ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ ನೀಡಿ, ಪ್ರವಾಹ ಪರಿಸ್ಥಿತಿ ಬಗ್ಗೆ ಮುಂಜಾಗ್ರತೆ.
ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಯಡೂರವಾಡಿ ಗ್ರಾಮಕ್ಕೆ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ ನೀಡಿ, ಪ್ರವಾಹ ಪರಿಸ್ಥಿತಿ ಕುರಿತು ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಕುರಿತು ಸ್ಥಳೀಯ ಜನಪ್ರತಿಧಿಗಳೊಂದಿಗೆ ಸಭೆ ನಡೆಸಿ,ಸಮಾಲೋಚನೆ ನಡೆಸಿದರು. ಪ್ರವಾಹ ಪರಿಸ್ಥಿತಿ ಎದುರಾದರೆ ಜನರಿಗೆ ಸಮಸ್ಯೆಯಾಗಬಾರದು. ಹೀಗಾಗಿ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಈಗಾಗಲೇ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು. ವರದಿ – ಮಹೇಶ ಶರ್ಮಾ