ಕೋವಿಡ್ 3ನೇ ಅಲೆ ಎದುರಿಸಲು ಪ್ರತಿ ಜಿಲ್ಲೆಯಲ್ಲೂ ಸಿದ್ಧತೆ..
ದಾವಣಗೆರೆಯಲ್ಲಿ, ಸಂಭಾವನೀಯ ಕೋವಿಡ್ ಮೂರನೇ ಅಲೆಯಿಂದ ಮಕ್ಕಳ ರಕ್ಷಣೆಗೆ ಸಿದ್ಧತೆ ಹಾಗೂ ಅಪೌಷ್ಟಿಕ, ಅನಾಥ ಮಕ್ಕಳ ಆರೈಕೆ ಕುರಿತಾಗಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಸಭೆ ನಡೆಸಿ, ಕೆಲ ನಿರ್ದೇಶನಗಳನ್ನು ನೀಡಿದರು. ಜಿಲ್ಲೆಯಲ್ಲಿ ಒಂದು ಮಗು ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡು ಅನಾಥವಾಗಿದ್ದು, ಬಾಲಸೇವಾ ಯೋಜನೆಯಡಿ ಮಗುವಿನ ಹೆಸರು ನೋಂದಣಿಯಾಗಿದ್ದರೂ ಕೂಡ, ಮಾನವೀಯತೆ ದೃಷ್ಟಿಯಿಂದ ಆ ಮಗುವಿನ ಉನ್ನತ ಶಿಕ್ಷಣದ ಜವಾಬ್ದಾರಿಯನ್ನು ಸಂಸದರಾದ ಶ್ರೀ ಜಿ.ಎಂ. ಸಿದ್ದೇಶ್ವರ ಜಿ ಅವರು ತೆಗೆದುಕೊಂಡಿದ್ದು, ಅವರಿಗೆ ಹೃದಯಪೂರ್ವಕ ಧನ್ಯವಾದಗಳು. ಕೋವಿಡ್ ಸೋಂಕಿತ ಮಕ್ಕಳ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಯಲ್ಲಿ ಹಾಗೂ ತಾಲೂಕು ಆಸ್ಪತ್ರೆಯಲ್ಲಿ ಕೂಡ ಬೆಡ್ ಗಳ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ವ್ಯವಸ್ಥೆಯನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.
ವರದಿ – ಮಹೇಶ ಶರ್ಮಾ