ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿಂದು ಪ್ರಾಥಮಿಕ ವಿಭಾಗ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಏಳನೇ ತರಗತಿ ವಿದ್ಯಾರ್ಥಿಗಳಿಂದ ಅದ್ದೂರಿ ಬೀಳ್ಕೊಡುವ ಸಮಾರಂಭ,
ಕುಷ್ಟಗಿ ತಾಲೂಕಿನ ತಾವರಗೇರಾ ಪಟಟ್ಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರಾಥಮಿಕ ವಿಭಾಗ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಏಳನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಇಂದು ಅದ್ದೂರಿಯಾಗಿ ಜರುಗಿತು. ಶಾಲಾ ಮಕ್ಕಳಿಂದ ಮಹಾ ಸರಸ್ವತಿ ಪೂಜಾ ಕಾರ್ಯಕ್ರಮ ಜರುಗಿತು, ತದ ನಂತರ ಏಳನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಕಾರ್ಯಕ್ರಮದಲ್ಲಿ ಎಲ್.ಕೆ.ಜಿ.ಯು.ಕೆ.ಜಿ. ಮಕ್ಕಳಿಂದ ಹಿಡಿದು 7 ತರಗತಿಯ ಮಕ್ಕಳವರೆಗೂ ಸಾಂಸ್ಕೃತಿಕ ಕಾರ್ಯಕ್ರಮವು ಅದ್ದೂರಿಯಾಗಿ ಜರುಗಿತು. ಮಕ್ಕಳ ಪಾಲಕರು ಮಧ್ಯಾಹ್ನ 3:00 ಶಾಲೆಗೆ ಹಾಜರಾಗಿ ಮಕ್ಕಳನ್ನು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ತಯಾರಿಸಲು ಪಾಲಕರು ಹರ ಸಹಾಸಪಟ್ಟರು. ಈ ಕಾರ್ಯಕ್ರಮದ ಕುರಿತು ಮುಖ್ಯೋಪಾಧ್ಯಯರು ಅರಿವಿನ ಮೂಲಕ ತಾವು ಸಂಪಾದಿಸಿದ ಜ್ಞಾನವನ್ನು ಸಮಾಜದ ಒಳಿತಿಗೆ ಬಳಕೆ ಮಾಡಬೇಕು.ಎಂದು ಸರಕಾರಿ ಮುಖ್ಯೋಪಾಧ್ಯರು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಶಿಸ್ತು, ಸಮಯ ಪ್ರಜ್ಞೆ ಮತ್ತು ಜೀವನದಲ್ಲಿ ಯಶಸ್ಸುಗಳಿಸಲು ಆತ್ಮವಿಶ್ವಾಸ ಬಹಳ ಪ್ರಾಮುಖ್ಯವೆಂದು ವಿದ್ಯಾರ್ಥಿಗಳಿಗೆ ಕೆಲವು ನಿದರ್ಶನಗಳ ಮೂಲಕ ತಮ್ಮದೇ ಜೀವನದ ಕೆಲವೊಂದು ಅನುಭವದ ಘಟನೆಗಳನ್ನು ವಿವರಿಸಿ ಶುಭನುಡಿಗಳನ್ನಾಡಿದರು. ವಿದ್ಯಾರ್ಥಿಗಳು ತಮಗೆ ಸಿಗುವ ಅವಕಾಶಗಳನ್ನು ಶ್ರದ್ಧೆಯಿಂದ ಬಳಸಿಕೊಂಡು ಜೀವನದಲ್ಲಿ ಉನ್ನತ ಮಟ್ಟಕ್ಕೇರಲಿ ಮತ್ತು ಸಮಾಜ ಮತ್ತು ರಾಷ್ಟ್ರಕ್ಕೆ ಉತ್ತಮ ಕೊಡುಗೆಯಾಗಿ ಹೊರಹೊಮ್ಮಲಿ ಎಂದು ಹಾರೈಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಶಾಲ ಶಿಕ್ಷಕರ ವೃಂದದವರು ಹಾಗೂ ಶಾಲಾ ಮಕ್ಕಳ ಪಾಲಕರು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಅವರ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸುತ್ತಾ, ಜ್ಞಾನ ಸಂಪಾದನೆಗೆ ಶ್ರಮಿಸಿದಷ್ಟೂ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಉಜ್ವಲ ಭವಿಷ್ಯ ಹೊಂದಲು ನಾಂದಿಯಾಗುತ್ತದೆ. ಇದರಿಂದ ಇತರರ ಬದುಕು, ಬವಣೆಗೆ ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಿ ಎಂದು ಹೇಳಿದರು.ಒಟ್ಟಿನಲ್ಲಿ ಈ ಕಾರ್ಯಕ್ರಮವು ನೋಡುಗರ ಕಣ್ಮನ ಸಳೆಯಿತು.
ವರದಿ – ಸಂಪಾದಕೀಯಾ