ಕೊಪ್ಪಳ : ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಶುಲ್ಕ ಪಾವತಿ ಸಮಸ್ಯೆ ಬಗೆಹರಿಸಲು ಒತ್ತಾಯ.

Spread the love

ಕೊಪ್ಪಳ : ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಶುಲ್ಕ ಪಾವತಿ ಸಮಸ್ಯೆ ಬಗೆಹರಿಸಲು ಒತ್ತಾಯ.

ಕೊಪ್ಪಳ : ನಗರದ ತಾಲೂಕಾ ಕ್ರೀಡಾಂಗಣದ ಪಕ್ಕದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕ ಪಾವತಿಸಲು ಆಗುತ್ತಿರುವ ಸಮಸ್ಯೆ ಬಗೆಹರಿಸಲು ಜನಪರ ಸಂಘಟನೆಗಳ ಒಕ್ಕೂಟ ಒತ್ತಾಯಿಸಿದೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ,ಎ, ಬಿಕಾಂ,ಬಿ, ಎಸ್,ಸಿ, ಓದುತ್ತಿರುವ ವಿದ್ಯಾರ್ಥಿಗಳು ಮುಂದಿನ ಸೆಮಿಸ್ಟರ್ ಗಳಿಗೆ ಪ್ರವೇಶ ಪಡೆಯಲು ಶುಲ್ಕ ಪಾವತಿಸಲು ಫೆಬ್ರುವರಿ 20 ರಿಂದ 28ರ ವರೆಗೆ ಬ್ಯಾಂಕ್ ಆಫ್ ಬರೋಡದಲ್ಲಿ ಅವಕಾಶ ಕಲ್ಪಿಸಿದೆ, ಇದರಲ್ಲಿ ನಾಲ್ಕನೇ ಶನಿವಾರ ಮತ್ತು ರವಿವಾರ ಬ್ಯಾಂಕ್ ರಜೆ,ಸೋಮವಾರ ಕೊಪ್ಪಳ ಬಂದ್, ಫೆಬ್ರುವರಿ 26 ಮಹಾಶಿವರಾತ್ರಿ  ಹೀಗಾಗಿ ನಾಲ್ಕು ದಿನಗಳ ಕಾಲ ರಜೆಯಾಗಿದೆ, ಐದು ದಿನಗಳಲ್ಲಿ 3000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶುಲ್ಕ ಪಾವತಿಸಲು ಹೇಗೆ ಸಾಧ್ಯ ? ಬ್ಯಾಂಕಿನಲ್ಲಿ ವಿದ್ಯಾರ್ಥಿಗಳು ಮುಗಿಬಿದ್ದು ಶುಲ್ಕ ಪಾವತಿಸಲು ಹರ ಸಾಹಸ ಪಡುತ್ತಿದ್ದಾರೆ,  ಬ್ಯಾಂಕಿನ ವ್ಯವಹಾರ ಮಾಡುವ ಗ್ರಾಹಕರು ತಮ್ಮ ನಿತ್ಯ ವ್ಯವಹಾರಕ್ಕೆ ಬ್ಯಾಂಕಿನಲ್ಲಿ ಹೋಗಲು ಆಗದೆ ತೊಂದರೆ ಅನುಭವಿಸುತ್ತಿದ್ದಾರೆ, ಬ್ಯಾಂಕಿನ ಅಧಿಕಾರಿಗಳು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತ್ಯೇಕ ವಿಭಾಗ ತೆರೆದು ಶುಲ್ಕ ಪಾವತಿಸಿಕೊಳ್ಳಬೇಕು, ಇಲ್ಲವೇ ಆನ್ಲೈನ್ ಮೂಲಕ ಪಾವತಿಸುವ ವ್ಯವಸ್ಥೆ ಪ್ರಾರಂಭಿಸಬೇಕು ಎಂದು ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್.ಎ.ಗಫಾರ್,ಮಖಬೂಲ್ ರಾಯಚೂರು,ವೀರೇಶ್ ತೆಗ್ಗಿನಮನಿ,ಪಾಸ್ಟರ್ಸ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಚನ್ನಬಸಪ್ಪ ಅಪ್ಪಣ್ಣವರ್, ದಲಿತ ಯುವ ವೇದಿಕೆ ಜಿಲ್ಲಾ ಅಧ್ಯಕ್ಷ ಸುಂಕಪ್ಪ ಮಿಸಿ ಮುಂತಾದವರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *