ಲಂಚ ಪಡೆಯುತ್ತಿದ್ದ ಪಿಎಸ್ಐ ಎಸಿಬಿ ಬಲೆಗೆ…

Spread the love

ಲಂಚ ಪಡೆಯುತ್ತಿದ್ದ ಪಿಎಸ್ಐ ಎಸಿಬಿ ಬಲೆಗೆ…

ಬೆಳಗಾವಿ- ಮಹಾರಾಷ್ಟ್ರದಲ್ಲಿ ಗುಟಕಾ ಉತ್ಪಾದನೆ,ಮತ್ತು ಮಾರಾಟ,ಎರಡಕ್ಕೂ ಕಟ್ಟುನಿಟ್ಟಿನ ನಿರ್ಭಂಧವಿದೆ ಹೀಗಾಗಿ ಮಹಾರಾಷ್ಟ್ರದ ಗುಟಕಾ ಕಂಪನಿಗಳು ಕರ್ನಾಟಕ ರಾಜ್ಯಕ್ಕೆ ವಲಸೆ ಬಂದಿವೆ,ಇಲ್ಲಿ ವಲಸೆ ಬಂದಿರುವ ಗುಟಕಾ ಕಾರ್ಖಾನೆಗಳು ಬ್ರಷ್ಟರಿಗೆ ಆಹಾರವಾಗಿವೆ‌ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಶಿಪ್ಟ್ ಆಗಿರುವ,ಗುಟಕಾ ಕಂಪನಿಯೊಂದಕ್ಕೆ ಬೆದರಿಸಿ ಲಂಚ ಪಡೆಯುತ್ತಿದ್ದ ಪಿ ಎಸ್ ಐ ಯೊಬ್ಬ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ‌. ‘ಅನಧಿಕೃತವಾಗಿ ಪಾನ್ ಮಸಾಲಾ ಕಾರ್ಖಾನೆ ನಡೆಸುತ್ತಿದ್ದೀರಿ’ ಎಂದು ಹೆದರಿಸಿ ಅದರ ಮಾಲಿಕನಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸದಲಗಾ ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಇಬ್ಬರು ಕಾನ್ಸಟೆಬಲ್ ಗಳು ಭೃಷ್ಟಾಚಾರ ನಿಗೃಹ ದಳ(ಎಸಿಬಿ)ದ ಬಲೆಗೆ ಬಿದ್ದಿದ್ದಾರೆ. ನಿನ್ನೆ ಸಂಜೆ ಠಾಣೆಯ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಪಿಎಸ್ಐ ಕುಮಾರ ಹಿತ್ತಲಮನಿ ಹಾಗೂ ಕಾನ್ಸಟೆಬಲ್ ಗಳಾದ ಮಾಯಪ್ಪಾ ಗಡ್ಡೆ ಮತ್ತು ಶ್ರೀಶೈಲ ಮಂಗಿ ಅವರನ್ನು ರೂ.೪೦ ಸಾವಿರ ಲಂಚ ಪಡೆಯುವಾಗ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಲಗಡಿಗ್ರಾಮ ಬೋರಗಾಂವದಲ್ಲಿ ಪಾನ್ ಮಸಾಲಾ ಕಾರ್ಖಾನೆ ನಡೆಸುತ್ತಿದ್ದ ಇಚಲಕರಂಜಿ ಮೂಲಕ ರಾಜು ಪಾಶ್ಚಾಪುರೆ ಅವರನ್ನು ಹೆದರಿಸಿದ್ದ ಪಿಎಸ್ಐ ಮತ್ತು ಪೇದೆಗಳು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಕಾರ್ಖಾನೆ ಮಾಲಿಕ ಎಸಿಬಿಗೆ ದೂರು ಸಲ್ಲಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು ಠಾಣೆಯ ಮೇಲೆ ದಾಳಿ ನಡೆಸಿದರು. ಎಸಿಬಿ ಎಸ್ಪಿ ಬಿ.ಎಸ್.ನ್ಯಾಮಗೌಡರ ಮಾರ್ಗದರ್ಶನ ಮತ್ತು ಡಿವೈಎಸ್ಪಿ ಜೆ.ಎಂ.ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್ಸಪೆಕ್ಟರ್ ಗಳಾದ ಹೆಚ್ ಸುನಿಲಕುಮಾರ, ಎ.ಎಸ್.ಗುದಿಗೊಪ್ಪ, ಧಾರವಾಡದ ಅಲಿ ಶೇಖ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *