ಬಾಗಲಕೋಟೆ ಯ ಶ್ರೀ ಕ್ಷೇತ್ರ ಸಿದ್ದನಕೊಳ್ಳ ಶ್ರೀಗಳು ಆಯೋಜಿಸಿದ್ದ ಅಂತರ ರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಈ ಚಿತ್ರದ ಟೀಸರ್ ಬಿಡುಗಡೆ ಮಾಡಲಾಯಿತು.ಕನ್ನಡದ ಖ್ಯಾತ ನಿರ್ದೇಶಕರ ಜೊತೆ ಸಹ ನಿರ್ದೇಶಕರಾಗಿ, ಹಾಗು ರಂಗಭೂಮಿ ನಟರಾಗಿ ಅನುಭವವಿರುವ ಲಕ್ಷ್ಮಿನರಸಿಂಹ. ಎಂ “ಬೆಲ್ ಬಟನ್” ಚಿತ್ರವನ್ನು ನಿರ್ದೇಶಿಸಿ ನಟನೆಯನ್ನೂ ಮಾಡಿದ್ದಾರೆ. ಲವ್ ಹಾಗೂ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಈಗಾಗಲೇ ಟೀಸರ್ ಗೆ ಉತ್ತಮ ಪ್ರತಿಕ್ರಿಯೆ ದೊರಯುತ್ತಿದೆ.ಫ್ರೆಶ್ ಫಿಲಂಸ್ ಮೂಲಕ ಹೇಮಂತ್ ಕುಮಾರ್ , ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಹಂಸಲೇಖ ಬಳಿ ಕೆಲಸ ಮಾಡಿರುವ ವಿಶಾಲ್ ಆಲಾಪ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.ಲಕ್ಕಿ ಛಾಯಾಗ್ರಹಣ ಹಾಗೂ ಎಸ್ ಆಕಾಶ್ ಮಹೇಂದ್ರಕರ್ ಸಂಕಲನ ಈ ಚಿತ್ರಕ್ಕಿದೆ. ಪತ್ರಿಕಾ ಸಂಪರ್ಕ, ಸುಧೀಂದ್ರ ವೆಂಕಟೇಶ್, ಡಾ. ಪ್ರಭು ಗಂಜಿಹಾಳ, ಡಾ. ವೀರೇಶ ಹಂಡಗಿ. ಜೈ, ಈ ಚಿತ್ರದ ನಾಯಕ, ನಿಸರ್ಗ ಅಪ್ಪಣ್ಣ ಮತ್ತು ಚೈತ್ರಾ ಗೌಡ , ನಾಯಕಿಯರು, ಪ್ರಮೀಳಾ ಸುಬ್ರಮಣ್ಯ, ಅರವಿಂದ್, ನೊಣವಿನಕೆರೆ ರಾಮಕೃಷ್ಣಯ್ಯ ಭಾನುಪ್ರಕಾಶ್, ಪವನ್ ರಿಚ್ಚಿ, ವೇಣು, ಹರೀಶ್, ಮುಂತಾದವರು ಅಭಿನಯಸಿದ್ದಾರೆ. ಚಿಕ್ಕಮಗಳೂರು ಸುತ್ತಮುತ್ತ ಸುಮಾರು ನಲವತ್ತು ದಿನಗಳ ಕಾಲ ಪ್ರಕೃತಿಯ ಮಡಿಲಲ್ಲಿ ಈ ಚಿತ್ರದ ಚಿತ್ರೀಕರಣ ಮಾಡಿದ್ದೇವೆ ಮತ್ತು ಚಿತ್ರ ಬಹಳ ಚನ್ನಾಗಿ ಮೂಡಿ ಬಂದಿದೆ, ಇನ್ನು ಕೆಲವೇ ದಿನಗಳಲ್ಲಿ ಚಿತ್ರದ ಬಿಡುಗಡೆ ದಿನಾಂಕವನ್ನು ತಿಳಿಸುತ್ತೇವೆ ಎಂದು ನಿರ್ದೇಶಕ ಲಕ್ಷ್ಮಿನರಸಿಂಹ ಅವರು ಹೇಳಿದ್ದಾರೆ.