ಶಿವಮೊಗ್ಗ ಜಿಲ್ಲೆಯ ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರ ಅವರು ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆಸಿದ ಪತ್ರಿಕಾ ಗೋಷ್ಠಿಯಲ್ಲಿ ಭಾಗಿಯಾಗಲಾಯಿತು.
*ಈ ವಿಶೇಷ ಪತ್ರಿಕಾ ಗೋಷ್ಠಿಯಲ್ಲಿ ಪ್ರಮುಖವಾಗಿ ಜಿಲ್ಲೆಯ ಜನರ ಗಮನಕ್ಕೆ ತಂದ ವಿಚಾರಗಳು*
- ಶಿವಮೊಗ್ಗದಲ್ಲಿ ಸುಸಜ್ಜಿತ ಆಯುರ್ವೇದ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲು ತೀರ್ಮಾನಿಸಲಾಗಿದೆ.
- ಶಿವಮೊಗ್ಗ ಬಳಿಯ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದಿಂದ ನೇರ ಮತ್ತು ಪರೋಕ್ಷವಾಗಿ ಸುಮಾರು ಐದು ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂದು ತಿಳಿಸಿದರು.
- ಸಮಗ್ರ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಸ್ಥಾಪನೆಗೆ ಸುಮಾರು 290 ಕೋಟಿ ಅನುದಾನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಗಮನಕ್ಕೆ ತಂದರು.
- ಸಹ್ಯಾದ್ರಿ ಕಾಲೇಜು ಅಭಿವೃದ್ದಿಗೆ ಸುಮಾರು 14.21 ಕೋಟಿ ಅನುದಾನ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.
- ಶಿವಮೊಗ್ಗ ಮಹಿಳಾ ಪಾಲಿಟೆಕ್ನಿಕ್ ಅಭಿವೃದ್ದಿಗೆ ಸುಮಾರು 12 ಕೋಟಿ ಅನುದಾನ ನೀಡಲು ರಾಜ್ಯ ಸರ್ಕಾರ ಒಪ್ಪಿದೆ.
- ಶಿವಮೊಗ್ಗ ವೈದ್ಯಕೀಯ ಮಹಾವಿದ್ಯಾಲಯ ದಲ್ಲಿ 50 ಹಾಸಿಗೆ ಸಾಮರ್ಥ್ಯದ ಹೃದ್ರೋಗ ಘಟಕ ಹಾಗೂ ಸುಮಾರು 100 ಪ್ಯಾರಾ ಮೆಡಿಕಲ್ ಹಾಗೂ 25 ಲ್ಯಾಬ್ ಸಿಬ್ಬಂದಿಗಳನ್ನು ಖಾಯಂ ಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
- ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ 5ಎಕರೆ ಪ್ರದೇಶದಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ. ನಂತರ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಮೂರು ನೂತನ ಆಂಬುಲೆನ್ಸ್ ಗಳನ್ನು ಜಿಲ್ಲಾ ಆರೋಗ್ಯ ಇಲಾಖೆಗೆ ಜಿಲ್ಲೆಯ ಪ್ರಮುಖ ವೈದ್ಯರ ಸಮ್ಮುಖದಲ್ಲಿ ಮಾನ್ಯ ಸಂಸದರು ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಪ್ರಮುಖ ಗಣ್ಯರು ಉಪಸ್ಥಿತರಿದ್ದರು.
ವರದಿ – ಮಹೇಶ ಶರ್ಮಾ