ಆದರ್ಶ ಶಿಕ್ಷಕ, ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವಿದು. ಡಾ. ರಾಧಾಕೃಷ್ಣನ್ ಅವರು `ಶಿಕ್ಷಕರು ದೇಶದ ಅತ್ಯುತ್ತಮ ಮನಸ್ಸುಗಳಾಗಿರಬೇಕು’ ಎಂದು ನಂಬಿದ್ದರು. ಇದೇ ಕಾರಣದಿಂದ ಅವರ ಹುಟ್ಟುಹಬ್ಬದ ದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತಿದೆ.ಶಿಕ್ಷಕರು ಉತ್ತಮ ಮನಸ್ಸುಗಳನ್ನು ರೂಪಿಸುವಲ್ಲಿ, ಪಠ್ಯಪುಸ್ತಕಗಳನ್ನು ಮೀರಿದ ಮೌಲ್ಯಗಳನ್ನು ನಮ್ಮಲ್ಲಿ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅವರು ನೀಡಿದ ಜ್ಞಾನ ನಮ್ಮ ಬದುಕನ್ನು ಉತ್ತಮವಾಗಿ ರೂಪಿಸುತ್ತದೆ. ಹೀಗಾಗಿ, ನಮಗೆ ದಾರಿ ತೋರಿದ, ನಮ್ಮನ್ನು ಉತ್ತಮ ಪ್ರಜೆಗಳಾಗಿ ರೂಪಿಸಿದ ಶಿಕ್ಷಕರಿಗೆ ಧನ್ಯವಾದ ಹೇಳುವ, ಅವರ ತ್ಯಾಗ, ಪ್ರೀತಿ, ಅಮೂಲ್ಯ ಕೊಡುಗೆಗಳನ್ನು ಸ್ಮರಿಸುವ ಮಹತ್ವದ ದಿನವಾಗಿದೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು. ನಿಮ್ಮ ಪ್ರೀತಿಯ ವಿದ್ಯಾರ್ಥಿ ಗಣೇಶ್ ಕೆ ಯಡಿಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ದಾವಣಗೆರೆ.
ವರದಿ-ಬಾಲರಾಜ ಯಾದವ್