ಕೆ.ಆರ್.ಎಸ್ ಹಿನ್ನೀರಿನಲ್ಲಿ ಪ್ರವಾಸೋದ್ಯಮ ಸಚಿವರಿಂದ ಬೋಟಿಂಗ್ ಗೆ ಚಾಲನೆ….

Spread the love

ಕೆ.ಆರ್.ಎಸ್ ಹಿನ್ನೀರಿನಲ್ಲಿ ಪ್ರವಾಸೋದ್ಯಮ ಸಚಿವರಿಂದ ಬೋಟಿಂಗ್ ಗೆ ಚಾಲನೆ….

ಪ್ರವಾಸೋದ್ಯಮಕ್ಕೆ ಒತ್ತು ನೀಡುವ ದೃಷ್ಟಿಯಿಂದ ಇಂದು ಕೆ.ಆರ್.ಎಸ್ ಹಿನ್ನೀರಿನಲ್ಲಿ ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಸಿ.ಪಿ ಯೋಗೇಶ್ವರ್ ರವರು ಬೋಟಿಂಗ್ ಗೆ ಚಾಲನೆ ನೀಡಿದರು. ಬೋಟಿಂಗ್ ಗೆ ಚಾಲನೆ ನೀಡುವ ಮುನ್ನ ಕೆ.ಆರ್ , ಎಸ್ ಹಿನ್ನೀರಿನಲ್ಲಿರುವ ವೇಣುಗೋಪಾಲಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀವೇಣು ಗೋಪಾಲಸ್ವಾಮಿಯ ದರ್ಶನ ಪಡೆದರು. ಸಚಿವರೊಟ್ಟಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಸಿ ನಾರಾಯಣಗೌಡ ಹಾಗೂ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ನಿಗಮದ ಅಧ್ಯಕ್ಷೆಯಾದ ಚಿತ್ರನಟಿ ಶ್ರುತಿ ಕೂಡ ಕೆ.ಆರ್.ಎಸ್ ಹಿನ್ನೀರಿನಲ್ಲಿನ ನಡುಗದ್ದೆ (ದ್ವೀಪ)ಯ ಪರಿವೀಕ್ಷಣೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅಶ್ವತಿ, ಜಿ.ಪಂ ಸಿಇಒ ದಿವ್ಯಾಪ್ರಭು, ಪೊಲೀಸ್ ವರಿಷ್ಠಾಧಿಕಾರಿ ಡಾ.ಅಶ್ವಿನಿ , ಪಾಂಡವಪುರ ಉಪವಿಭಾಗಾಧಿಕಾರಿ ಶಿವನಂದಾಮೂರ್ತಿ ಹಾಗೂ ಮತ್ತಿತರರು ಭಾಗಿಯಾಗಿದ್ದರು.

  ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *