ಪ್ರಾಥಮಿಕದಿಂದ ಪ್ರೌಢಶಾಲಾ ಗ್ರೇಡ್-2 ಹುದ್ದೆಗಳಿಗೆ ಪದೋನ್ನತಿ ನೀಡುವ ಸಂಬಂಧ ಶಾಸಕರಿಗೆ ಮನವಿ…
ಪ್ರಾಥಮಿಕದಿಂದ ಪ್ರೌಢಶಾಲಾ ಗ್ರೇಡ್-2 ಹುದ್ದೆಗಳಿಗೆ ಪದೋನ್ನತಿ ನೀಡುವ ಸಂಬಂಧ ದಿನಾಂಕ 12-05-2021 ರಂದು ಮಾನ್ಯ ಕರ್ನಾಟಕ ಆಡಳಿತ ನ್ಯಾಯ ಮಂಡಳಿ ನೀಡಿರುವ ಅಂತಿಮ ತೀರ್ಪಿನ ಆದೇಶವನ್ನು ಯಥಾವತ್ತಾಗಿ ಜಾರಿಗೊಳಿಸಿ ರಾಜ್ಯದ (6-8) ಪದವೀಧರ ಪ್ರಾಥಮಿಕ ಶಿಕ್ಷಕರಿಗೆ ಬಡ್ತಿ ಸೌಲಭ್ಯ ಕಲ್ಪಿಸಬೇಕೆಂದು ರಾಜ್ಯದ ಜಿ.ಪಿ.ಟಿ (6-8) ಶಿಕ್ಷಕರ ಪರವಾಗಿ ಶ್ರೀ ಮಾನ್ಯ ದುರ್ಯೋಧನ ಐಹೊಳೆ ಶಾಸಕರು, ರಾಯಬಾಗ ವಿಧಾನಸಭಾ ಕ್ಷೇತ್ರ ಹಾಗೂ ಅಧ್ಯಕ್ಷರು, ಆದಿಜಾಂಬವ ಅಭಿವೃದ್ಧಿ ನಿಗಮ ಬೆಂಗಳೂರು. ಕರ್ನಾಟಕ ಸರ್ಕಾರ ರವರು ಜಿಪಿಟಿ ಜಿಲ್ಲಾ ಘಟಕ ಚಿಕ್ಕೋಡಿ ಹಾಗೂ ರಾಯಬಾಗ ತಾಲೂಕ ಘಟಕ ಮಾಡಿದ ಮನವಿಯಂತೆ ಸನ್ಮಾನ್ಯ ಶ್ರೀ ಮುಖ್ಯಮಂತ್ರಿಗಳಿಗೆ ಮತ್ತು ಸನ್ಮಾನ್ಯ ಶಿಕ್ಷಣ ಸಚಿವರಿಗೆ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಕೆಎಟಿ ಆದೇಶವನ್ನು ಯಥಾವತ್ತಾಗಿ ಜಾರಿಗೊಳಿಸುವ ಮೂಲಕ ಜಿಪಿಟಿ ಶಿಕ್ಷಕರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಹಾಗೂ ಈ ಕೂಡಲೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಅಗತ್ಯ ಆದೇಶ ರವಾನಿಸುವಂತೆ ಹಾಗೂ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಈ ಕುರಿತು ಕ್ರಮವಹಿಸುವಂತೆ ಸೂಚಿಸುವಂತೆ ಆತ್ಮೀಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಸಮಸ್ತ ಜಿಪಿಟಿ ಬಂಧುಗಳು ಸೇರಿ ಮನವಿಯನ್ನು ಸಲ್ಲಿಸಲಾಯಿತು.
ವರದಿ – ಮಹೇಶ ಶರ್ಮಾ