ಸಸಿ ನೆಡುವ ಕಾರ್ಯಕ್ರಮಕ್ಕೆ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಕು. ಬಸವಪ್ರಸಾದ ಜೊಲ್ಲೆ ಯವರು ಚಾಲನೆ…

Spread the love

ಸಸಿ ನೆಡುವ ಕಾರ್ಯಕ್ರಮಕ್ಕೆ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಕು. ಬಸವಪ್ರಸಾದ ಜೊಲ್ಲೆ ಯವರು ಚಾಲನೆ…

ಇಂದು ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ದೇಶದ ಅಖಂಡತೆಗೆ ಶ್ರಮಿಸಿದ ಧೀಮಂತ ನಾಯಕ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ ನಿಮಿತ್ತವಾಗಿ, ನಿಪ್ಪಾಣಿ ಬಿಜೆಪಿ ಗ್ರಾಮೀಣ ಯುವಮೋರ್ಚಾ ವತಿಯಿಂದ ಸಸಿ ನೆಡುವ ಕಾರ್ಯಕ್ರಮಕ್ಕೆ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಕು. ಬಸವಪ್ರಸಾದ ಜೊಲ್ಲೆ ಯವರು ಚಾಲನೆ ನೀಡಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆಯ ನಿಮಿತ್ತ ಬಿಜೆಪಿ ಪಕ್ಷ ಬೂತ್ ಮಟ್ಟದಲ್ಲಿ ಹಲವು ಪರಿಸರ ಸ್ನೇಹಿ ಕಾರ್ಯಕ್ರಮ ಹಮ್ಮಿಕೊಂಡಿದೆ. ನಿಪ್ಪಾಣಿ  ತಾಲೂಕಿನಲ್ಲಿ ಸುಮಾರು 50 ಸಾವಿರ ಸಸಿಗಳನ್ನು  ನೆಡುವ ಗುರಿಯಿಟ್ಟುಕೊಂಡಿದ್ದೇವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮೀಣ ಅಧ್ಯಕ್ಷರಾದ ಶ್ರೀ ಪವನ ಪಾಟೀಲ, ತಾ.ಪಂ.  ಸದಸ್ಯರಾದ ಶ್ರೀ ದಾದಾಸೋ ನರಗಟ್ಟೆ, ಶ್ರೀ ನಿತೇಶ ಖೋತ, ಶ್ರೀ ದೇವಪ್ಪಾ ದೇವಕತೆ,  ಗ್ರಾಮೀಣ ಯುವ ಮೋರ್ಚಾ ಅಧ್ಯಕ್ಷರಾದ ಶ್ರೀ ರಾಜು ಭದ್ರಗಡೆ, ಹಾಗೂ ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *