ಕೂಡ್ಲಿಗಿ ತಾಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಮ್ಮತಿ: ಸಿಎಂ, ಸಚಿವ ಶ್ರೀರಾಮುಲು ಅವರಿಗೆ ಸನ್ಮಾನ…..
ತಾಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಮಹತ್ವದ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಕೂಡ್ಲಿಗಿ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು ಗುರುವಾರ ಅಭಿನಂದನೆ ಸಲ್ಲಿಸಿದರು. ಬೆಂಗಳೂರಿನ ಸಿ.ಎಂ. ಗೃಹ ಕಚೇರಿ ಕೃಷ್ಣಾದಲ್ಲಿ ಕೂಡ್ಲಿಗಿ ತಾಲೂಕಿನ ಬಿಜೆಪಿ ಮುಖಂಡರು, ಸಚಿವರು, ಕ್ಷೇತ್ರದ ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಅಭಿನಂದಿಸಿ, ಸನ್ಮಾನಿಸಿ ಗೌರವಿಸಿದರು. ರಾಜ್ಯದಲ್ಲೇ ಅತ್ಯಂತ ಹಿಂದುಳಿದ ಹಾಗೂ ಬರಪೀಡಿತ ಕೂಡ್ಲಿಗಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಒಪ್ಪಿಗೆ ಸೂಚಿಸಿದ್ದು, ಬಡವರ ಪಾಲಿನ ಆಶಾಕಿರಣವಾಗಿದ್ದು, ಕೂಡ್ಲಿಗಿ ತಾಲೂಕಿನ ಇತಿಹಾಸದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರನ್ನು ಯಾರೂ ಮರೆಯಲಾರರು. ಬಿಜೆಪಿ ಆಡಳಿತ ಅವಧಿಯಲ್ಲಿ ರೈತರು, ಕೃಷಿ ಕಾರ್ಮಿಕರು ಸೇರಿ ಎಲ್ಲರಿಗೂ ಅನುಕೂಲ ಮಾಡಿಕೊಟ್ಟಿದ್ದು, ತಾಲೂಕಿನ ಜನತೆಯ ಪರವಾಗಿ, ಹೃದಯ ತುಂಬಿದ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ ಎಂದು ಕೂಡ್ಲಿಗಿ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು ಸಿ.ಎಂ.ಯಡಿಯೂರಪ್ಪ ಅವರಿಗೆ ತಿಳಿಸಿದರು. ಇದು ಮರೆಯಲಾಗದ ಬಹುದೊಡ್ಡ ಇತಿಹಾಸ ಸೃಷ್ಟಿಯಾಗಿದೆ. ಈ ಕನಸು ನನ್ನದಾಗಿದ್ದರೂ, ಕ್ಷೇತ್ರದ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಅದನ್ನು ಈಡೇರಿಸಿದ ತಮಗೆ ಹೃದಯ ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವೆ ಎಂದು ಶಾಸಕರು ತಿಳಿಸಿದರು. ಈ ಸಂದರ್ಭದಲ್ಲಿ ಕೂಡ್ಲಿಗಿ ತಾಲೂಕಿನ ಬಿಜೆಪಿ ಹಿರಿಯ ಮುಖಂಡರಾದ ಕೆ.ಎಂ.ತಿಪ್ಪೇಸ್ವಾಮಿ, ವೀರನಗೌಡ್ರು, ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಬಂಗಾರು ಹನುಮಂತು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೂರ್ಯ ಪಾಪಣ್ಣ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಗುಂಡು ಮುಣುಗು ತಿಪ್ಪೇಸ್ವಾಮಿ, ಬಿಜೆಪಿ ಕೂಡ್ಲಿಗಿ ಮಂಡಲ ಅಧ್ಯಕ್ಷ ಚನ್ನಪ್ಪ, ಯುವ ಮೋರ್ಚಾ ತಾಲೂಕು ಅಧ್ಯಕ್ಷ ಸುನೀಲ್ ಗೌಡ್ರು, ಮುಖಂಡರಾದ ಭೀಮೇಶ್, ಎಸ್.ದುರುಗೇಶ್, ಬಡೇಲಡುಕು ಮಂಜುನಾಥ, ಟಿ.ಜಿ.ಮಲ್ಲಿಕಾರ್ಜುನ ಗೌಡ, ಪಿ.ಮಂಜುನಾಥ ನಾಯಕ, ಜಿಲ್ಲಾ ಪಂಚಾಯಿತಿ ಸದಸ್ಯ ಹುರುಳಿಹಾಳು ರೇವಣ್ಣ, ತಾಲೂಕು ಪಂಚಾಯಿತಿ ಸದಸ್ಯ ಹುಡೇಂ ಪಾಪನಾಯಕ ಸೇರಿದಂತೆ ಇತರರಿದ್ದರು.
ವರದಿ – ಚಲುವಾದಿ ಅಣ್ಣಪ್ಪ