ಮಾನ್ಯ ಜಿಲ್ಲಾಧಿಕಾರಿಗಳ ಸೂಚನೆಯಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕೊಪ್ಪಳ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಬಿಪಿಎಲ್, ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್ನಲ್ಲಿ ನಮೂದಿಸಿರುವಂತೆ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ರೂ. ಗಳನ್ನು ಡಿಬಿಟಿ ಮೂಲಕ ನೀಡಲಾಗುತ್ತದೆ. ಕುಟುಂಬದ ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ಸಮಗ್ರ ಅಭಿವೃದ್ಧಿಯನ್ನು ಖಚಿತ ಪಡಿಸಬಹುದಾಗಿದೆ ಹಾಗೂ ಕುಟುಂಬದ ಅಭಿವೃದ್ಧಿ ಸಮಾಜದ ಅಭಿವೃದ್ಧಿಗೆ ಬುನಾದಿಯಾಗಿರುತ್ತದೆ.
ಆದ್ದರಿಂದ ಈ ಯೋಜನೆಯು ಮಹಿಳಾ ಸಬಲೀಕರಣ ಹಾಗೂ ಸ್ವಾಭಿಮಾನದ ಹೆಗ್ಗುರುತಾಗಲಿದೆ. ಸಾರ್ವಜನಿಕ ಅರ್ಹ ಯಜಮಾನಿ ಪಡಿತರ ಚೀಟಿಯ ಫಲಾನುಭವಿಗಳು ಜುಲೈ 20ರಿಂದ ಯೋಜನೆಯ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅರ್ಹ ಅರ್ಜಿದಾರರಾದ ಯಜಮಾನಿಯ ರೇಷನ್ ಕಾರ್ಡ, ಅರ್ಜಿದಾರರ ಮತ್ತು ಪತಿಯ ಆಧಾರ್ ಕಾರ್ಡ್, ರೇಷನ್ ಕಾರ್ಡಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್ ಖಾತೆಯ ಪಾಸ್ಬುಕ್ ವಿವರಗಳು ಅಗತ್ಯವಾಗಿರುತ್ತದೆ. ಸಾರ್ವಜನಿಕರು ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ಯಾವುದಾದರೂ ದೂರು, ಸಮಸ್ಯೆ ಇದ್ದಲ್ಲಿ ಸರ್ಕಾರವು ಸ್ಥಾಪಿಸಿದ ಸಹಾಯವಾಣಿ ಸಂಖ್ಯೆ 1902 ಗೆ ಕರೆ ಮಾಡಿ ಸಹಾಯವನ್ನು ಪಡೆಯಬಹುದು ಹಾಗೂ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆಗೆ ವೇಳಾ ಪಟ್ಟಿಯ ಎಸ್.ಎಂ.ಎಸ್ ಬರದೇ ಇದ್ದಲ್ಲಿ 8147500500 or 8277000555 ಈ ಸಂಖ್ಯೆಗೆ ಫಲಾನುಭವಿಗಳ ಪಡಿತರ ಚೀಟಿಯ ಸಂಖ್ಯೆಯನ್ನು ಎಸ್.ಎಂ.ಎಸ್ ಮಾಡುವ ಮೂಲಕ ಪರಿಹಾರ ಪಡೆಯಬಹುದಾಗಿದೆ. ಅಲ್ಲದೇ ಸೇವಾಸಿಂಧು ಪೋರ್ಟಲ್ನಲ್ಲಿ ಫಲಾನುಭವಿಗಳ ಪಡಿತರ ಚೀಟಿ ಸಂಖ್ಯೆ ನಮೂದಿಸಿ ವೇಳಾ ಪಟ್ಟಿಯ ಮಾಹಿತಿಯನ್ನು ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಿದ ನಂತರ ಎಸ್.ಎಂ.ಎಸ್ ಮೂಲಕ ಹಾಗೂ ಸೇವಾಸಿಂಧು ಪೋರ್ಟಲ್ ಮೂಲಕ ಅಟೋ ಜನರೇಟೆಡ್ ಸ್ವೀಕೃತಿಗಳನ್ನು ಪಡೆಯಬಹುದಾಗಿದೆ. ಅರ್ಹ ಗ್ರಾಮೀಣ ಪ್ರದೇಶದ ಯಜಮಾನಿ ಪಡಿತರ ಚೀಟಿದಾರರಿಗೆ ಹತ್ತಿರವಿರುವ ಗ್ರಾಮ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಮಾಡಿಕೊಳ್ಳಲು ಮ್ಯಾಪಿಂಗ್ ಆಗಿದ್ದು, ಈ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳಲು ದಿನಾಂಕ ಹಾಗೂ ಸಮಯವನ್ನು ಪಡಿತರ ಚೀಟಿಗೆ ಜೋಡಿಸಿರುವ ಮೊಬೈಲ್ ಸಂಖ್ಯೆಗೆ ವೇಳಾಪಟ್ಟಿಯು ಎಸ್.ಎಂ.ಎಸ್ ಮೂಲಕ ಬರುವುದು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕರ್ನಾಟಕ ಒನ್, ನಗರಸಭೆ, ಪುರಸಭೆ ಅಥವಾ ಪಟ್ಟಣ ಪಂಚಾಯತಿಯ ಕಚೇರಿಗಳಲ್ಲಿ, ತಹಶೀಲ್ದಾರ, ನಾಡ ಕಚೇರಿ ಅಥವಾ ತಾಲೂಕ ಪಂಚಾಯತಿ ಕಚೇರಿ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಲ್ಲಿ ನೋಂದಣಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದ್ದು, ನಗರ ವ್ಯಾಪ್ತಿಯ ಫಲಾನುಭವಿಗಳು ಇಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಪ್ರತಿ ನೋಂದಣಿ ಕೇಂದ್ರದಲ್ಲಿ ಪ್ರತಿದಿನ 60 ಫಲಾನುಭವಿಗಳಿಗೆ ನೋಂದಣಿ ಮಾಡಲು ಅವಕಾಶವಿದ್ದು, (ಬೆಳಿಗ್ಗೆ-30 ಮತ್ತು ಮಧ್ಯಾಹ್ನ-30) ಅರ್ಜಿ ವೇಳಾ ಪಟ್ಟಿ ಪ್ರಕಾರ ಆ ದಿನದಂದು ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇರುವ ಫಲಾನುಭವಿಗಳು ಅದೇ ದಿನ ಅಥವಾ ಯಾವುದೇ ಕೆಲಸದ ದಿನ ಸಂಜೆ 5ಗಂಟೆಯ ನಂತರ ಅರ್ಜಿ ಸಲ್ಲಿಸಬಹುದಾಗಿದೆ. ಸಹಾಯವಾಣಿ ಸ್ಥಾಪನೆ: ಮಂಜೂರಾತಿಯ ನಂತರ ಡಿಬಿಟಿ ಮೂಲಕ ನೇರ ನಗದು ವರ್ಗಾವಣೆ ಸೌಲಭ್ಯ ನೀಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಉಪನಿರ್ದೇಶಕರ ಕಚೇರಿ ಜಿಲ್ಲಾಡಳಿತ ಭವನ ಕೊಪ್ಪಳ ಹಾಗೂ ಜಿಲ್ಲೆಯ 5 ಯೋಜನೆಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಲ್ಲಿ ಸಾರ್ವಜನಿಕರ ದೂರುಗಳನ್ನು ಸ್ವೀಕರಿಸಲು ಸಹಾಯವಾಣಿ ಸ್ಥಾಪಿಸಿದ್ದು, ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದು.
ಶುಲ್ಕ ಇಲ್ಲ: ಅರ್ಜಿ ಸಲ್ಲಿಕೆಯು ಸಂಪೂರ್ಣ ಉಚಿತವಾಗಿದ್ದು, ಯಾವುದೇ ಕೊನೆಯ ದಿನಾಂಕ ಹಾಗೂ ಯಾವುದೇ ಶುಲ್ಕ ಇರುವುದಿಲ್ಲ. ಅರ್ಜಿ ನೋಂದಣಿ ಮಾಡುವ ಕೇಂದ್ರದವರಿಗೆ ಸರ್ಕಾರವೇ ಪ್ರತಿ ಅರ್ಜಿಗೆ ರೂ.12 ನೀಡುತ್ತದೆ.
ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 3,56,566 ಪಡಿತರ ಚೀಟಿಯನ್ನು ಹೊಂದಿದ ಫಲಾನುಭವಿಗಳಿದ್ದು, ಅದರಲ್ಲಿ 37,573 ಎ.ಎ.ವೈ ಕಾರ್ಡ್, 27,284 ಎ.ಪಿ.ಎಲ್ ಕಾರ್ಡ್ ಹಾಗೂ 2,91,699 ಬಿ.ಪಿ.ಎಲ್ ಕಾರ್ಡ್ ಹೊಂದಿದವರಾಗಿದ್ದಾರೆ. ಸಹಾಯವಾಣಿ ವಿವರ: ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಹಾಯವಾಣಿ ಆರಂಭಿಸಲಾಗಿದೆ. ಉಪನಿರ್ದೇಶಕರ ಕಚೇರಿ ಸ.ವಾ.ಸಂ: 9110481302, 9738758256, 9902061530. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಾದ ಕೊಪ್ಪಳ: 9113284639, ಗಂಗಾವತಿ: 7259351515 ,ಕುಷ್ಟಗಿ: 7204861203, ಯಲಬುರ್ಗಾ: 8105729581 ಮತ್ತು ಕನಕಗಿರಿ ಕಚೇರಿ ಸಂ: 9902651753ಗೆ ಸಮಪರ್ಕಿಸಬಹುದು. ಅಥವಾ ಹೆಚ್ಚಿನ ಮಾಹಿತಿಗಾಗಿ ಹತ್ತಿರವಿರುವ ಗ್ರಾಮ ಒನ್ ಕೇಂದ್ರ, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಕೇಂದ್ರ, ನಗರ ಸ್ಥಳೀಯ ಸಂಸ್ಥೆಗಳು ಸ್ಥಾಪಿಸಿದ ಕೇಂದ್ರಗಳು, ಅಂಗನವಾಡಿ ಕೇಂದ್ರ ಹಾಗೂ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರ ಕಚೇರಿ, ತಾಲೂಕ ಪಂಚಾಯತ್ ಕಚೇರಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಯ ಕಚೇರಿಗಳಲ್ಲಿ ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಲ್ಲಿ ಸಂಪರ್ಕಿಸಬಹುದು. ಎಂದು ತಾವರಗೇರಾ ಪಟ್ಟಣ ಫಂಚಾಯತಿ ಮುಖ್ಯಾಧಿಕಾರಿಗಳಾದ ನಭೀಸಾಬ ಖುದ್ದಾನರವರು ಮಾದ್ಯಮದವರೊಂದಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯ ಅಡಿ ಆನ್ ಲೈನ್ ಮೂಲಕ ಅರ್ಜಿಸಲ್ಲಿಸಲು ತಾವರಗೇರಾ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಗೃಹ ಲಕ್ಷ್ಮಿ ಯೋನೆಯಲ್ಲಿ ಅರ್ಜಿಸಲ್ಲಿಸಲು ಪಟ್ಟಣದ ಪಾತಾಳಲಿಂಗೇಶ್ವರ ಗುಡಿ (ಪಾತಪ್ಪನ ಕಟ್ಟಿ)ಯ ಹತ್ತಿರ ಇರುವ ಪಟ್ಟಣ ಪಂಚಾಯತನ ವಾಣಿಜ್ಯ ಮಳಿಗೆಯಲ್ಲಿ ಹಾಗೂ ಡಾ||ಬಿ.ಆರ್.ಅಂಬೇಡ್ಕರ್ ವೃತ್ತದ ಹತ್ತಿರ(ನಾಡ ತಹಶಿಲ್ದಾರ ಕಛೇರಿಯ ಕಟ್ಟದ) ಮಳಿಗೆಯಲ್ಲಿ ಅರ್ಜಿಸಲ್ಲಿಸಲು ದಿನಾಂಕ: 19/07/2023 ರಂದು ಕೌಂಟರ್ ತೆರೆಯಲಾಗಿದೆ ಅರ್ಜಿಸಲ್ಲಿಸುವವರು ಇದರ ಸದುಪಯೊಗ ಪಡೆದುಕೊಳ್ಳಬೇಕೆಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳಾದ ನಬೀಸಾಬ ಖುದ್ದಾನರವರು ಪ್ರಕಟಣೆಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂ.ಯ ಸರ್ವ ಸಿಬ್ಬಂದಿ ವರ್ಗದವರು ಹಾಗೂ ನಾಡ ಕಚೇರಿಯ ಸಿಬಂದಿ ವರ್ಗದವರು ಪಾಲುಗೊಂಡಿದ್ದರು.
ವರದಿ-ಸಂಪಾದಕೀಯಾ