ಬಿಜೆಪಿ ಒಕ್ಕೂಟ ಸರ್ಕಾರದ #ಪೆಟ್ಟ್ರೋಲ್ ಡಿಸೇಲ್ ಮತ್ತು ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ವಿರುದ್ಧ KPCC ಆದೇಶದ ಮೇರೆಗೆ ಶ್ರೀಇಕ್ಬಾಲ್ ಅನ್ಸಾರಿ….
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಬೆಲೆ ಏರಿಕೆ ಖಂಡಿಸಿ ಇಂದು ಕಾಂಗ್ರೇಸ್ ಪಕ್ಷದ ವತಿಯಿಂದ “ಸೈಕಲ್ ಜಥಾ” ರ‌್ಯಾಲಿ ಮುಖಾಂತರ ಇಂದು ಗಂಗಾವತಿ ನಗರದಲ್ಲಿ ಬೃಹತ್ ಪ್ರತಿಭಟನೆ ಜರುಗಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಮಾತನಾಡಿ ದೇಶದಲ್ಲಿ ಬಿಜೆಪಿ ಸರ್ಕಾರ ನರಕ ಸೃಷ್ಟಿಸುತ್ತಿದೆ. ಜನರಿಗೆ ತಪ್ಪು ಮಾಹಿತಿ ನೀಡಿ, ಸುಳ್ಳು ಹೇಳಿ ನರೇಂದ್ರ ಮೋದಿ ಅಧಿಕಾರ ಮಾಡುತ್ತಿದ್ದಾರೆ. ಮೋದಿ ಈ ದೇಶದ ಜನರ ರಕ್ತ ಹೀರುತ್ತಿದ್ದಾರೆ. ಬೆಲೆ ಏರಿಕೆ ಮಾಡಿ ಜನರ ರಕ್ತ ಕುಡಿಯುತ್ತಿದ್ದಾರೆ. ತಿಗಣೆಯಂತೆ ಜನರ ರಕ್ತ ಹೀರುತ್ತಿರುವ ಮೋದಿಗೆ ನಾಚಿಕೆ ಆಗುವುದಿಲ್ಲವಾ? ಎಂದು ವಾಗ್ದಾಳಿ ನಡೆಸಿದ್ದಾರೆ. ಮನಮೋಹನ್ ಸರ್ಕಾರದದಲ್ಲಿ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಭರತನಾಟ್ಯ ಮಾಡಿದರು ಹಾಗೂ ಅವರು ಹಾಹಾಕಾರ ಸೃಷ್ಟಿ ಮಾಡಿದ್ದರು. ನರೇಂದ್ರ ಮೋದಿ ಅವರು ಪ್ರತಿಭಟನೆ ಮಾಡಿದ್ದರು. ಜನರಿಗೆ ಸುಳ್ಳು ಭರವಸೆ ನೀಡಿ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದರು. ಅಚ್ಛೇ ದಿನ್ ಆಯೇಂಗೆ ಎಂದು ಹೇಳಿದ್ದರು. ಇವತ್ತು ನರಕದ ದಿನಗಳ ಬಂದಿವೆ. ನಾವು ನರಕ ನೋಡಿರಲಿಲ್ಲ. ಆದರೆ, ಇದೀಗ ನರಕದ ದಿನಗಳನ್ನು ನೋಡುತ್ತಿದ್ದೇವೆ. ಈಗ ಕೋವಿಡ್ ಸಂಕಷ್ವವಿದೆ. ಈ ಸಂದರ್ಭದಲ್ಲಿ ಬೆಲೆ ಏರಿಕೆ ಮಾಡಿದ್ದಾರೆ. ಇದರಿಂದ ಜನ ಸಾಮಾನ್ಯರು ಜೀವನ ನಡೆಸುವುದು ಹೇಗೆ? ತೈಲ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹರಿಹಾಯ್ದಿದ್ದಾರೆ.
ವರದಿ – ಸಂಪಾದಕೀಯ