ಕಂಪ್ಲಿ ವಿಜಯನಗರ ಜಿಲ್ಲೆ ಸೇರ್ಪಡೆ ಪ್ರಕರಣಕ್ಕೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ರಾಜ್ಯ ಸರ್ಕಾರ, ಜುಲೈ 20 ಕ್ಕೆ ವಿಚಾರಣೆ.
ಕಂಪ್ಲಿ ವಿಜಯನಗರ ಜಿಲ್ಲೆಗೆ ಸೇರ್ಪಡಿಸುವಂತೆ ಸಲ್ಲಿಸಲಾಗಿದ್ದ ಪಿಐಎಲ್ ನ ವಿಚಾರಣೆಯನ್ನು ಮುಖ್ಯ ನ್ಯಾಯಾಧೀಶರಾದ ಜಸ್ಟಿಸ್ ಅಭಯ್ ಎಸ್ ಓಕಾ ಅವರ ನೇತೃತ್ವ ಒಳಗೊಂಡ ದ್ವಿಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿದ್ದು ವಿಚಾರಣೆ ನಡೆಸಿದ ನ್ಯಾಯಾಲಯ ಕಳೆದ ವಿಚಾರಣೆಯ ಆದೇಶದಂತೆ ಆಕ್ಷೇಪಣೆಯನ್ನ ಸಲ್ಲಿಸಲಾಗಿದೆಯೇ ಎಂಬುದರ ಬಗ್ಗೆ ರಾಜ್ಯ ಸರ್ಕಾರವನ್ನು ಪ್ರಶ್ನಿಸಲಾಗಿದ್ದು ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ರಾಜ್ಯ ಸರ್ಕಾರಿ ವಕೀಲರು ಆಕ್ಷೇಪಣೆ ಸಲ್ಲಿಸಲು ಮತ್ತೊಮ್ಮೆ ಕಾಲಾವಕಾಶ ಕೋರಿದರು, ರಾಜ್ಯ ಸರ್ಕಾರದ ಮನವಿಯನ್ನ ಪುರಸ್ಕರಿಸಿದ ನ್ಯಾಯಾಲಯ ಜುಲೈ 20 ಕ್ಕೆ ವಿಚಾರಣೆಯನ್ನ ಮುಂದೂಡಲಾಯಿತು ಎಂದು ಪಿಐಎಲ್ ಅರ್ಜಿ ಸಲ್ಲಿಸಿದ್ದ ಅರ್ಜಿದಾರರಾದ ವಕೀಲ ಮೋಹನ್ ಕುಮಾರ್ ದಾನಪ್ಪ ತಿಳಿಸಿದರು ಕಂಪ್ಲಿ ತಾಲೂಕನ್ನು ವಿಜಯನಗರ ಜಿಲ್ಲೆಗೆ ಸೇರಿಸದೇ ಕೈ ಬಿಟ್ಟಿರುವುದನ್ನು ಪ್ರಶ್ನಿಸಿ ಸರ್ಕಾರದ ಅಧಿಸೂಚನೆಯನ್ನ ರದ್ದು ಪಡಿಸಿ ಕಂಪ್ಲಿ ತಾಲೂಕನ್ನು ವಿಜಯನಗರ ಜಿಲ್ಲೆಗೆ ಸೇರ್ಪಡಿಸುವಂತೆ ರಾಜ್ಯ ಹೈಕೋರ್ಟ್‌ನಲ್ಲಿ 2021 ಮಾರ್ಚ್ 10 ರಂದು ಭಾರತೀಯ ದಲಿತ ಪ್ಯಾಂಥರ್ ಸಂಘಟನೆ ಮತ್ತು ಕಂಪ್ಲಿ ತಾಲೂಕು ವಕೀಲರ ಬಳಗ ಹಾಗೂ ಕಂಪ್ಲಿ ತಾಲೂಕು ವಿಜಯನಗರ ಜಿಲ್ಲೆಗೆ ಸೇರ್ಪಡೆ ಹೋರಾಟ ಸಮಿತಿ ಯವರು ಸಾರ್ವಜನಿಕ ಹಿತಾಸಕ್ತಿ ಪಿಐಎಲ್ ಅರ್ಜಿಯನ್ನು ಸಲ್ಲಿಸಿದ್ದರು.
ವರದಿ – ಮಹೇಶ ಶರ್ಮಾ