ಮಸ್ಕಿ ಪಟ್ಟಣದಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿಗಳು ದಾಳಿ…
ಮಸ್ಕಿ : ಪಟ್ಟಣದಲ್ಲಿ ಬುದುವಾರ ಬಾಲ ಕಾರ್ಮಿಕ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ, ಶಾಲೆಬಿಟ್ಟ ಮಕ್ಕಳ ತಪಾಸಣೆ ನಡೆಸಿದರು ಸರಕು ಸಾಗಾಣೆ ವಾಹನಗಳಲ್ಲಿ ಹೊಲಗದ್ದೆ, ಕೂಲಿ, ಕೃಷಿ ಆಧಾರಿತ ಕೆಲಸಗಳಿಗಾಗಿ ಮಕ್ಕಳನ್ನು ಕರೆದುಕೊಂಡು ಹೋಗುತ್ತಿರುವುದು ಕಂಡುಬಂದಿರುವ ಪ್ರಯುಕ್ತ ಯಾವುದೇ ರೀತಿಯ ಅನಾಹುತಗಳಾಗದಂತೆ ಮುನ್ನೆಚ್ಚರಿಕೆ ಕ್ರಮಕ್ಕಾಗಿ ಮೋಟರ್ ವಾಹನ ಕಾಯ್ದೆಯಡಿಯಲ್ಲಿ ಆರ್.ಟಿ.ಓ ಮತ್ತು ಪೊಲೀಸ್ ಇಲಾಖೆಗಳು ಜಂಟಿಯಾಗಿ ತಪಾಸಣೆ ಕೈಗೊಂಡು ವಾಹನ ಮಾಲೀಕರಿಗೆ ದಂಡ ವಿಧಿಸಲಾಗುತ್ತಿದೆ ಎಂದು ತಿಳಿಸಿದರು. ಅಂಗಡಿ, ಹೋಟೆಲ್, ರೆಸ್ಟೋರೆಂಟ್, ಗ್ಯಾರೇಜ್, ಬಾರ್ ಅಂಗಡಿ ಹಾಗೂ ಇನ್ನಿತರ ಉದ್ದಿಮೆಗಳಲ್ಲಿ ಕೆಲಸ ಉದ್ದಿಮೆಗಳಲ್ಲಿ ಕೆಲಸ ಮಾಡುತ್ತಿರುವ ಬಾಲಕಾರ್ಮಿಕ ಮಕ್ಕಳನ್ನು ಪತ್ತೆ ಹಚ್ಚಿ ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು ಮಾಡಿ ದಂಡ ವಿಧಿಸಲಾಗುತ್ತದೆ, ಸರಕು ಸಾಗಾಣೆ ವಾಹನಗಳಲ್ಲಿ ಹೊಲಗದ್ದೆ, ಕೂಲಿ, ಕೃಷಿ ಆಧಾರಿತ ಕೆಲಸಗಳಿಗಾಗಿ ಮಕ್ಕಳನ್ನು ಕರೆದುಕೊಂಡು ಹೋಗುತ್ತಿರುವುದು ಕಂಡುಬಂದರೆ 50000 ರೂಪಾಯಿಗಳು ದಂಡ ಹಾಗೂ ಎರಡು ವರ್ಷ ಜೈಲು ಶಿಕ್ಷೆ ಇರುತ್ತದೆ ಪ್ರಯುಕ್ತ ಯಾವುದೇ ರೀತಿಯ ಅನಾಹುತಗಳಾಗದಂತೆ ಮುನ್ನೆಚ್ಚರಿಕೆ ಕ್ರಮಕ್ಕಾಗಿ ಮೋಟರ್ ವಾಹನ ಕಾಯ್ದೆಯಡಿಯಲ್ಲಿ ಆರ್.ಟಿ.ಓ ಮತ್ತು ಪೊಲೀಸ್ ಇಲಾಖೆಗಳು ಜಂಟಿಯಾಗಿ ತಪಾಸಣೆ ಕೈಗೊಂಡು ವಾಹನ ಮಾಲೀಕರಿಗೆ ದಂಡ ವಿಧಿಸಲಾಗುತ್ತಿದೆ ಎಂದು ತಿಳಿಸಿದರು. ಕೆಲಸಕ್ಕೆ ನೇಮಿಸಿಕೊಳ್ಳ ದಂತೆ ತಿಳುವಳಿಕೆ ನೀಡಿ ಹಾಗೂ ಕರಪತ್ರಗಳನ್ನು ಅಂಗಡಿಗಳಿಗೆ ಹಂಚುವ ಮುಖಾಂತರ ಜಾಗೃತಿ ಮೂಡಿಸಲಾಯಿತು ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಯೋಜನೆ ಅಧಿಕಾರಿ ಮಂಜುನಾಥ್ ರೆಡ್ಡಿ,ಶಿಕ್ಷಣ ಇಲಾಖೆ ಚನ್ನಬಸವ, ರವಿಕುಮಾರ್ ಪ್ರೋಗ್ರಾಮ್ ಮೆನೇಜರ್, ಮಕ್ಕಳ ಸಹಾಯವಾಣಿಯ ಅಧಿಕಾರಿ ಶ್ರೀ ನಾಗರಾಜ್, ಶಾಮಣ್ಣ ಹಾಜರಿದ್ದರು ದಾಳಿಯಲ್ಲಿ ಅವರು ಭಾಗವಹಿಸಿದ್ದರು.
ವರದಿ – ಸಂಪಾದಕೀಯ