ಮುಸ್ಲಿಂ ಸಹೋದರ, ಸಹೋದರಿಯರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ರಂಜಾನ್ ಕೂಡ ಒಂದಾಗಿದೆ. ಧಾರ್ಮಿಕ ಬಾಂಧವ್ಯವನ್ನು ಬಲಪಡಿಸುವ ಮತ್ತು ನಮ್ಮ ಸುತ್ತಲಿನ ಜನರೊಂದಿಗೆ ದಯೆ ತೋರುವ ದಿನವಾಗಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಇಸ್ಲಾಂ ಧರ್ಮದ ಪವಿತ್ರ ಗ್ರಂಥವಾದ ಕುರಾನ್ ಈ ದಿನದಂದು ದೇವರಿಂದ ಜನರಿಗೆ ಬಹಿರಂಗವಾಯಿತು ಎಂಬ ನಂಬಿಕೆ ಜನರಲ್ಲಿದೆ. ರಂಜಾನ್ ತಿಂಗಳ ಉಪವಾಸ ಇಸ್ಲಾಮಿನ ಐದು ಕಂಬಗಳಲ್ಲಿ ನಾಲ್ಕನೆಯದು. ಸ್ವೇಚ್ಛೆ, ಸ್ವಾರ್ಥ, ಅತ್ಯಾಗ್ರಹ, ಕಾಮಾಸಕ್ತಿಗಳಿಂದ, ಎಲ್ಲಾ ವಿಧ ಮಾನವ ದೌರ್ಬಲ್ಯಗಳಿಂದ ಮನುಷ್ಯನನ್ನು ಮುಕ್ತಗೊಳಿಸಿ, ದೇಹ ಮತ್ತು ಆತ್ಮವನನ್ನು ಪವಿತ್ರಗೊಳಿಸುವುದೇ ಒಂದು ತಿಂಗಳ ಪೂರ್ಣ ವ್ರತಾಚರಣೆಯ. ಪವಿತ್ರ ರಂಜಾನ್ನಲ್ಲಿ ಒಂದು ತಿಂಗಳ ಉಪವಾಸ ಮಾಡುವ ಮೂಲಕ ನಮ್ಮ ಸಂಬಂಧ ದೇವರ ಜೊತೆ ಮತ್ತಷ್ಟು ಗಟ್ಟಿಯಾಗುತ್ತೆ. ದೇವರಿಗೆ ಹತ್ತಿರವಾಗಲು ಸಹಾಯ ಮಾಡುತ್ತೆ ಎಂದು ಮುಸ್ಲಿಮರು ನಂಬುತ್ತಾರೆ. ಈ ತಿಂಗಳಲ್ಲಿ ಉಪವಾಸ ಮಾಡಿದ್ರೆ ಕಷ್ಟ/ಸಂಕಷ್ಟಗಳು ಕಡಿಮೆಯಾಗುತ್ತವೆ ಎಂದು ಕೆಲವರು ನಂಬುತ್ತಾರೆ. ಈ ತಿಂಗಳಲ್ಲಿ ಮುಸ್ಲಿಮರು ಬಡವರಿಗೆ ದಾನ-ಧರ್ಮ ಮಾಡುವುದು ಹಾಗೂ ಹಸಿದವರಿಗೆ ಆಹಾರ ನೀಡುವಂಥ ಪುಣ್ಯ ಕಾರ್ಯಗಳನ್ನು ಮಾಡುತ್ತಾರೆ. ಈ ಪವಿತ್ರ ತಿಂಗಳ ಮೊದಲ ಮತ್ತು ಕೊನೆಯ ದಿನಾಂಕಗಳು ಚಂದ್ರನ ಇಸ್ಲಾಮಿಕ್ ಕ್ಯಾಲೆಂಡರ್ ಅನ್ನು ಅವಲಂಬಿಸಿರುತ್ತದೆ. ಸ್ಥಳದಿಂದ ಸ್ಥಳಕ್ಕೆ ಬದಲಾಗುತ್ತದೆ. ಒಂದು ತಿಂಗಳ ಅಮಾವಾಸ್ಯೆಯ ನಂತರ ಕಾಣಿಸಿಕೊಳ್ಳುವ ಅರ್ಧಚಂದ್ರಾಕೃತಿಯೊಂದಿಗೆ ಪ್ರಾರಂಭವಾಗುತ್ತದೆ. ಈ ಹಬ್ಬವು ಈದ್-ಉಲ್-ಫಿತರ್ನೊಂದಿಗೆ ಕೊನೆಗೊಳ್ಳುತ್ತದೆ. ರಂಜಾನ್ ಉಪವಾಸ ಆಚರಣೆ ರಂಜಾನ್ ತಿಂಗಳಲ್ಲಿ ರೋಜಾ ಅಥವಾ ಉಪವಾಸಕ್ಕೆ ಅದರದೇ ಆದ ಮಹತ್ವವಿದೆ. ಸೂರ್ಯೋದಯಕ್ಕೆ ಮುಂಚಿನ ತಿಂಡಿಯನ್ನು ಸೋಹರ್ ಎಂದು ಕರೆಯಲಾಗುತ್ತದೆ ಮತ್ತು ಸೂರ್ಯಾಸ್ತದ ನಂತರ ಉಪವಾಸವನ್ನು ಮುಕ್ತಾಯಗೊಳಿಸುವ ಪ್ರಕ್ರಿಯೆಯನ್ನು ಇಫ್ತಾರ್ ಎಂದು ಕರೆಯಲಾಗುತ್ತದೆ. ಇನ್ನು ರಂಜಾನ್ ಸಮಯದಲ್ಲಿ ಕೇವಲ ದೇಹಕ್ಕೆ ಮಾತ್ರವಲ್ಲ ಮನಸ್ಸಿಗೂ ಉಪವಾಸ ಮಾಡಿಸಲಾಗುತ್ತದೆ. ಮುಸ್ಲಿಮರು ಉಪವಾಸದ ವೇಳೆ ಸಿಗರೇಟ್, ಮದ್ಯ, ತಂಬಾಕು ಸೇವನೆ, ಲೈಂಗಿಕ ಸಂಬಂಧವನ್ನು ಬೆಳೆಸುವುದನ್ನೂ ಕೂಡ ತಪ್ಪಿಸುತ್ತಾರೆ. ಏಕೆಂದರೆ ಉಪವಾಸದ ಸಮಯದಲ್ಲಿ ಇಂಥ ಚಟುವಟಿಕೆಗಳನ್ನು ಪಾಪ ಎಂದು ಪರಿಗಣಿಸಲಾಗುತ್ತದೆ. ರಂಜಾನ್ ತಿಂಗಳಲ್ಲಿ ಮುಸ್ಲಿಮರು ತಮ್ಮನ್ನು ಅಧ್ಯಾತ್ಮ ಪ್ರವೃತ್ತಿಗೆ ಅರ್ಪಿಸಿಕೊಳ್ಳುತ್ತಾರೆ. ಒಟ್ಟಿನಲ್ಲಿ ಎಕತೆ ಸಾರು ಈ ನಾಡಿನಲ್ಲಿ ಮತ್ತೊಮ್ಮೆ ಸಾಕ್ಸಿಗೆ ಈ ಎರಡು ಹಬ್ಬಗಳು ಜೊತೆಗೆ ಬಂದಿರುವುದು ವಿಶೇಷವಾಗಿದೆ. ತಾವರಗೇರಾ ನ್ಯೂಸ್ ಪತ್ರಿಕಾ ಬಳಗ ಮತ್ತು ಬುದ್ದಂ,ಶರಣಂ,ಗಚ್ಛಾಮಿ ಸೇವಾ ಟ್ರಸ್ಟ್ ವತಿಯಿಂದ ನಾಡಿನ ಸಮಸ್ತ ಜನತೆಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು.
ವರದಿ-ಉಪಳೇಶ ವಿ.ನಾರಿನಾಳ