ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ (ತಾತ್ಯಾ) ಪಾಟೀಲ ಅವರು ಅಧಿಕಾರಿಗಳೊಂದಿಗೆ ಸಭೆ…
ಇಂದು ಬೆಂಗಳೂರಿನ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ರಾಜ್ಯ ಸರ್ಕಾರದ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ (ತಾತ್ಯಾ) ಪಾಟೀಲ ಅವರು ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಬಳಿಕ ಜವಳಿ ಇಲಾಖೆಯಲ್ಲಿ ಕೈಗೊಂಡಿರುವ ಹೊಸ ಯೋಜನೆಗಳು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಈಟಿವಿ ಭಾರತ್ ಸುದ್ದಿ ವಾಹಿನಿಗೆ ಸಂದರ್ಶನ ನೀಡಿದರು. ಈ ಸಂದರ್ಭದಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಸೌಮ್ಯ ರೆಡ್ಡಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಶ್ರೀ ಮೆಹಬೂಬ್ ಸಾಬ್, ಸಚಿವರ ಆಪ್ತ ಕಾರ್ಯದರ್ಶಿಗಳಾದ ಶ್ರೀ ವಿಜಯಕುಮಾರ ತೋರಗಲ್ ಹಾಗೂ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ವರದಿ – ಮಹೇಶ ಶರ್ಮಾ