ಚಿಕ್ಕೋಡಿ ತಾಲೂಕಿನ ನಾಯಿಂಗ್ಲಜರವರ “ಜನಸೇವೆಯೇ ಜನಾರ್ಧನ ಸೇವೆ ಎಂದರು”
ಇಂದು ಚಿಕ್ಕೋಡಿ ತಾಲೂಕಿನ ನಾಯಿಂಗ್ಲಜದಲ್ಲಿರುವ ಮ್ಯಾಗ್ನಂ ಟಫ್ ಇಂಡಿಯಾ ಪ್ರೈ.ಲಿ. ಕಾರ್ಖಾನೆಯಲ್ಲಿ, ಜೊಲ್ಲೆ ಚಾರಿಟಿ ಫೌಂಡೇಶನ್ ವತಿಯಿಂದ ನೂತನ ಆಕ್ಸಿಜನ್ ಉತ್ಪಾದನೆ ಘಟಕ ನಿರ್ಮಾಣಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಹಾಗೂ ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆಯ ಅಧ್ಯಕ್ಷರಾದ ಕು. ಜ್ಯೋತಿಪ್ರಸಾದ ಜೊಲ್ಲೆ ಹಾಗೂ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಕು. ಬಸವಪ್ರಸಾದ ಜೊಲ್ಲೆ ಯವರು ಭೂಮಿಪೂಜೆ ನೆರವೇರಿಸಿ, ಚಾಲನೆ ನೀಡಿದರು. ಈ ಘಟಕದಲ್ಲಿ ಒಂದು ನಿಮಿಷಕ್ಕೆ 570 ಲೀಟರ್ ಆಕ್ಸಿಜನ್ ಉತ್ಪಾದನೆಯಾಗಲಿದೆ. ಇನ್ನೆರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು, ಕಾರ್ಯಚಟುವಟಿಕೆ ಆರಂಭಗೊಳ್ಳಲಿದೆ. ದಿನಕ್ಕೆ 120 ಜಂಬು ಸಿಲಿಂಡರ್ ಆಕ್ಸಿಜನ್ ಉತ್ಪಾದಿಸುವ ಸಾಮರ್ಥ್ಯವನ್ನು ಈ ಘಟಕ ಹೊಂದಲಿದ್ದು, ಅವಶ್ಯಕತೆಯಿದ್ದಲ್ಲಿ ಸೋಂಕಿತರ ಚಿಕಿತ್ಸೆಗಾಗಿ ಮತ್ತಷ್ಟು ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀ ಎಂ.ಜಿ. ಹಿರೇಮಠ್, ಬೀರೇಶ್ವರ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಗಣ್ಯರು, ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ವರದಿ – ಮಹೇಶ ಶರ್ಮಾ