ಕೊರೋನಾ ಸಂಕಷ್ಟದ ನಡುವೆ ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ಪತ್ರಕರ್ತರ ಕಾರ್ಯ ಶ್ಲಾಘನೀಯ….
ಇಂದು ಚಿಕ್ಕೋಡಿಯಲ್ಲಿ ಪತ್ರಕರ್ತರನ್ನು ಫ್ರಂಟ್ ಲೈನ್ ವಾರಿಯರ್ಸ್ ಎಂದು ಪರಿಗಣಿಸಿರುವ ಹಿನ್ನೆಲೆಯಲ್ಲಿ ಅವರಿಗೆ ಜೊಲ್ಲೆ ಚಾರಿಟಿ ಫೌಂಡೇಶನ್ ವತಿಯಿಂದ ಪತ್ರಕರ್ತರಿಗೆ ಹಾಗೂ ಮಾಧ್ಯಮದವರಿಗೆ ಕೋವಿಡ್ -19ತಪಾಸಣಾ ಕಿಟ್ ಹಾಗೂ ಅಗತ್ಯವಿರುವರಿಗೆ ಹೋಮ್ ಐಸಿಲೋಷನ್ ಕಿಟ್ ಗಳನ್ನು ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಕು. ಬಸವಪ್ರಸಾದ ಜೊಲ್ಲೆ ಯವರು ವಿತರಿಸಿದರು. ಕೊರೋನಾ ಸಂಕಷ್ಟದ ಸಂದರ್ಭದಲ್ಲೂ ಜೀವದ ಹಂಗು ತೊರೆದು ನಿಖರ ಹಾಗೂ ವಸ್ತುನಿಷ್ಠ ವರದಿ ನೀಡಲು ಅವಿರತವಾಗಿ ಶ್ರಮಿಸುತ್ತಿರುವ ಪತ್ರಕರ್ತರ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ವರದಿ – ಮಹೇಶ ಶರ್ಮಾ