ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ, ಯಾಕಿದು ಇಷ್ಟೊಂದು ಅವಶ್ಯಕ?
ರಾಜ್ಯದಲ್ಲಿ ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (High Security Registration Plates-HSRP) ಕಡ್ಡಾಯವಾಗಿ ಅಳವಡಿಸಬೇಕು.ಯಾವ ವಾಹನಗಳಿಗೆ ಈ ನಿಯಮ ಅನ್ವಯವಾಗುತ್ತದೆ? ಏಪ್ರಿಲ್ 2019 ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ. ಗಮನಿಸಬೇಕಾದ ಅಂಶವೆಂದರೆ, ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹೊಲೊಗ್ರಾಮ್, IND ಮಾರ್ಕ್, ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯ HSRP ಒಂದೇ ರೀತಿಯ ಪ್ಲೇಟ್‌ಗಳು, ಸ್ಮಾರ್ಟ್ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವಂತಿಲ್ಲ, ಅವುಗಳು HSRP ಫಲಕಗಳಾಗಿರುವುದಿಲ್ಲ.
ಏನಿದು ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ?
ಈ HSRP ಅನ್ನು ಅಲ್ಯುಮಿನಿಯಂ ಲೋಹದಿಂದ ತಯಾರಿಸಲಾಗುತ್ತದೆ. ಈಗಾಗಲೇ ಹೊಸ ವಾಹನಗಳಲ್ಲಿ ಈ ರೀತಿಯ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸಲಾಗುತ್ತಿದೆ. ಈ ಪ್ಲೇಟ್‌ಗಳಲ್ಲಿ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತದೆ. ಈ ಪ್ಲೇಟ್ನ ಮೇಲ್ಭಾಗದ ಎಡ ಬದಿಯಲ್ಲಿ ನೀಲಿ ಬಣ್ಣದ ಅಶೋಕ ಚಕ್ರದ ಮುದ್ರೆಯನ್ನು ಕಾಣಬಹುದು. 20 ಮಿಲಿ ಮೀಟರ್ ಉದ್ದ ಅಗಲದ ಈ ಮುದ್ರೆಯನ್ನು ಕ್ರೋಮಿಯಂ ಲೋಹ ಬಳಸಿ ತಯಾರಿಸಲಾಗಿರುತ್ತದೆ.
ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಪ್ರಯೋಜನಗಳು.
ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ನಲ್ಲಿ ನಿಮ್ಮ ವಾಹನದ ಎಂಜಿನ್ ಸಂಖ್ಯೆ, ಚಾಸ್ಸಿ ಸಂಖ್ಯೆ ಸೇರಿದಂತೆ ಹಲವು ಮಾಹಿತಿಗಳು ಇರುತ್ತವೆ. ಈ ಮಾಹಿತಿಗಳು ಕೇಂದ್ರೀಯ ಡೆಟಾಬೇಸ್‌ನಲ್ಲಿ ಸಂಗ್ರಹ ಆಗಿರುತ್ತದೆ. ಒಂದೊಮ್ಮೆ ನಿಮ್ಮ ವಾಹನ ಕಳವಾದರೆ ಈ ಮಾಹಿತಿಯನ್ನ ಬಳಸಿಕೊಂಡು ಪತ್ತೆಹಚ್ಚಲು ಸಹಕಾರಿಯಾಗಿದೆ. ಏಕೆಂದರೆ, ನಿಮ್ಮ ವಾಹನಕ್ಕೆ ಹಾಕಿರುವ ನಂಬರ್ ಪ್ಲೇಟ್ ಅನ್ನು ಅನಧಿಕೃತವಾಗಿ ಬದಲಾವಣೆ ಮಾಡಲು ಅಸಾಧ್ಯ. ಕಳ್ಳರು ಈ ನಂಬರ್ ಪ್ಲೇಟ್ ಅನ್ನು ತೆಗೆಯಲು ಸಾಧ್ಯವಿಲ್ಲ. ಪ್ಲೇಟ್‌ನಲ್ಲಿ ಇರುವ ಮಾಹಿತಿಯನ್ನ ತಿದ್ದಲು ಕೂಡಾ ಸಾಧ್ಯವಿಲ್ಲ.ಒಂದು ವೇಳೆ ವಾಹನದ ಬದಲು ಕೇವಲ ಪ್ಲೇಟ್ ಕಳ್ಳತನ ಮಾಡಿದರೆ, ಅದನ್ನು ಮರುಬಳಕೆ ಮಾಡಲು ಸಾಧ್ಯವಿಲ್ಲ. ವಾಹನವನ್ನ ಕಳ್ಳತನ ಮಾಡಿ ನಂಬರ್ ಪ್ಲೇಟ್ ತೆಗೆದು ಭಯೋತ್ಪಾದನೆ ಸೇರಿದಂತೆ ಅಪರಾಧ ಕೃತ್ಯಗಳಿಗೆ ಬಳಸಿಕೊಳ್ಳುವುದನ್ನು ಎಚ್ಎಸ್ಆರ್ಪಿ ಮೂಲಕ ತಡೆಗಟ್ಟಬಹುದು.
ಇಂದು ನಮ್ಮ ಟೂ ವಿಲ್ಲರ್ ವಾಹನಕ್ಕೆ H S R P ನಂಬರ್ ಅಳವಡಿಸಲಾಯಿತು. 2019 ರ ಆಚೆ ಇರುವ ಪ್ರತಿಯೊಂದು ವಾಹನಕ್ಕೆ H S R P ನಂಬರ್ ಅಳವಡಿಸಬೇಕು ಇದು ಸರಕಾರದ ನಿಯಮ. 2019 ರ ಆಚೆ ಇರುವ ತಮ್ಮ ಪ್ರತಿಯೊಂದು ವಾಹನಕ್ಕೆ H S R P ನಂಬರ್ ಅಳವಡಿಸಿಕೊಳ್ಳಿ. ಜೊತೆಗೆ ನಿಮ್ಮ ಆತ್ಮೀಯರಿಗೂ ತಿಳಿಸಿ. ಧನ್ಯವಾದಗಳು.
ವಿಶೇಷ ವರದಿ :- ಉಪಳೇಶ ವಿ.ನಾರಿನಾಳ.