ಆಮ್ಲಜನಕ ಕಡಿಮೆಯಿರುವ ಪ್ರದೇಶದಲ್ಲಿ ಸಾಹಸ ಮಾಡಿದ ಮೋಹನ್ ದಾನಪ್ಪರ ಕಾರ್ಯ ಅಭಿನಂದನೀಯ-ಸಿಎಂ ಸಿದ್ದರಾಮಯ್ಯ.

Spread the love

ಬೆಂಗಳೂರು:ಸೆ:4 ದೇಶದ ಯುವಕರು ಸೇನೆ ಸೇರುವಂತೆ ಜಾಗೃತಿಗಾಗಿ ಕೇಂದ್ರಾಡಳಿತ ಪ್ರದೇಶ ಲಡಾಖ್ ನ ಕಾರ್ಗಿಲ್ ನಲ್ಲಿ ಮ್ಯಾರಥಾನ್ ಮಾಡಿದ ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪನವರಿಗೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಪತ್ರದ ಮುಖಾಂತರ ಅಭಿನಂದಿಸಿದ್ದಾರೆ! ಸಿಎಂ ಸಿದ್ದರಾಮಯ್ಯನವರು ಪತ್ರದಲ್ಲಿ “ಬಳ್ಳಾರಿ ಜಿಲ್ಲೆಯ ಕಂಪ್ಲಿ ನಗರ ನಿವಾಸಿ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರಿ ವಕೀಲರಾಗಿ ಕಾರ್ಯನಿರ್ವಹಿಸುತ್ತಿರುವ ಮೋಹನ್ ಕುಮಾರ್ ದಾನಪ್ಪ ಅವರು 77ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು 24ನೇ ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಆಗಸ್ಟ್ 15, 2023 ರಂದು ಕಾರ್ಗಿಲ್ ಯುದ್ಧದಲ್ಲಿ ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ಜೀವ ತ್ಯಾಗ ಮಾಡಿದ ವೀರ ಯೋಧರಿಗೆ ಗೌರವ ನಮನ ಸಲ್ಲಿಸುವ ಅಂಗವಾಗಿ “ಸಲಾಂ ಸೋಲ್ಡರ್ಸ್’ ಶೀರ್ಷಿಕೆಯಡಿ, ಮತ್ತು ದೇಶದ ಯುವ ಜನತೆ ಸೇನೆ ಸೇರುವ ಕುರಿತು ಜಾಗೃತಿ ಮೂಡಿಸಲು “ಯುವಕರೇ ದೇಶ ಸೇವೆಗೆ ಒಂದಾಗಿ, ಸೇನೆ ಸೇರಲು ಮುಂದಾಗಿ” ಎನ್ನುವ ಪರಿಕಲ್ಪನೆಯಡಿಯಲ್ಲಿ ಕೇಂದ್ರಾಡಳಿತ ಪ್ರದೇಶ ಲಡಾಖ್ ರಾಜ್ಯದ ಕಾರ್ಗಿಲ್‌ನಲ್ಲಿ ಕಾರ್ಗಿಲ್ ನಗರದಿಂದ ಕಾರ್ಗಿಲ್ ಯುದ್ಧ ಸ್ಮಾರಕದವರೆಗೆ ಸತತ 5 ಗಂಟೆಗಳ ಕಾಲ ಬಲಗೈನಲ್ಲಿ ರಾಷ್ಟ್ರಧ್ವಜ ಹಿಡಿದು ಸುಮಾರು 42 ಕಿಲೋ ಮೀಟರ್‌ನ ವಿನೂತನ ಮ್ಯಾರಥಾನ್ ಓಟ ನಡೆಸುವ ಮುಖಾಂತರ ದೇಶದ ಯುವಕರಿಗೆ ಜಾಗೃತಿ ಮೂಡಿಸಿರುವ ಕಾರ್ಯ ಅಭಿನಂದನಾರ್ಹ! ಆಮ್ಲಜನಕದ ಪ್ರಮಾಣ ಕಡಿಮೆಯಿರುವ ಪ್ರದೇಶದಲ್ಲಿ ಕೈಗೊಂಡಿದ್ದ ಸಾಹಸದ ಕಾರ್ಯವು  ಮೋಹನ್ ಕುಮಾರ್ ದಾನಪ್ಪರ ಧೈರ್ಯ ಮತ್ತು ದೇಶಾಭಿಮಾನ ತೋರಿಸುತ್ತಿದೆ. ಈ ಪ್ರಯತ್ನ ಮಾಡಿದ ರಾಜ್ಯದ ಮತ್ತು ದೇಶದ ಪ್ರಥಮ ವ್ಯಕ್ತಿಯಾಗಿರುವುದು ರಾಜ್ಯಕ್ಕೆ ಹೆಮ್ಮೆಯ ಸಂಗತಿ. ನಿಮ್ಮ ಈ ಕಾರ್ಯವು ದಾಖಲೆಯಾಗಿ ಉಳಿಯಲೆಂದು ಆಶಿಸುತ್ತೇನೆ. ಮೋಹನ್ ಕುಮಾರ್ ದಾನಪ್ಪ ಅವರ ಇಂತಹ ಸಮಾಜಮುಖಿ ಕಾರ್ಯಗಳನ್ನು ನಡೆಯುತ್ತಿರುವುದು. ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ರಾಜ್ಯದ ಕೀರ್ತಿ ಇನ್ನಷ್ಟು ಎತ್ತರಕ್ಕೆ ಎರುವಂತಾಗಲಿ ಎಂದು ಅಭಿನಂದನೆ ಪತ್ರದಲ್ಲಿ ತಿಳಿಸಿರುತ್ತಾರೆ.

ವಿಶೇಷ ವರದಿಗಾರರು-ಮಹೇಶ ಶರ್ಮಾ

Leave a Reply

Your email address will not be published. Required fields are marked *