ಅಮೃತ್ ಮಹೋತ್ಸವದ ಅಂಗವಾಗಿ ಉತ್ತರ ಕರ್ನಾಟಕದ ಆಹಾರ ಪದ್ಧತಿಗಳ ಅಡುಗೆ ಸ್ಪರ್ಧೆ, ರಸಪ್ರಶ್ನೆ ಮತ್ತು75ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ರಂಗೋಲಿ ಸ್ಪರ್ಧೆ…
ಕುಂದಗೋಳ ತಾಲೂಕಿನ ಅಲ್ಲಾಪೂರ ಗ್ರಾಮದಲ್ಲಿ ಕೃಷಿ ವಿಶ್ವವಿದ್ಯಾಲಯ ಧಾರವಾಡ, ಅಖಿಲ ಭಾರತ ಸಮನ್ವಯ ಸಂಶೋಧನಾ ಯೋಜನೆ ಗೃಹ ವಿಜ್ಞಾನ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಗೋಳ ಇವರ ಸಹಯೋಗದೊಂದಿಗೆ
ಭಾರತ ಅಮೃತ್ ಮಹೋತ್ಸವದ ಅಂಗವಾಗಿ ಉತ್ತರ ಕರ್ನಾಟಕದ ಆಹಾರ ಪದ್ಧತಿಗಳ ಅಡುಗೆ ಸ್ಪರ್ಧೆ, ರಸಪ್ರಶ್ನೆ ಮತ್ತು75ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ರಂಗೋಲಿ ಸ್ಪರ್ಧೆಗಳನ್ನು ಅಲ್ಲಾಪೂರ ಗ್ರಾಮದ ಶಾಲಾ ಆವರಣದಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಟಾಸ್ಕ್ ಫೋರ್ಸ್ ಕಮೀಟಿಯ ಅಧ್ಯಕ್ಷರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರಾದ ಮಲ್ಲಿಕಾರ್ಜುನ ರಡ್ಡೇರ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಹಕ್ಕು ಆಯೋಗದ ಸದಸ್ಯರು ಅಶೋಕ್ ಯರಗಟ್ಟಿ ಸೇರಿ ಉದ್ಘಾಟಿಸಿದರು. ನಂತರ ಮಾತನಾಡಿದ ಮಲ್ಲಿಕಾರ್ಜುನ ರಡ್ಡೇರ ನಮ್ಮ ಗ್ರಾಮದಲ್ಲಿ ಮಹಿಳೆಯರಿಗೆ ಅಡುಗೆ ಸ್ಪರ್ಧೆ, ರಂಗೋಲಿ ಸ್ಪರ್ಧೆ ಮತ್ತು ಮಕ್ಕಳಿಗೆ ರಸಪ್ರಶ್ನೆ ಸ್ಪರ್ಧೆ ಆಯೋಜಿಸಿದ್ದಕ್ಕೆ ಧನ್ಯವಾದ ತಿಳಿಸಿ, ಗ್ರಾಮೀಣ ಭಾಗದಲ್ಲಿ ಇಂತಹ ಕಾರ್ಯಕ್ರಮಗಳ ಇನ್ನೂ ಹೆಚ್ಚು ಆಗಲಿ ಎಂದು ಸಂತಸ ವ್ಯಕ್ತಪಡಿಸಿದರು. ಹಿರಿಯ ವಿಜ್ಞಾನಿಗಳಾದ ಆದ ಡಾ. ಸಣ್ಣಪಾಪಮ್ಮ ಕೆ.ಜೆ. ಅವರು ಪ್ರಾಸ್ತಾವಿಕ ನುಡಿಗಳಲ್ಲಿ ಕೃಷಿ ವಿಶ್ವವಿದ್ಯಾಲಯ ಧಾರವಾಡ, ಅಖಿಲ ಭಾರತ ಸಮನ್ವಯ ಸಂಶೋಧನಾ ಯೋಜನೆ ವತಿಯಿಂದ ಮಹಿಳೆಯರಿಗೆ ಮತ್ತು ರೈತರಿಗೆ ಅನುಕೂಲ ಆಗುವಂತೆ ಹಲವಾರು ಕಾರ್ಯಕ್ರಮಗಳನ್ನು ಮಾಡಿ, ನಂತರ ಕೃಷಿ ವಿಶ್ವವಿದ್ಯಾಲಯದಲ್ಲಿ ತಯಾರಿಸಿದ ಹಲವಾರು ತಂತ್ರಜ್ಞಾನಗಳ ವಸ್ತು ಪ್ರದರ್ಶನ ಏರ್ಪಡಿಸಿ ರೈತರು ಮತ್ತು ಮಹಿಳೆಯರು ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು ಮತ್ತು ಇನ್ನೂ ಹಲವಾರು ವಿಷಯಗಳ ಬಗ್ಗೆ ಮಾತನಾಡಿದರು. ಕುಂದಗೋಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾದ ಅನ್ನಪೂರ್ಣ ಸಂಗಳದ ಮಾತನಾಡಿ ಮಹಿಳೆಯರು ಮತ್ತು ಮಕ್ಕಳು ಇಂತಹ ಕಾರ್ಯಕ್ರಮದಲ್ಲಿ ಅತಿಹೆಚ್ಚು ಭಾಗವಹಿಸಬೇಕು, ಮಕ್ಕಳು ತಮ್ಮ ಜೀವನದಲ್ಲಿ ಯಾವ ರೀತಿ ಬದಲಾವಣೆ ಆಗಬೇಕು, ವಿದ್ಯಾರ್ಥಿಗಳು ತಮ್ಮ ಮುಂದಿನ ಭವಿಷ್ಯವನ್ನು ಯಾವ ರೀತಿ ರೂಪಿಸಿಕೊಳ್ಳಬೇಕು. ಮಕ್ಕಳ ಆರೋಗ್ಯ ಬಗ್ಗೆ ಕಾಳಜಿ ಹೇಗೆ ಇರಬೇಕು ಮತ್ತು ವಿಶೇಷವಾಗಿ ಮಕ್ಕಳಿಗೆ ಐದು ಪಂಚಸೂತ್ರಗಳ ಬಗ್ಗೆ ಮಾಹಿತಿಯನ್ನು ನೀಡಿದರು. ರಸಪ್ರಶ್ನೆ, ರಂಗೋಲಿ ಮತ್ತು ಅಡುಗೆ ಸ್ಪರ್ಧೆಗಳನ್ನು ಕಾರ್ಯಕ್ರಮದ ಆಯೋಜಕರು ವೀಕ್ಷಣೆ ಮಾಡಿ ಅಂಕಗಳನ್ನು ನೀಡಿದರು. ಈ ಸ್ಪರ್ಧೆಗಳಲ್ಲಿ ಗೆದ್ದವರಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಡಾ. ಮಂಜುಳಾ ಪಾಟೀಲ ನಡೆಸಿಕೊಟ್ಟರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಅಶೋಕ್ ಯರಗಟ್ಟಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕು ಆಯೋಗದ ಸದಸ್ಯರು, ಗೌರವಾನ್ವಿತ ಆಹ್ವಾನಿತರಾಗಿ ಚಿದಾನಂದ್ ಪೂಜಾರ್ ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜೇಶ್ವರಿ ಸಾಲುಗಟ್ಟಿ, ಮಕ್ಕಳ ಕಲ್ಯಾಣ ಸಮಿತಿ, ಧಾರವಾಡ, ಶ್ರೀಮತಿ ಅನ್ನಪೂರ್ಣ ಸಂಗಳದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಂದಗೋಳ, ಕಾರ್ಯಕ್ರಮದ ಆಯೋಜಕರಾದ ಡಾ.ಸಣ್ಣಪಾಪಮ್ಮ ಕೆ.ಜೆ., ಡಾ.ಗೀತಾ ಚೆನ್ನಾಳ , ಡಾ. ಮಂಜುಳಾ ಪಾಟೀಲ, ಯರಗುಪ್ಪಿ ವಲಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರಾದ ರಾಜೇಶ್ವರಿ ಬಡಿಗೇರ್ ಮತ್ತು ಉಪಸ್ಥಿತರಿದ್ದರು, ಕಾರ್ಯಕ್ರಮದಲ್ಲಿ ಡಾ. ಗೀತಾ ಚೆನ್ನಾಳ ಸ್ವಾಗತ ಭಾಷಣ ಮಾಡಿದರು, ವಂದನಾರ್ಪಣೆಯನ್ನು ರೇಖಾ ರಾಮನಗೌಡ್ರ ಮಾಡಿದರು ಮತ್ತು ಕಾರ್ಯಕ್ರಮದ ನಿರೂಪಣೆಯನ್ನು ದೀಪಾ ಭೈರಪ್ಪನವರ ನೇರವೆರಿಸಿದರು ಈ ಸಂದರ್ಭದಲ್ಲಿ ಎಲ್ಲಾ ಅಧಿಕಾರಿ ವರ್ಗದವರು ಗ್ರಾಮದ ಹಿರಿಯರು ಮತ್ತು ಮಹಿಳೆಯರು ಮತ್ತು ಮಕ್ಕಳು ಸಾರ್ವಜನಿಕರು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಭಾಗವಹಿಸಿದ್ದರು..
ವರದಿ – ಮಹೇಶ ಶರ್ಮಾ