ಗ್ರಾಮ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾಗಲು ಸಾಧ್ಯ ಎಂದ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು..

Spread the love

ಗ್ರಾಮ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾಗಲು ಸಾಧ್ಯ ಎಂದ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು..

ಇಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಗವಾಡದ ಕುಸನಾಳ ಹಾಗೂ ಮೊಳವಾಡ ಗ್ರಾಮಕ್ಕೆ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ ನೀಡಿ, ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರೊಂದಿಗೆ ಸಭೆ ನಡೆಸಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಗ್ರಾಮ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾಗಲು ಸಾಧ್ಯ. ಈ ನಿಟ್ಟಿನಲ್ಲಿ ನನ್ನ ಮತಕ್ಷೇತ್ರದ ಪ್ರತಿ ಗ್ರಾಮಕ್ಕೆ ಭೇಟಿ ನೀಡುತ್ತಿದ್ದು, ಅಲ್ಲಿನ ಸಮಸ್ಯೆಯನ್ನು ಮನಗಂಡಿದ್ದೇನೆ. ಶೀಘ್ರದಲ್ಲಿ ಜನರ ಸಮಸ್ಯೆ ಬಗೆಹರಿಸಲು ಶ್ರಮಿಸುತ್ತೇನೆ ಎಂದು ಭರವಸೆ ನೀಡುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ವರದಿ –  ಮಹೇಶ ಶರ್ಮಾ

Leave a Reply

Your email address will not be published. Required fields are marked *