ವಿಜಯನಗರ ಜಿಲ್ಲೆ ಕೂಡ್ಲಿಗಿ: ಪಟ್ಟಣದ ಎಸ್ಎವ್ಹಿಟಿ ಕಾಲೇಜ್ ನಲ್ಲಿ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ವಿಜಯನಗರ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ, ವಿಜಯನಗರ ಎಸ್ ಎ ವಿ ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ. ಕೂಡ್ಲಿಗಿ ಏನ್ ಎಸ್ ಎಸ್ ಎ ಮತ್ತು ಬಿ ಘಟಕ ಮತ್ತು ಸ್ವಾಮಿ ವಿವೇಕಾನಂದ ರಕ್ತ ಬಂಡಾರ, ಹಾಗೂ ಆರೋಹಣ ಸೊಸೈಟಿ ಫಾರ್ ಸೋಶಿಯಲ್ ಡೆವಲಪ್ಮೆಂಟ್ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಜರುಗಿತು. ಶಿಬಿರ ಉದ್ಘಾಟನೆ ಕಾರ್ಯಕ್ರಮದ ಪ್ರಾರ್ಥನೆಯನ್ನು, ಕುಮಾರಿ ದಿವ್ಯ ನೆರವೇರಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರನ್ನು, ಕುಮಾರಿ ಪ್ರಿಯದರ್ಶಿನಿ ಸ್ವಾಗತಿಸಿದರು. ಕಾರ್ಯಕ್ರಮದ ಉದ್ಘಾಟಿಸಿದ ಉಪನ್ಯಾಸಕ ಮಂಜುನಾಥ ನೆರವೇರಿಸಿ ಮಾತನಾಡಿದರು, ಎಲ್ಲಾ ದಾನಗಳಲ್ಲಿ ರಕ್ತದಾನ ಶ್ರೇಷ್ಠ ದಾನ ವಾಗಿದ್ದು. ಇದರಿಂದ ನಾಲ್ಕು ಜನಗಳ ಜೀವ ಉಳಿಸುವ ಮಹತ್ತರವಾದ ಕಾರ್ಯ ಆಗುತ್ತೆ, ಹಾಗಾಗಿ ನಾವೆಲ್ಲರೂ ಸ್ವಯಂ ಪ್ರೇರಣೆಯಿಂದ ರಕ್ತದಾನವನ್ನು ಮಾಡೋಣ ಎಂದು ನೆರದವರಿಗೆ ಪ್ರೇರಣೆ ನೀಡಿದರು. ಉಪನ್ಯಾಸಕ ಡಾ” ಉಮೇಶ್ ಸಾರ್ವಜನಿಕ ಆಸ್ಪತ್ರೆಯ ಐಸಿಟಿಸಿ ಆಪ್ತ ಸಮಾಲೋಚಕ, ಜಿಗೇನಹಳ್ಳಿ ಕೆ.ಪ್ರಶಾಂತ ಕುಮಾರ ಮಾತನಾಡಿ. ರಕ್ತದಾನದ ಮಹತ್ವದ ಕುರಿತು ಜಾಗ್ರತೆ ಮೂಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ, ಕಾಲೇಜಿನ ಪ್ರಾಂಶುಪಾಲರಾದ ಎನ್. ಕಲ್ಲಪ್ಪ ಮಾತನಾಡುತ್ತಾ, ಸರ್ವರೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ಹಾಗೆಯೆ ಇಂತಹ ಶ್ರೇಷ್ಠ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯುತ್ತಿರಲಿ ಎಂದು ಆಶಿಸಿದರು. ಉಪನ್ಯಾಸಕ ಗುರುಬಸವರಾಜ್, ನಿಂಗಪ್ಪ ಕಮತಿ, ಡಾಕ್ಟರ್ ಪ್ರಶಾಂತ್, ಕಾಲೇಜಿನ ಉಪನ್ಯಾಸಕ ವರ್ಗದವರು. ರಕ್ತ ಬಂಡಾರದ ಸಿಬ್ಬಂದಿಗಳು, ತಾಲೂಕು ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿಗಳಾದ ಬೋರಣ್ಣ,ಸೋಮಶೇಖರ್. ಆರೋಹಣ ಸ್ವಯಂ ಸೇವಾ ಸಂಸ್ಥೆಯ ಸಿಬ್ಬಂದಿಗಳು, ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕುಮಾರಿ ಕಾವ್ಯ ವಂದಿಸಿದರು, ಅಭಿಲಾಶ್ ನಿರೂಪಿಸಿದರು. ರಕ್ತದಾನ ಶಿಬಿರದಲ್ಲಿ 50ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು, ಸ್ವಯಂ ಪ್ರೇರಿತ ರಾಗಿ ರಕ್ತದಾನವನ್ನು ಮಾಡಿದರು. 250 ಕ್ಕೂ ಹೆಚ್ಚು ವಿದ್ಯಾರ್ಥಿಗಳು, ರಕ್ತದ ಗುಂಪು ಪರೀಕ್ಷೆ ಮಾಡಿಸಿ ಕೊಂಡರು.
ವರದಿ-✍️ ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ.