ಬೆಂಗಳೂರು: ಆ7, ಆಗಸ್ಟ್ 15 ರಂದು ಕಾಶ್ಮೀರದ ಕಾರ್ಗಿಲ್ ನಲ್ಲಿ ಸಲಾಮ್ ಸೋಲ್ಜರ್ಸ್ ಶೀರ್ಷಿಕೆಯಡಿಯಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರು ಹಮ್ಮಿಕೊಂಡಿರುವ ಜಾಗೃತಿ ಮ್ಯಾರಥಾನ್ ಓಟಕ್ಕೆ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪರವರು ಪೋಸ್ಟರ್ ಹಿಡಿದು ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು! ಕಳೆದ ಮೂರು ನಾಲ್ಕು ವರ್ಷಗಳಿಂದ ರಾಜ್ಯದ ಮತ್ತು ರಾಷ್ಟ್ರದ ಹಲವಾರು ಸಮಸ್ಯೆಗಳ ಬಗ್ಗೆ ವಿಭಿನ್ನವಾಗಿ ಜಾಗೃತಿ ಮೂಡಿಸುತ್ತಿರುವ ಮೋಹನ್ ಕುಮಾರ್ ದಾನಪ್ಪನವರ ಕಾರ್ಯ ಅಭಿನಂದನೀಯ,ರಾಜ್ಯದ ಯುವಕರು ದೇಶ ಸೇವೆಗೆ ಸೇನೆ ಸೇರುವಂತೆ ರಾಷ್ಟ್ರಮಟ್ಟದಲ್ಲಿ ಕಾಶ್ಮೀರದ ಕಾರ್ಗಿಲ್ ನಲ್ಲಿ ಹಮ್ಮಿಕೊಂಡಿರುವ ಕಾರ್ಯವು ಯಶಸ್ವಿಯಾಗಲೆಂದು ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪರವರು ಹಾರೈಸಿದರು!
ವರದಿ-ಮಹೇಶ ಶರ್ಮಾ