ಅರ್ಥಪೂರ್ಣವಾಗಿ ಚಿಟಗುಪ್ಪ ತಾಲೂಕು ಪ್ರಥಮ ಕರ್ನಾಟಕ ಜಾನಪದ ಸಮ್ಮೇಳನ ಆಚರಣೆ.

Spread the love

ಅರ್ಥಪೂರ್ಣವಾಗಿ ಚಿಟಗುಪ್ಪ ತಾಲೂಕು ಪ್ರಥಮ ಕರ್ನಾಟಕ ಜಾನಪದ ಸಮ್ಮೇಳನ ಆಚರಣೆ.

ಚಿಟಗುಪ್ಪ : ಸಂತ ಶಿರೋಮಣಿ ಮಡಿವಾಳೇಶ್ವರ ಜಾತ್ರಾ ಮಹೋತ್ಸವ ಹಾಗೂ ಚಿಟಗುಪ್ಪ ತಾಲೂಕು ಪ್ರಥಮ ಜಾನಪದ ಸಮ್ಮೇಳನ ಅಂಗವಾಗಿ ಆಯೋಜಿಸಿದ್ದ ಪ್ರತಿಕಾ ಗೋಷ್ಠಿ ಉದ್ದೇಶಿಸಿ ಕಜಾಪ ಜಿಲ್ಲಾಧ್ಯಕ್ಷರಾದ ಡಾ. ಜಗನ್ನಾಥ ಹೆಬ್ಬಾಳೆ ಯವರು ಮಾತನಾಡಿ ಹಳ್ಳಿ ಸೊಗಡಿನ ಜಾನಪದ ಸಂಸ್ಕೃತಿ ಉಳಿಸಲು, ಬೆಳೆಸಲು ಕರ್ನಾಟಕ ಜಾನಪದ ಪರಿಷತ್ತು ಅವಿರತವಾಗಿ ಶ್ರಮಿಸುತ್ತಿದೆ.ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ. ಕಲೆ, ಸಾಹಿತ್ಯ, ನೃತ್ಯ ,ಡೊಳ್ಳು ಕುಣಿತ, ಕಂಸಾಳೆ, ಕರಡಿ ಮಜಲು, ವೀರಗಾಸೆ, ನಂದಿಕೋಲು ಕುಣಿತ,  ನಾಟಕ ಬಯಲಾಟ, ದೊಡ್ಡಾಟ, ಶ್ರೀ ಕೃಷ್ಣಪಾರಿಜಾತ, ಯಕ್ಷಗಾನ ಮುಂತಾದ ವಿವಿಧ ಪ್ರಕಾರಗಳನ್ನು ನಮ್ಮ ಕನ್ನಡ ಜಾನಪದ ಸಂಸ್ಕೃತಿಯಲ್ಲಿ ಕಾಣಬಹುದು. ಕನ್ನಡ ಜಾನಪದ ಸಂಸ್ಕೃತಿಯು ಒಂದು ಭಾಗವಾದ ಜಾನಪದ ಗೀತೆಗಳು ಅತ್ಯಂತ ವೈವಿಧ್ಯಮಯವಾಗಿ ಕನ್ನಡನಾಡಿನ ವಿವಿಧ ಪ್ರದೇಶಗಳ ಪ್ರಾದೇಶಿಕ ಸೊಗಡುಗಳನ್ನು ನಮ್ಮ ಮುಂದಿನ ಪೀಳಿಗೆಗೆ ಜೋಪಾನ ಮಾಡಿವೆ ಎಂದರೆ ತಪ್ಪಲ್ಲ ಎಂದರು. ಸಮ್ಮೇಳನದ ವಿವರಗಳನ್ನು ನೀಡುತ್ತಾ ಫೆಬ್ರವರಿ 21 ರಂದು ಬೆಳಗ್ಗೆ 8 ಗಂಟೆಗೆ ಪೂರ್ಣಕುಂಭ ದೊಂದಿಗೆ ಸರ್ವಾಧ್ಯಕ್ಷರ ಮೆರವಣಿಗೆ ಅಯ್ಯಪ್ಪಸ್ವಾಮಿ ಮಠದಿಂದ ಮಡಿವಾಳೇಶ್ವರ ಕಲ್ಯಾಣ ಮಂಟಪದವರೆಗೆ ಸಾಗಲಿದೆ. 11-00 ಗಂಟೆಗೆ ಸಮ್ಮೇಳನದ ಉದ್ಘಾಟನಾ ಸಮಾರಂಭ ನಡೆಯಲಿದೆ, ಮಧ್ಯಾಹ್ನ 2 -00 ಗಂಟೆಗೆ ಚಿಟಗುಪ್ಪ ತಾಲೂಕು ಜಾನಪದ ಸಾಹಿತ್ಯದ ಕುರಿತ ಗೋಷ್ಠಿ ಜರುಗಲಿದೆ. ಸಾಯಂಕಾಲ 5-00 ಗಂಟೆಗೆ ಜಾನಪದ ಕಲಾ ಪ್ರದರ್ಶನಗಳು ನಡೆಯಲಿವೆ. ಈ ಮಧ್ಯದಲ್ಲಿ ರಾಣಿ ಸತ್ಯಮೂರ್ತಿ ಕಲಾ, ಸವಿತಾ ಘೋರ್ಪಡೆ ಕಲಾ ತಂಡಗಳಿಂದ ಕಲಾ ಪ್ರದರ್ಶನ ಮತ್ತು ದಿನಾಂಕ 22 ರಂದು ಮಧ್ಯಾಹ್ನ 2 ಗಂಟೆಗೆ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಲಿದೆ ಎಂದರು. ಪರಿಷತ್ತಿನ ತಾಲೂಕು ಅಧ್ಯಕ್ಷ ಸಂಗಮೇಶ ಎನ್ ಜವಾದಿ ಯವರು ಮಾತನಾಡಿ ಇಂದಿನ ಪಾಶ್ಚಾತ್ಯ ಶೈಲಿಯ ಸಂಗೀತದ ಮಧ್ಯೆ ಜಾನಪದ ಗೀತೆಗಳು ತನ್ನ ಹಿಂದಿನ ವೈಭವವನ್ನು ಸ್ವಲ್ಪಮಟ್ಟಿಗೆ ಕಳೆದುಕೊಂಡಿವೆ ಎಂದೆನಿಸಿದರೂ ತನ್ನ ಮೂಲನೆಲೆಯಾದ ಹಳ್ಳಿಗಳಲ್ಲಿ ಇನ್ನೂ ತನ್ನ ನೆಲೆಯನ್ನು ಬದ್ರವಾಗಿ ಊಳಿಸಿಕೊಂಡಿರುವುದು ಸಮಾಧಾನ ತರುವ ಸಂಗತಿಯಾಗಿದೆ. ಕಂಸಾಳೆ ಪದ, ಗೀಗಿಪದ, ಕೋಲಾಟದ ಪದ, ರಾಗಿ ಬೀಸೋ ಪದ, ಸುಗ್ಗಿ ಹಾಡುಗಳು, ಹೀಗೆ ಇನ್ನೂ ಅನೇಕ ವಿವಿಧ ಬಗೆಯ ಜಾನಪದ ಗೀತೆಗಳು ಆಯಾ ಪ್ರದೇಶದ ಜನರ ದೈನಂದಿನ ಚಟುವಟಿಕೆಗಳನ್ನು, ಕೌಟುಂಬಿಕ ಜೀವನವನ್ನು, ಸಂಬಂಧಗಳನ್ನು, ದೇವರುಗಳನ್ನು ಹಾಗೂ ಧಾರ್ಮಿಕ ಆಚರಣೆಗಳನ್ನು ನಮ್ಮ ಮುಂದೆ ತೆರೆದಿಡುತ್ತವೆ. ಈ ಜಾನಪದ ಗೀತೆಗಳನ್ನು ಸೃಷ್ಟಿಸಿದವರು ಯಾರೆಂದು ಹೇಳುವುದಕ್ಕೆ ಸಾಧ್ಯವಿಲ್ಲ. ಇವು ಹಳ್ಳಿಯು ಸಾಮಾನ್ಯ ಜನರ ನಡುವೆ ಹುಟ್ಟಿ ಬಾಯಿಂದ ಬಾಯಿಗೆ ಹರಿದು ಬಂದಿರುವ ಸಿರಿನುಡಿ ಎನ್ನಬಹುದು. ಈ ನಿಟ್ಟಿನಲ್ಲಿ ಜಾನಪದ ಸಂಸ್ಕೃತಿ ಉಳಿಸಲು ಮತ್ತು ಬೆಳೆಸಲು ಸಮ್ಮೇಳನ ಆಯೋಜಿಸಲಾಗಿದೆ. ಕಾರಣ ಹೆಚ್ಚಿನ ರೀತಿಯಲ್ಲಿ ಪ್ರಚಾರ ಮಾಡುವ ಕಾರ್ಯ ಮಾಧ್ಯಮಗಳ ಮೇಲಿದೆ ಎಂದರು. ಕಜಾಪ ಬೀದರ ತಾಲೂಕು ಅಧ್ಯಕ್ಷ ಎಸ್ ಬಿ ಕೂಚಬಾಳ್ ಸ್ವಾಗತಿಸಿದರು. ಪರಿಷತ್ತಿನ ಗೌರವಾಧ್ಯಕ್ಷ ಮಾಹಾರುದ್ರಪ್ಪ ಅಣದೂರ ವಂದಿಸಿದರು. ಗೋಷ್ಠಿಯಲ್ಲಿ ಮಡಿವಾಳೇಶ್ವರ ಗವಿ ಸಮಿತಿಯ ಅಧ್ಯಕ್ಷ ರವಿಚಂದ್ರ ಶಿವಪೂಜಿ, ಜಿಲ್ಲಾ ಕಜಾಪ ಪ್ರಧಾನ ಕಾರ್ಯದರ್ಶಿ ನಿಜಲಿಂಗಪ್ಪ ತಗಾರೆ, ವೀರಭದ್ರಪ್ಪ ಉಪ್ಪಿನ, ವಿಜಯಕುಮಾರ ಚಿಟಗುಪ್ಪಕರ್, ಸಂಗಮೇಶ ಕೋರವಾರ, ಅಮರನಾಥ ಹಿರೇಮಠ, ಮಹೇಶ ಮಾಹಾಜನ, ಸಚೀನ ಮಠಪತಿ, ರವಿ ನಿಂಗಣ್ಣಿ, ಅಮಿತ್ ಹೊಸದೊಡ್ಡಿ ಸೇರಿದಂತೆ ಪರಿಷತ್ತಿನ ಹಾಗೂ ಮಡಿವಾಳೇಶ್ವರ ಗವಿ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. **** ಸಂತ ಶಿರೋಮಣಿ ಮಡಿವಾಳೇಶ್ವರ ಶಿವಶರಣ ಜಾತ್ರಾ ಮಹೋತ್ಸವದ ಜೊತೆಗೆ ಚಿಟಗುಪ್ಪ ತಾಲೂಕು ಪ್ರಥಮ ಜಾನಪದ ಸಮ್ಮೇಳನ ಹಮ್ಮಿಕೊಂಡಿದ್ದೇವೆ. ಅತ್ಯಂತ ಅರ್ಥಪೂರ್ಣ, ಶಿಸ್ತುಬದ್ಧವಾಗಿ ಆಚರಿಸೋಣ, ಇದಕ್ಕೆ ಎಲ್ಲರ ಸಹಕಾರ ಅಗತ್ಯ.

ವರದಿ ಸಂಗಮೇಶ ಎನ್ ಜವಾದಿ.

Leave a Reply

Your email address will not be published. Required fields are marked *