ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಶ್ರೀ ಕೆ.ಶೇಖರಪ್ಪ ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಭೆ …
ನಿನ್ನೆಯ ದಿವಸ ಶಿಕಾರಿಪುರದ ತಮ್ಮ ಸ್ವಗೃಹದಲ್ಲಿ ನಿಧನರಾದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಶ್ರೀ ಕೆ.ಶೇಖರಪ್ಪ ಅವರ ಆತ್ಮಕ್ಕೆ ಶಾಂತಿ ಕೋರಿ ಭದ್ರಾ ಕಾಡಾ ಕಚೇರಿಯಲ್ಲಿ ಹಾಲಿ ಅಧ್ಯಕ್ಷರಾದ ಶ್ರೀಮತಿ ಪವಿತ್ರ ರಾಮಯ್ಯ ಅವರ ಸಮ್ಮುಖದಲ್ಲಿ ಶ್ರದ್ಧಾಂಜಲಿ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶೇಖರಪ್ಪ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ರಾಜ್ಯ ಸರ್ಕಾರದೊಂದಿಗೆ ಸಮನ್ವಯ ಸಾಧಿಸಿ ಸಾಕಷ್ಟು ಅನುದಾನ ಒದಗಿಸಿ ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ನಿರಂತರ ಅಭಿವೃದ್ದಿ ಕೆಲಸಗಳು ನಡೆಯುವಂತೆ ನೋಡಿಕೊಂಡಿದ್ದಾರೆ ರೈತರಿಗೆ ಮೂಲಭೂತ ಸೌಕರ್ಯ ಒದಗಿಸಲು ಶ್ರಮಿಸಿದ್ದಾರೆ, ಇದರಿಂದ ಅಚ್ಚುಕಟ್ಟು ವ್ಯಾಪ್ತಿಯ ರೈತರಿಗೆ ಬಹಳಷ್ಟು ಅನುಕೂಲವಾಗಿದೆ ಎಂದು ನೆನಪಿಸಿಕೊಂಡರು. ಅವರ ಜೀವಿತಾವಧಿಯಲ್ಲಿ ಬಿಜೆಪಿ ಪಕ್ಷಕ್ಕಾಗಿ ಹಾಗೂ ಸಮಾಜಕ್ಕಾಗಿ ದುಡಿದಿದ್ದಾರೆ ಜೊತೆಗೆ ವಿವಿಧ ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ಕಷ್ಟದಲಿದ್ದ ಬಡ ಜನರಿಗೆ ನೆರವಾಗಿದ್ದಾರೆ ಎಂದು ಈ ಸಂದರ್ಭದಲ್ಲಿ ನೆನಪಿಸಿಕೊಂಡರು. ಅವರ ಅಗಲಿಕೆ ರೈತರಿಗೆ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗದವರಿಗೆ ಭಗವಂತ ನೀಡಲಿ ಎಂದು ಈ ಸಮಯದಲ್ಲಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಕೃಷ್ಣಮೂರ್ತಿ ಕುಲಕರ್ಣಿ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಅರುಣ್, ಸಹಕಾರ ಇಲಾಖೆಯ ನಿರ್ದೇಶಕರಾದ ಶ್ರೀಮತಿ ನಯನ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವರದಿ – ಮಹೇಶ ಶರ್ಮಾ