ರಾಷ್ಟ್ರೀಯ ಹಬ್ಬಗಳಾದ ಜನವರಿ 26 ರ ಗಣರಾಜ್ಯೋತ್ಸವ ದಿನ ಹಾಗೂ ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯಂದು ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು, ಶಾಲಾ -ಕಾಲೇಜುಗಳು ಸೇರಿದಂತೆ ಸರ್ಕಾರದ ವತಿಯಿಂದ ಆಚರಿಸುವ ಎಲ್ಲಾ ಸಮಾರಂಭಗಳಲ್ಲೂ ಸ್ವಾತಂತ್ರ್ಯ ಹೋರಾಟಗಾರ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರದೊಂದಿಗೆ ಪ್ರಜಾಪ್ರಭುತ್ವದ ಪಿತಾಮಹ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡಲು ಸೂಚಿಸಿ ಸಚಿವ ಸಂಪುಟ ನಿರ್ಧರಿಸಿದೆ. ರಾಷ್ಟ್ರೀಯ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಯಾವುದೇ ಗೊಂದಲ ಇರದ ರೀತಿ ರಾಷ್ಟ್ರನಾಯಕರಾದ ಗಾಂಧೀಜಿ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಇಡುವುದನ್ನು ಕಡ್ಡಾಯಗೊಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ನಡೆ ಸ್ವಾಗತಾರ್ಹವಾಗಿದ್ದು, ಅದರಂತೆಯೇ ಪ್ರತಿ ತಾಲ್ಲೂಕು, ಜಿಲ್ಲಾ ನ್ಯಾಯಾಲಯಗಳಲ್ಲೂ (ಈಗಲೂ ಕೋರ್ಟ್ ಹಾಲ್ ಗಳಲ್ಲಿ ಗಾಂಧೀಜಿ ಒಬ್ಬರ ಪೋಟೋ ಮಾತ್ರವೇ ಇರುವುದು ) ಸಹ ಕಾನೂನಿನ ಪಿತಾಮಹ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸಲು ಸರ್ಕಾರ ಅಧಿಕೃತ ಆದೇಶ ಹೊರಡಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ. ಗಣೇಶ್ ಕೆ ರಾಯಣ್ಣ ಅಭಿಮಾನಿ ದಾವಣಗೆರೆ.