ರಸ್ತೆಗಳು ಮತ್ತು ಇತರೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 50 ಕೋಟಿ ರೂ ಬಿಡುಗಡೆಗೆ ಸಭೆ.
ಇಂದು ಬೆಂಗಳೂರಿನ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಹಾಸನ ಜಿಲ್ಲೆಯ ಶ್ರವಣಬೆಳಗೊಳ ಮತ್ತಿತರ ಜೈನ ಪುಣ್ಯಕ್ಷೇತ್ರದಲ್ಲಿ ವಸತಿಗೃಹಗಳು, ಪಾದಚಾರಿ ರಸ್ತೆಗಳು ಮತ್ತು ಇತರೆ ಮೂಲಭೂತ ಸೌಕರ್ಯಗಳನ್ನು 50 ಕೋಟಿ ರೂ. ವೆಚ್ಚದಲ್ಲಿ ಹಂತಹಂತವಾಗಿ ಅಭಿವೃದ್ಧಿಪಡಿಸಲು ಕೈಗೊಳ್ಳುವ ಕ್ರಮಗಳ ಕುರಿತು ಚರ್ಚಿಸಲು ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಶ್ರವಣಬೆಳಗೊಳದ ಮುಖ್ಯಸ್ಥರೊಂದಿಗೆ ರಾಜ್ಯ ಸರ್ಕಾರದ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ (ತಾತ್ಯಾ) ಪಾಟೀಲ ಅವರು ಸಭೆ ನಡೆಸಿ, ಯಾವ ರೀತಿ ಅಭಿವೃದ್ಧಿಪಡಿಸಬೇಕು ಎಂಬುದರ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಮಯದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಶ್ರವಣಬೆಳಗೊಳದ ಮುಖಂಡರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ವರದಿ – ಮಹೇಶ ಶರ್ಮ