು ಐದು ನೂರು ವರ್ಷಗಳ ಹಿಂದಿನ ಮಾತು. ವಿಜಯನಗರ ಸಾಮ್ರಾಜ್ಯದಲ್ಲಿದ್ದ ಬಂಕಾಪುರ ಪ್ರಾಂತದ ಮುಖ್ಯಪಟ್ಟಣದ ಹೆಸರು ಬಾಡ ಎಂದು. ವಿಜಯನಗರದಿಂದ ಗೋವಾಕ್ಕೆ ಹೋಗುವ ಹೆದ್ದಾರಿ. ಈ ಬಾಡದಿಂದಲೇ ಹಾಯ್ದು ಹೋಗುತ್ತಿತ್ತು. ಬಾಡ ಒಳ್ಳೇ ಆಯಕಟ್ಟಿನ ಸ್ಥಳ. ಈ ಬಂಕಾಪುರ ಪ್ರಾಂತಕ್ಕೆ ಡಣ್ಣಾಯಕ, ಬೀರಪ್ಪನಾಯಕ. (ಡಣ್ಣಾಯಕ ಎಂದರೆ ಆಯಕಟ್ಟಿನ ಸ್ಥಳದಲ್ಲಿ ಕಾದಿಟ್ಟ ಸೈನ್ಯದ ದಳಕ್ಕೆ ಸೇನಾಪತಿ ಎಂದು ನೇಮಿಸಲ್ಪಟ್ಟವನು) ಬೀರಪ್ಪನ ಹೆಂಡತಿ ಬಚ್ಚಮ್ಮ. ಬೀರಪ್ಪನಾಯಕನಿಗೆ ತಿರುಪತಿ ತಿಮ್ಮಪ್ಪನಲ್ಲಿ ಬಹು ನಂಬಿಕೆ. ದಕ್ಷಿಣದಲ್ಲಿ ಸುಮಾರು ಒಂಬೈನೂರು ವರ್ಷಗಳ ಹಿಂದೆ ಶ್ರೀರಾಮಾನುಜಾಚಾರ್ಯರೆಂಬ ದೊಡ್ಡ ಗುರುಗಳು ಪ್ರಸಿದ್ಧರಾಗಿದ್ದರು. ಅವರು ಸ್ಥಾಪಿಸಿದ ಪಂಥಕ್ಕೆ ಶ್ರೀವೈಷ್ಣವ ಮತವೆಂದು ಹೆಸರು. ಡಣ್ಣಾಯಕ ಬೀರಪ್ಪನಾಯಕ ಮತ್ತು ಆತನ ಮಡದಿ ಬಚ್ಚಮ್ಮ ಇವರು ಶ್ರೀ ವೈಷ್ಣವ ಮತಕ್ಕೆ ಶರಣು ಹೋದ ಕುರುಬರು. ಅಂದಿನಿಂದ ಇವರು ಸಹ ತಿರುಪತಿ ವಂಕಟೇಶ್ವರ ಸ್ವಾಮಿಯನ್ನೇ ತಮ್ಮ ಆರಾಧ್ಯ ದೈವವನ್ನಾಗಿ ಮಾಡಿಕೊಂಡರು. ಬೀರಪ್ಪ ನಾಯಕ ಮತ್ತು ಬಚ್ಚಮ್ಮರಿಗೆ ಅನೇಕ ದಿನಗಳಿಂದ ಒಂದು ಹಂಬಲವಿತ್ತು. ಅದೇನೆಂದರೆ, ತಮಗೆ ಒಬ್ಬ ಕುಲದೀಪಕನಾದ ಮಗ ಜನಿಸಬೇಕು ಎಂದು. “ವಂಶೋದ್ಧಾರಕನಾದ ಒಬ್ಬ ಮಗನನ್ನು ಕರುಣಿಸು” ಎಂದು ಈ ದಂಪತಿಗಳು ತಿರುಪತಿ ತಿಮ್ಮಪ್ಪನಿಗೆ ಹರಕೆ ಹೊತ್ತಿದ್ದರು. ಅವರ ಆಸೆ ಫಲಿಸಿತು. ಬೀರಪ್ಪ ನಾಯಕ ಮತ್ತು ಬಚ್ಚಮ್ಮರಿಗೆ ಒಬ್ಬ ಮಗ ಜನಿಸಿದ. ತಂದೆ ತಾಯಿಗಳಿಗೆ ಆನಂದವೋ ಆನಂದ. ತಿರುಪತಿ ತಿಮ್ಮಪ್ಪನ ಆಶೀರ್ವಾದ ಎಂದು ಅವರು ತಮ್ಮ ಮಗುವಿಗೆ “ತಿಮ್ಮಪ್ಪ” ಎಂದೇ ನಾಮಕರಣ ಮಾಡಿದರು. ತಿಮ್ಮಪ್ಪ ಜನಿಸಿದ ಕಾಲ ಇಂತದ್ದೇ ಎಂದು ತಿಳಿಯದು; ಹದಿನೈದನೇಯ ಶತಮಾನದ ಕೊನೆಯ ವರ್ಷಗಳಲ್ಲಿ ಹುಟ್ಟಿದರು ಎಂದು ಹೇಳಬಹುದು. ತಿಮ್ಮಪ್ಪನಾಯಕ ಒಬ್ಬ ಸೇನಾಧಿಪತಿಯ ಮಗನಾಗಿ ಜನಿಸಿದನಷ್ಟೆ. ಬಾಲ್ಯದಲ್ಲಿಯೇ ಅಕ್ಷರಾಭ್ಯಾಸ, ವ್ಯಾಕರಣಗಳ ಜೊತೆಗೆ ಕತ್ತಿವರಸೆ, ಕುದುರೆ ಸವಾರಿಯನ್ನೂ ಕಲಿತ. ಕೆಲವು ವರ್ಷಗಳಲ್ಲಿ ಬೀರಪ್ಪನಾಯಕ ಮತ್ತು ಬಚ್ಚಮ್ಮ ತೀರಿಕೊಂಡರು. ತಂದೆಯ ಬಳಿಕ ತಿಮ್ಮಪ್ಪ ನಾಯಕ ತನ್ನ ಕಿರಿವಯಸ್ಸಿನಲ್ಲಿಯೇ ಬಂಕಾಪುರ ಪ್ರಾಂತಕ್ಕೆ ಡಣ್ಣಾಯಕನಾದ. ಕನಕ ದಾಸರು ತಮ್ಮನ್ನು ತಾವೇ ಸಾವಿನ ದೇವತೆಯಾದ ಯಮನೆಂದು ತಮ್ಮ ಕೃತಿಗಳಲ್ಲಿ ಉಲ್ಲೇಖಿಸಿದ್ದಾರೆ. ಸಾಧನೆ ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರು. ವ್ಯಾಸರಾಯದಿಂದ ಮಧ್ವ ತತ್ವಶಾಸ್ತ್ರವನ್ನು ಕಲಿತು ಒಪ್ಪಿಕೊಂಡ ಕನಕದಾಸರು ಉಡುಪಿ ಶ್ರೀ ಕೃಷ್ಣನ ಅನನ್ಯ ಭಕ್ತರು. ಕಾಗಿನೆಲೆಯ ಆದಿಕೇಶವನ ಭಕ್ತರಾದ ಕನಕದಾಸರು ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದರು. ಇವರ ಕೀರ್ತನೆಗಳ ಅಂಕಿತ ಕಾಗಿನೆಲೆಯ ಆದಿಕೇಶವರಾಯ ಎಂಬುದು ಕನಕ ದಾಸರ ಸಾಹಿತ್ಯ ರಚನೆ ಕನಕದಾಸರು ಸಾಹಿತ್ಯದ ವಿವಿಧ ಪ್ರಕಾರಗಳಾದ ಕೀರ್ತನೆಗಳು, ಸುಳಾದಿಗಳು, ಉಗಾಭೋಗಗಳು ಕನ್ನಡ ಸಾಹಿತ್ಯ ಲೋಕಕ್ಕೆ ಅರ್ಪಿಸಿರುವುದಲ್ಲದೆ, ಸಂಗೀತ ಪ್ರಪಂಚಕ್ಕೆ ತನ್ನದೇ ಆದಂತಹ ಕೊಡುಗೆಯನ್ನು ಮುಂಡಿಗೆಗಳ ರೂಪದಲ್ಲಿ ನೀಡಿದ್ದಾರೆ. ಸುಮಾರು 316 ಕೀರ್ತನೆಗಳು ಹಾಗೂ ಇನ್ನಿತರ ಸಾಹಿತ್ಯ ಮಾತ್ರ ಲಭ್ಯವಾಗಿರುವುದನ್ನು ಕಾಣಬಹುದಾಗಿದೆ. ಅವರ ಐದು ಮುಖ್ಯ  ಕಾವ್ಯಕೃತಿಗಳು ಇಂತಿವೆ:

ಮೋಹನತರಂಗಿಣಿ

ನಳಚರಿತ್ರೆ

ರಾಮಧಾನ್ಯ ಚರಿತೆ

ಹರಿಭಕ್ತಿಸಾರ

ನೃಸಿಂಹಸ್ತವ (ಉಪಲಬ್ದವಿಲ್ಲ)

ಮೋಹನತರಂಗಿಣಿ

ಮೋಹನತರಂಗಿಣಿಯು 42 ಸಂಧಿಗಳಿಂದ ಕೂಡಿದ್ದು ಸಾಂಗತ್ಯದಲ್ಲಿ ರಚಿತವಾಗಿರುವ 2798 ಪದ್ಯಗಳಿವೆ. ಮೋಹನತರಂಗಿಣಿಯಲ್ಲಿ ಕನಕದಾಸರು ಕೃಷ್ಣಚರಿತ್ರೆಯನ್ನು ಹೇಳುತ್ತಾ ತಮ್ಮ ಅಧಿರಾಜ ಕೃಷ್ಣದೇವರಾಯನನ್ನೇ ಕೃಷ್ಣನಿಗೆ ಹೋಲಿಸುತ್ತಾರೆ. ಅವರ ದ್ವಾರಕಾಪುರಿ ಸ್ವಯಂ ವಿಜಯನಗರವೇ ಆಗಿರುವುದು ಇತಿಹಾಸದಿಂದ ತಿಳಿದು ಬರುತ್ತದೆ. ಮೋಹನತರಂಗಿಣಿ ಅಥವಾ ಕೃಷ್ಣಚರಿತೆ ಎಂಬ ಈ ಕಾವ್ಯದಲ್ಲಿ ಕನಕದಾಸರ ಸಮಕಾಲೀನ ಜೀವನ ಚಿತ್ರಗಳು ಹಾಗೂ ಪೌರಾಣಿಕ ಕಥೆಗಳು ಅಚ್ಚಗನ್ನಡದಲ್ಲಿ ನಿರೂಪಿತವಾಗಿವೆ. ದಣ್ಣಾಯಕನಾಗಿ ಕನಕ ಆಗಾಗ್ಗೆ ರಾಜಧಾನಿ ವಿಜಯನಗರಕ್ಕೆ ಹೋಗಬೇಕಾಗಿತ್ತು. ವಿಜಯನಗರ ಸಾಮ್ರಾಜ್ಯದ ರಾಜವೈಭವ, ರಾಜಸಭೆ, ರಾಜಪರಿವಾರದ ಸರಸ ಸುಮ್ಮಾನ, ಶೃಂಗಾರ ಜೀವನ, ಜಲಕ್ರೀಡೆ, ಓಕುಳಿಯಾಟ, ನವರಾತ್ರಿ, ವಿಜಯನಗರದ ಪುರರಚನೆ, ಉದ್ಯಾನವನ, ಪ್ರಜೆಗಳ ವೇಷಭೂಷಣ, ರಾಜ್ಯದ ಯುದ್ಧ ವಿಧಾನ ಇತ್ಯಾದಿಗಳು ಅವನ ಮನಸೂರೆಗೊಂಡಿದ್ದವು. ಕವಿ ಮನಸಿನ ಕನಕ ತನ್ನ ಅನುಭವವನ್ನೆಲ್ಲ ಬರಹ ರೂಪಕ್ಕೆ ತಂದ. ಆ ಬರಹವೇ ಇಂದು ನಮಗೆ ಲಭ್ಯವಿರುವ ಮೋಹನತರಂಗಿಣಿ. ಕನಕನ ಯೌವನ ಕಾಲದಲ್ಲಿ ರಚಿತವಾದ ತರಂಗಿಣಿಯ ಒಡಲಲ್ಲಿ ಯುದ್ಧದ ವರ್ಣನೆಗಳು ಹೆಚ್ಚೆನ್ನಬಹುದು. ಏಕೆಂದರೆ ಕನಕ ಸ್ವತಃ ಕಲಿಯಾಗಿದ್ದವನೇ ತಾನೇ? ಹಂಪಿಯ ಪತನವನ್ನು (೧೫೬೫) ಸಹ ಕನಕ ನೋಡಿದ್ದರು. ಶಂಬರಾಸುರ ವಧೆ, ಬಾಣಾಸುರ ವಧೆ, ಹರಿಹರ ಯುದ್ಧ ಹೀಗೆ ವೀರರಸ, ರೌದ್ರರಸ ಕಾವ್ಯದಲ್ಲಿ ಮೇಳೈಸಿವೆ.

ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ

ತೊರೆದು ಜೀವಿಸಬಹುದೆ

ಹರಿ ನಿನ್ನ ಚರಣಗಳ‌

ಬರಿದೇ ಮಾತೇಕಿನ್ನೂ

ಅರಿತು ಪೇಳುವೆನಯ್ಯ… ||ಪ||

ತಾಯಿ ತಂದೆಯ ಬಿಟ್ಟು

ತಪವ ಮಾಡಲುಬಹುದು

ದಾಯಾದಿ ಬಂಧುಗಳ ಬಿಡಲುಬಹುದು

ರಾಯ ತಾ ಮುನಿದರೆ

ರಾಜ್ಯವನೆ ಬಿಡಬಹುದು

ಕಾಯಜಾ ಪಿತನಿನ್ನ ಅಡಿಯ ಬಿಡಲಾಗದು… ||೧||

ಒಡಲು ಹಸಿದರೆ ಮತ್ತೆ

ಅನ್ನವನೆ ಬಿಡಬಹುದು

ಪಡೆದ ಕ್ಷೇತ್ರವ ಬಿಟ್ಟು ಹೊರಡಬಹುದು

ಮಡದಿ ಮಕ್ಕಳ ಕಡೆಗೆ

ತೊಲಗಿಸಿಯೆ ಬಿಡಬಹುದು

ಕಡಲೊಡೆಯ ನಿನ್ನಡಿಯ ಘಳಿಗೆ ಬಿಡಲಾಗದು…||೨||

ಪ್ರಾಣವನು ಪರರು

ಬೇಡಿದರೆತ್ತಿ ಕೊಡಬಹುದು

ಮಾನಾಭಿಮಾನವ ತಗ್ಗಿಸಲುಬಹುದು

ಪ್ರಾಣದಾಯಕಾನಾದ ಆದಿಕೇಶವರಾಯ‌

ಜಾಣ ಶ್ರೀ ಕೃಷ್ಣ ನಿನ್ನಡಿಯ‌ ಬಿಡಲಾಗದು…

ವರದಿ – ಸೋಮನಾಥ ಹೆಚ್ ಎಮ್

Leave a Reply

Your email address will not be published. Required fields are marked *