ವೈಜ್ಞಾನಿಕ ತಂತ್ರಜ್ಞಾನ ಆಧಾರಿತ ಟ್ಯಾಬ್ ವಿದ್ಯಾರ್ಥಿಗಳ ಕಲಿಕೆಗೆ ಪೂರಕ
ನಿಪ್ಪಾಣಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ನಮ್ಮ ಸರ್ಕಾರದ ವತಿಯಿಂದ ವಿದ್ಯಾರ್ಥಿಗಳಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಉಚಿತ ಟ್ಯಾಬ್ ವಿತರಣೆ ಮಾಡಿದರು. ನಿಪ್ಪಾಣಿಯಲ್ಲಿ ಇಲ್ಲಿಯವರೆಗೆ ಸರ್ಕಾರಿ ಪದವಿ ಕಾಲೇಜು ಇರಲಿಲ್ಲ. ಆದರೆ ಪದವಿ ಕಾಲೇಜು ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿಸಿ, ಗಡಿಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿದ ಉನ್ನತ ಶಿಕ್ಷಣ ಸಚಿವರಾದ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಜಿ ಅವರಿಗೆ ಮನಃಪೂರ್ವಕ ಧನ್ಯವಾದಗಳು. ಪ್ರಸ್ತುತ ಆನ್ ಲೈನ್ ತರಗತಿ ನಡೆಯುತ್ತಿದ್ದು ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಸಾಧನೆಯ ಹಾದಿಯತ್ತ ಹೆಜ್ಜೆ ಹಾಕಿ ಎಂದು ಹಾರೈಸಿದರು. ಬಳಿಕ ವಿದ್ಯಾರ್ಥಿಗಳೊಂದಿಗೆ ತುಸು ಸಮಯ ಕಳೆದರು. ಈ ಸಂದರ್ಭದಲ್ಲಿ ತಹಶೀಲ್ದಾರ್, ಬಿಇಒ, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ವರದಿ – ಮಹೇಶ ಶರ್ಮಾ