ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಬುದ್ದ ವಿಹಾರದಲ್ಲಿಂದು ಮಾನವ ಬಂಧುತ್ವ ವೇದಿಕೆ-ಕರ್ನಾಟಕ ವತಿಯಿಂದ ಭೀಮಾ ಕೋರೆಗಾವ್ ವಿಜಯೋತ್ಸವ ಸ್ವಾಭಿಮಾನ ಸಂಭ್ರಮ ಸಮಾವೇಶ ಅದ್ದೂರಿಯಾಗಿ ಜರುಗಿತು. ಈ ಕಾರ್ಯಕ್ರಮವನ್ನು ಹೋರಾಟದ ಹಾಡು ಹಾಡುವ ಮೂಲಕ ಮತ್ತು ಘೋಷಣೆ ಹೇಳುವ ಮೂಲಕ ಚಾಲನೆ ನೀಡಿದರು. ಪ್ರಸ್ತಾವಿಕ ನುಡಿ ಹೇಳುವ ಮೂಲಕ ಡಾ॥ ಬಿ.ಆರ್.ಅಂಬೇಡ್ಕರ್ ರವರ ಭಾವ ಚಿತ್ರಕ್ಕೆ ಪುಷ್ಪ ಹಾಕುವ ಮೂಲಕ ಮತ್ತು ಸಂವಿಧಾನದ ಪೀಠಿಕೆಯಂತೆ ಸರ್ವ ಜನಾಂಗಿಯದವರು ಪ್ರತಿಜ್ಞೆ ಮಾಡುವ ಮೂಲಕ ಕಾರ್ಯಕ್ರಮವನ್ನು ಮುನ್ನಡಿಸಿದರು. ಈ ಕಾರ್ಯಕ್ರಮದ ಅಂಗವಾಗಿ ಭೀಮಾ ಕೋರೆಗಾವ್ ವಿಜಯೋತ್ಸವದ ಬಗ್ಗೆ ಹಾಗೂ ಹೋರಾಟದ ಕುರಿತು ಸ್ವ-ವಿಸ್ತಾರವಾಗಿ ವಿವರಣೆ ನೀಡಿದರು.ಈ ಕಾರ್ಯಾಕ್ರಮದಲ್ಲಿ ಕೊಪ್ಪಳ ಜಿಲ್ಲೆ ಮತ್ತು ರಾಯಚೂರು ಜಿಲ್ಲೆ ಹಾಗೂ ಬಳ್ಳಾರಿ ಜಿಲ್ಲೆಯಿಂದ ಹೋರಾಟಗಾರರ ಸಮ್ಮೋಹವೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕೋರೇಗಾಂವ್ ಯುದ್ಧ ಇತಿಹಾಸದಲ್ಲಿ ಮುಚ್ಚಿಹೋದ ಸಾಹಸದ ಘಟನೆ. ಮೂವತ್ತು ಸಾವಿರ ಸೈನಿಕರನ್ನು ಕೇವಲ ಐನೂರು ಜನ ಸೈನಿಕರು ಸೇರಿಕೊಂಡು ಸೋಲಿಸಿದ ಕದನ. ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪೃಶ್ಯತೆ, ಮೇಲು ಕೀಳುಗಳ ವಿರುದ್ಧ ಸೆಟೆದು ನಿಂತು ಮಾನವೀಯ ಮೌಲ್ಯಗಳನ್ನು ಪಡೆದುಕೊಳ್ಳಲು ಹಂಬಲಿಸುವ ಮಹರ್ ಸೈನಿಕರ ಧೈರ್ಯ ಸಾಹಸ, ಕೆಚ್ಚೆದೆಯ ಹೋರಾಟ. ಶೋಷಿತರು ಮೇಲ್ಜಾತಿ ಶೋಷಕರ ವಿರುದ್ಧ, ಅವರ ಶೋಷಣೆಯ ನಡವಳಿಕೆಯ ವಿರುದ್ಧ ಯುದ್ಧ ಘೋಷಿಸಿದ, ನಡೆಸಿ ಗೆಲುವು. ಅದು ಭೀಮಾ ತೀರದಲ್ಲಿ ನಡೆದಿದ್ದರಿಂದ ಅದು ಇತಿಹಾಸದಲ್ಲಿ ‘ಭೀಮಾ ಕೋರೇಗಾಂವ್ ಯುದ್ಧ’ವೆಂದೇ ಪ್ರಸಿದ್ಧವಾಗಿದೆ. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಕೋರೇಗಾಂವ್.
ವರದಿ – ಉಪಳೇಶ ವಿ.ನಾರಿನಾಳ