ಇಂದು ಮಡಿಕೇರಿಯಲ್ಲಿ ಕೋವಿಡ್ ನಿಂದ ಮಕ್ಕಳನ್ನು ರಕ್ಷಿಸಲು ಪ್ರತಿ ಜಿಲ್ಲೆಯಲ್ಲಿ ವ್ಯವಸ್ಥೆ

Spread the love

ಇಂದು ಮಡಿಕೇರಿಯಲ್ಲಿ ಕೋವಿಡ್ ನಿಂದ ಮಕ್ಕಳನ್ನು ರಕ್ಷಿಸಲು ಪ್ರತಿ ಜಿಲ್ಲೆಯಲ್ಲಿ ವ್ಯವಸ್ಥೆ

ಇಂದು ಮಡಿಕೇರಿಯಲ್ಲಿ, ಸಂಭಾವ್ಯ ಕೋವಿಡ್ ಮೂರನೇ ಅಲೆಯಿಂದ ಮಕ್ಕಳ ರಕ್ಷಣೆ ಹಾಗೂ ಆರೈಕೆಗೆ ಕೈಗೊಳ್ಳಬೇಕಾಗಿರುವ ಮುಂಜಾಗ್ರತ ಕ್ರಮಗಳ ಕುರಿತು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಸಭೆ ನಡೆಸಿ, ಹಲವು ವಿಷಯಗಳ ಬಗ್ಗೆ ಸಮಾಲೋಚಿಸಿದರು. ಕೋವಿಡ್ ಸೋಂಕಿಗೆ ಒಳಗಾದ ಮಕ್ಕಳ ಚಿಕಿತ್ಸೆಗಾಗಿ ಜಿಲ್ಲೆ ಹಾಗೂ ತಾಲ್ಲೂಕು ಆಸ್ಪತ್ರೆ ಸೇರಿ ಜಿಲ್ಲೆಯಲ್ಲಿ ಒಟ್ಟು 40 ಬೆಡ್ ಗಳ ವ್ಯವಸ್ಥೆ ಮಾಡಲಾಗಿದೆ.  ಮೂವರು ಮಕ್ಕಳ ತಜ್ಞ ವೈದ್ಯರನ್ನು ವೈದ್ಯಕೀಯ ಸೇವೆಗಾಗಿ ನೇಮಿಸಲಾಗಿದೆ. ಮಕ್ಕಳ ವಿಶೇಷ ಕೋವಿಡ್ ಸೆಂಟರ್ ನಿರ್ಮಾಣಕ್ಕಾಗಿ ಸಿದ್ಧತೆ ನಡೆಯುತ್ತಿದೆ. ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡು 3 ಮಕ್ಕಳು ಅನಾಥರಾಗಿದ್ದು, ಸಿಂಗಲ್ ಪೇರೆಂಟ್ ಮಕ್ಕಳ ಸಂಖ್ಯೆ 35 ಇದೆ. ಇಂತಹ ಮಕ್ಕಳ ಬಗ್ಗೆ ವಿಶೇಷ ಗಮನಹರಿಸಿ, ಬಿಜೆಪಿ ಸರ್ಕಾರದ ವತಿಯಿಂದ ಸಿಗುವ ಸೌಲಭ್ಯವನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಅಧಿಕಾರಿಗಳು ಹಾಜರಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *