ದಿನದಿಂದ ದಿನಕ್ಕೆ ವಿಕೋಪಕ್ಕೆ ತಿರುಗಿದೆ. ಮಹಿಳೆಯರು ಮತ್ತು ಮಕ್ಕಳು ಒಳಗೊಂಡಂತೆ ನೂರಾರು ಜನರು ಬಲಿಯಾಗಿದ್ದಾರೆ. ಅವರ ಆಸ್ತಿಪಾಸ್ತಿಗಳನ್ನು ಲಪಟಾಯಿಸಲಾಗಿದೆ. ಮಣಿಪುರದ ಕುಕಿ ಸಮುದಾಯದ ಮಹಿಳೆಯರನ್ನು ಸಾರ್ವಜನಿಕವಾಗಿ ಬೆತ್ತಲೆಗೊಳಿಸಿ ಅತ್ಯಾಚಾರ ಎಸಗಿರುವುದು ಇಡೀ ನಾಗರಿಕ ಸಮಾಜ ತಲೆತೆಗ್ಗಿಸುವ ವಿಚಾರವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಬೇಟಿ ಬಚಾವೋ, ಬೇಟಿ ಪಡಾವೋ ಕೇವಲ ಘೊಷಣೆಗಳಾಗಿವೆ. ಘರ್ಷಣೆಯನ್ನು ನಿಯಂತ್ರಿಸಲು ವಿಫಲವಾಗಿರುವ ಮಣಿಪುರದ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕು. ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ರಾಯಣ್ಣ ಅಭಿಮಾನಿ ಗಣೇಶ್ ದಾವಣಗೆರೆ ಆಗ್ರಹಿಸಿದರು.
ವರದಿ- ಸಂಪಾದಕೀಯಾ