ಭಾರತದ ಒಕ್ಕೂಟವಾದಿ ಸ್ವರೂಪವನ್ನು ಬಲಗೊಳಿಸಲು.ರಾಜ್ಯಗಳ ಮೇಲೆ ಕೇಂದ್ರ ಸರ್ಕಾರ ಹಸ್ತಕ್ಷೇಪಗಳನ್ನು ನಿಲ್ಲಿಸಲು ಒತ್ತಾಯಿಸಿ ಪ್ರತಿಭಟನೆ.
ಕೊಪ್ಪಳ : ಭಾರತದ ಒಕ್ಕೂಟವಾದಿ ಸ್ವರೂಪವನ್ನು ಬಲಗೊಳಿಸಲು ರಾಜ್ಯಗಳ ಮೇಲೆ ಕೇಂದ್ರ ಸರ್ಕಾರ ಹಸ್ತಕ್ಷೇಪಗಳನ್ನು ನಿಲ್ಲಿಸಲು ಒತ್ತಾಯಿಸಿ ನಗರದ ಅಶೋಕ ವೃತ್ತದಲ್ಲಿ ಗುರುವಾರ ಮಧ್ಯಾಹ್ನ
ಕಮ್ಯೂನಿಸ್ಟ್ ಪಕ್ಷಗಳು ಮತ್ತು ಸಾಮೂಹಿಕ ಸಂಘಟನೆಗಳಿಂದ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿ ನಂತರ ತಹಶೀಲ್ದಾರರ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಭಾರತ ಸಂವಿಧಾನದಂತೆ ದೇಶದಾದ್ಯಂತ ಒಕ್ಕೂಟವಾದಿ ಸ್ವರೂಪವನ್ನು ಬಲಗೊಳಿಸಲು ಈಗ ಒಕ್ಕೂಟ ಸರಕಾರ ರಾಜ್ಯ ಸರಕಾರಗಳ ಮೇಲೆ ತನ್ನ ಅಧಿಕಾರ ದುರುಪಯೋಗ ಹಾಗೂ ಹಸ್ತ ಕ್ಷೇಪದ ಮೂಲಕ ಒಕ್ಕೂಟವಾದಿ ಸ್ವರೂಪಕ್ಕೆ ಭಂಗ ಉಂಟು ಮಾಡುವುದನ್ನು ಈ ಕೂಡಲೆ ನಿಲ್ಲಿಸುವಂತೆ ಹಾಗೂ ಕೆಳಕಂಡ ಹಕ್ಕೊತ್ತಾಯಗಳನ್ನು ಪರಿಗಣಿಸಿ ರಾಜ್ಯಗಳಿಗೆ ನ್ಯಾಯ ಒದಗಿಸುವಂತೆ ಈ ಮೂಲಕ ಎಡ ಪಕ್ಷಗಳು ಒತ್ತಾಯಿಸುತ್ತವೆ ಮತ್ತು ಕರ್ನಾಟಕ ಹಾಗೂ ಕೇರಳ ಸರಕಾರಗಳು.ಒಕ್ಕೂಟ ಸರಕಾರದ ಕಿರುಕುಳ ಹಾಗೂ ತಾರತಮ್ಯ ನೀತಿಯ ವಿರುದ್ದ ಇದೇ ಫೆಬ್ರವರಿ 7,8 ರಂದು ನವದೆಹಲಿಯಲ್ಲಿ ನಡೆದ ಹೋರಾಟಕ್ಕೆ ಸಂಪೂರ್ಣ ಬೆಂಬಲವನ್ನು ನೀಡುತ್ತದೆ.
ರಾಜ್ಯಗಳು ತಮ್ಮ ತೆರಿಗೆ ಹಾಗೂ ಸಂಪನ್ಮೂಲಗಳ ಪಾಲು ಪಡೆಯುವಲ್ಲಿ ಒಕ್ಕೂಟ ಸರಕಾರ ಅಡ್ಡಿಯಾಗಬಾರದು. ಕರ್ನಾಟಕಕ್ಕೆ ಬರಗಾಲದ ಅನುದಾನವನ್ನು ಈ ಕೂಡಲೆ ಬಿಡುಗಡೆ ಮಾಡಬೇಕು. ಒಕ್ಕೂಟ ಸರಕಾರ ತನ್ನ ಮನಸ್ಸಿಗೆ ತೋಚಿದಂತೆ ರಾಜ್ಯ ಸರಕಾರಗಳು ಸಾಲ ಪಡೆಯುವಂತೆ ಮಾಡುವುದನ್ನು ನಿಲ್ಲಿಸಬೇಕು.ಕೇಂದ್ರ ಪ್ರಾಯೋಜಿತ ಯೋಜನೆಗಳ ರಾಜ್ಯಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಒಕ್ಕೂಟ ಸರಕಾರದ ಮಧ್ಯಪ್ರವೇಶ ಮಾಡಬಾರದು.ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿಕೊಂಡು ಒಕ್ಕೂಟ ಸರಕಾರ ED.CBI ಹಾಗೂ ಆದಾಯ ತೆರಿಗೆ ವಿಭಾಗಳನ್ನು ದುರ್ಬಳಕೆ ಮಾಡುವುದನ್ನು ನಿಲ್ಲಿಸಬೇಕು.ರಾಜ್ಯ ಸರಕಾರಗಳ ವಿಷಯಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಹಾಗೂ ಅವರ ಸಂವಿಧಾನಾತ್ಮಕ ಸ್ಥಾನದ ದುರುಪಯೋಗವನ್ನು ತಡೆಯಬೇಕು.ರಾಜ್ಯದ ವಿಶ್ವ ವಿದ್ಯಾಲಯಗಳ ವಿಷಯದಲ್ಲಿ ಕುಲಪತಿಗಳಾಗಿ ರಾಜ್ಯಪಾಲರ ಹಸ್ತಕ್ಷೇಪ ಮಾಡುವುದನ್ನು ತಡೆಯಬೇಕು.ರಾಜ್ಯ ಶಾಸಕಾಂಗ ಅಂಗೀಕರಿಸಿದ ಶಾಸನಗಳನ್ನು ರಾಜ್ಯಪಾಲರು ತಡೆ ಹಿಡಿಯಬಾರದು ಮತ್ತು ವಿಳಂಬ ಮಾಡದೆ ಸಹಿ ಮಾಡುವಂತೆ ಕ್ರಮವಹಿಸಬೇಕೆಂದು ಭಾರತ ಕಮ್ಯೂನಿಸ್ಟ್ ಪಕ್ಷ (ಎಂ) ಮುಖಂಡ ಜಿ. ನಾಗರಾಜ್. ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಒಕ್ಕೂಟ (ಎಐಟಿಯುಸಿ)ದ ಜಿಲ್ಲಾ ಅಧ್ಯಕ್ಷ
ಬಸವರಾಜ್ ಶೀಲವಂತರ್. ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಖಾಸೀಮ್ ಸರ್ದಾರ್. ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್.ಎ. ಗಫಾರ್. ಹಿರಿಯ ಮುಖಂಡ ಮಹಾಂತೇಶ ಕೊತಬಾಳ. ಶೇಖಪ್ಪ. ಮಹೆಬೂಬ್ ಪಾಶಾ ಮುಲ್ಲಾ. ಸಂಜಯ ದಾಸ್ ಕೌಜಗೇರಿ. ಷಣ್ಮುಖಪ್ಪ. ಆರ್. ಶಾಸ್ತ್ರಿ ಮಠ. ತಾಲೂಕಾ ಕಾರ್ಪೆಂಟರ್ ಸಂಘದ ಮಾಜಿ ಅಧ್ಯಕ್ಷ ಮರ್ದಾನ್ ಸಾಬ್ ಸಿದ್ದಿ ಮುಂತಾದವರು ಭಾಗವಹಿಸಿದ್ದರು. ವಿಶೇಷ ವರದಿಗಾರರು.:- ಎಸ್.ಎ. ಗಫಾರ್.