ರಾಜ್ಯದ 11 ಜಿಲ್ಲೆಗಳಲ್ಲಿ ಮಾತ್ರ ಲಾಕ್ಡೌನ್ ಉಳಿದ 19 ಜಿಲ್ಲೆಗಳಲ್ಲಿ ಅನ್ ಲಾಕ್ ಸಿಎಂ ಯಡಿಯೂರಪ್ಪ
ಬೆಂಗಳೂರು: ಕರ್ನಾಟಕ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಗಳು ಹೆಚ್ಚಳವಾಗಿರುವ ಪ್ರಮುಖ 11 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರೆಯಲಿದೆ. ಉಳಿದ ಜಿಲ್ಲೆಗಳಲ್ಲಿ ಜೂನ್ 14ರಿಂದ ನಿರ್ಬಂಧ ಸಡಿಲಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ಕೋವಿಡ್ ಪ್ರಕರಣಗಳ ಸಂಖ್ಯೆ ಅಧಿಕವಾಗಿರುವ ಪ್ರಮುಖ ಎಂಟು ಜಿಲ್ಲೆಗಳ ಅಧಿಕಾರಿಗಳೊಂದಿ ವಿಡಿಯೋ ಸಂವಾದ ಬಳಿಕ ನಡೆದ ಕೋವಿಡ್ ಪರಿಸ್ಥಿತಿ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆಯ ಬಳಿಕ ಮುಖ್ಯಮಂತ್ರಿಗಳು ಲಾಕ್‌ಡೌನ್ ಹಾಗೂ ನಿರ್ಬಂಧ ಸಡಿಲಿಕೆ ಬಗ್ಗೆ ಮಾಹಿತಿ ನೀಡಿದರು. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಗಳು ಅಧಿಕವಾಗಿರುವ ಮಂಡ್ಯ, ಮೈಸೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ಡೌನ್ ಜೂನ್ 21ರವರೆಗೆ ಮುಂದುವರೆಯಲಿದೆ. ಈ ಜಿಲ್ಲೆಗಳಲ್ಲಿ ಈಗಾಗಲೇ ಜಾರಿಗೊಳಿಸಿರುವ ಕಠಿಣ ನಿರ್ಬಂಧದ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಜೂನ್ 14ರಿಂದ ನಿರ್ಬಂಧ ಸಡಿಲಿಕೆ ಮಾಡುತ್ತೇವೆ ಮತ್ತು ಪ್ರತಿದಿನ ರಾತ್ರಿ 7 ರಿಂದ ಬೆಳಿಗ್ಗೆ 5ರವರೆಗೆ ಕೋವಿಡ್ ಕರ್ಪ್ಯೂ ಜಾರಿಯಲ್ಲಿರುತ್ತದೆ ಎಂದು ಅವರು ವಿವರಿಸಿದರು.
ರಾಜ್ಯ ಸರಕಾರ ತೆಗೆದುಕೊಂಡ ಕೆಲವು ಪ್ರಮುಖ ನಿರ್ಧಾರಗಳು
- ರಾಜ್ಯ ಸರಕಾರ ಕೈಗೊಂಡ ಹೊಸ ನಿರ್ಧಾರಗಳು ಜೂನ್ 21ರವರೆಗೆ ಜಾರಿಯಲ್ಲಿರುತ್ತವೆ
- ರಾಜ್ಯದ 11 ಜಿಲ್ಲೆಗಳಲ್ಲಿ ಈಗಾಗಲೇ ಜಾರಿಯಲ್ಲಿರುವ ಲಾಕ್‌ಡೌನ್ ಮುಂದುವರಿಕೆ
- ಉಳಿದ ಜಿಲ್ಲೆಗಳಲ್ಲಿ ನಿರ್ಬಂಧಗಳು ಸಡಿಲಿಕೆ
- ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಜಾರಿ
- ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಾರಿ
- ಎಲ್ಲ ಕಾರ್ಖಾನೆಗಳು ಶೇಕಡಾ 50ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ
- ಗಾರ್ಮೆಂರ್ಟ್ಸ್‌ನಲ್ಲಿ ಶೇಕಡಾ 30ರಷ್ಟು ಸಿಬ್ಬಂದಿ ಹಾಜರಾತಿಯೊಂದಿಗೆ ಕಾರ್ಯಾರಂಭ ಮಾಡಲು ಅವಕಾಶ
- ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶ
- ಸಿಮೆಂಟ್ , ಸ್ಟೀಲ್ ಅಂಗಡಿ ತೆರೆಯಲು ಅವಕಾಶ
- ಪಾರ್ಕ್ ಗಳಲ್ಲಿ ಬೆಳಗ್ಗೆ 5 ರಿಂದ 10ಗಂಟೆಯ ವರೆಗೆ ಸಾರ್ವಜನಿಕರಿಗೆ ಮುಕ್ತಗೊಳಿಸಲು ಅವಕಾಶ
- ಆಟೋ ಟ್ಯಾಕ್ಸಿಯಲ್ಲಿ ಇಬ್ಬರ ಪ್ರಯಾಣಕ್ಕೆ ಅವಕಾಶ
- ಕೊರೋನಾ ನಿಯಮ ಕಟ್ಟುನಿಟ್ಟಿನ ಪಾಲನೆ ಮಾಡಬೇಕು
ಮಾತ್ರ ಲಾಕ್ಡೌನ್ ಮುಂದುವರಿಸುವುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಶೇ.5ಕ್ಕಿಂತ ಹೆಚ್ಚು ಪಾಸಿಟಿವಿಟಿ ರೇಟ್ ಇರುವ ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರೆಯಲಿದ್ದು, ಉಳಿದ ಜಿಲ್ಲೆಗಳಿಗೆ ಕೆಲವು ವಿನಾಯಿತಿ, ಕೆಲವು ನಿರ್ಬಂಧ ಸಡಿಲಿಕೆ ಮಾಡುವುದಾಗಿ ಅವರು ತಿಳಿಸಿದ್ದಾರೆ. ಎಲ್ಲ ಕಾರ್ಖಾನೆ ಶೇ 50 ಸಿಬ್ಬಂದಿ ಹಾಜರಿಯೊಂದಿಗೆ ಕಾರ್ಯನಿರ್ವಹಣೇಗೆ ಅವಕಾಶ. ಗಾರ್ಮೆಂಟ್ಸ್ ಶೇ 30 ಹಾಜರಿಯೊಂದಿಗೆ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಕೋವಿಡ್ ಲಾಕ್ಡೌನ್ ವಿನಾಯಿತಿ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವ ಸಂಪುಟದ ಸಹೋದ್ಯೋಗಿಗಳ ಜತೆ ಚರ್ಚೆ ನಡೆಸಿದರು. ನಿರ್ಬಂಧ ಸಡಿಲಿಕೆಯಾಗಲಿರುವ ಜಿಲ್ಲೆಗಳಲ್ಲಿ ಅಗತ್ಯ ವಸ್ತು ಖರೀದಿ ಸಮಯ ಹೆಚ್ಚಳ, ಕೈಗಾರಿಕೆಗೆ ವಿನಾಯಿತಿ ನೀಡುವುದು, ಶೇಕಡಾ 50ರಷ್ಟು ಸಿಬ್ಬಂದಿ ಕರ್ತವ್ಯ ನಿರ್ವಹಣೆಗೆ ಅವಕಾಶ, ಸೀಮಿತ ಅವಧಿಗೆ ಪಾರ್ಕ್ ಓಪನ್, ಬಸ್ ಸಂಚಾರ ಹಾಗೂ ಖಾಸಗಿ ವಾಹನ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆಸಲಾಯಿತು.
ಕಟ್ಟಡ ನಿರ್ಮಾಣ, ಕೃಷಿ ಕ್ಷೇತ್ರದಲ್ಲಿ ಸಂಪೂರ್ಣವಾಗಿ ಕಾರ್ಯನಿರ್ವಹಿಸಲು ಆದ್ಯತೆ ನೀಡಬೇಕೆಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಅದೇ ರೀತಿ ಹೆಚ್ಚು ಜನ ಸಂದಣಿಗೆ ಕಾರಣವಾಗುವ ಕ್ಷೇತ್ರಗಳಿಗೆ ವಿನಾಯಿತಿ ನೀಡಬಾರದೆಂದು ತಿಳಿದುಬಂದಿದೆ.
ಬೆಂಗಳೂರಿನಲ್ಲೂ ನಿರ್ಬಂಧ ಸಡಿಲಿಕೆ ಜೂನ್ 14 ರ ಬೆಳಗ್ಗೆ 6 ಗಂಟೆಯಿಂದ ಬೆಂಗಳೂರಿನಲ್ಲಿಯೂ ಕೆಲವು ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗಿದೆ. ನಿರ್ಮಾಣ ಚಟುವಟಿಕೆ ಆರಂಭಿಸಲು ಅನುಮತಿ ನೀಡಲಾಗುತ್ತದೆ. ಸಿಮೆಂಟ್, ಸ್ಟೀಲ್ ಅಂಗಡಿ ತೆಗೆಯಲು ಅವಕಾಶವಿದೆ. ಎಲ್ಲ ಕಾರ್ಖಾನೆಗಳಲ್ಲಿ ಶೇಕಡಾ 50 ಸಿಬ್ಬಂದಿ ಹಾಜರಿಯೊಂದಿಗೆ ಆರಂಭಕ್ಕೆ ಅವಕಾಶ ಗಾರ್ಮೆಂಟ್ಸ್ನಲ್ಲಿ ಶೇಕಡಾ 30 ಹಾಜರಿಯೊಂದಿಗೆ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಮದ್ಯ ಪಾರ್ಸೆಲ್ ಪಡೆಯಲು ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗುವುದು. ಬಾರ್ ಮತ್ತು ರೆಸ್ಟೋರೆಂಟ್, ವೈನ್ ಸ್ಟೋರ್, ಎಂಎಸ್ಐಎಲ್ಗಳಲ್ಲಿ ಮಧ್ಯಾಹ್ನ 2ರವರೆಗೆ ಪಾರ್ಸೆಲ್ ಅವಕಾಶವಿದೆ ಎಂದು ಅವರು ತಿಳಿಸಿದರು. ಆದರೆ ಇದೇ ಸಂದರ್ಭದಲ್ಲಿ ಕೆಎಸ್ಆರ್ಟಿಸಿ, ಬಿಎಂಟಿಸಿ ಸಂಚಾರಕ್ಕೆ ಅವಕಾಶವಿಲ್ಲವೆಂದು ತಿಳಿಸಿದ್ದಾರೆ.
ವರದಿ – ಸಂಪಾದಕೀಯ