ಜನರ ರಕ್ಷಣೆಗೆ ಸದಾ ಸಿದ್ಧ ಶ್ರೀ ಲಕ್ಷ್ಮಣ ನಿಂಬರಗಿ…
ನಿಪ್ಪಾಣಿ ಮತಕ್ಷೇತ್ರದ ಕೊಡ್ನಿ ಗ್ರಾಮದ ನದಿ ತೀರದ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿರುವ ವಿಷಯ ನನ್ನ ಗಮನಕ್ಕೆ ಬಂದಿದ್ದು, ತಕ್ಷಣವೇ ಅಧಿಕಾರಿಗಳಿಗೆ ಸೂಚನೆ ನೀಡಿದ ಬೆನ್ನಲ್ಲೇ, ಜಿಲ್ಲಾಧಿಕಾರಿ ಶ್ರೀ ಎಂ. ಜಿ. ಹಿರೇಮಠ, ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಲಕ್ಷ್ಮಣ ನಿಂಬರಗಿ,ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರ ಮಾರ್ಗದರ್ಶನದಲ್ಲಿ ಪಕ್ಷದ ಕಾರ್ಯಕರ್ತರು ಉತ್ತಮ ರೀತಿಯಲ್ಲಿ ಜನರ ಸಂಕಷ್ಟಕ್ಕೆ ನೆರವಾಗುತ್ತಿದ್ದಾರೆ. ನನ್ನ ಆರೋಗ್ಯದಲ್ಲಿ ತುಸು ಏರುಪೇರಾಗಿರುವ ಕಾರಣ ಸ್ಥಳಕ್ಕೆ ಭೇಟಿ ನೀಡಲು ಸಾಧ್ಯವಾಗಿಲ್ಲ. ಆದರೆ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದು, ಸೂಕ್ತ ವ್ಯವಸ್ಥೆಗೆ ಸೂಚನೆ ನೀಡಲಾಗಿದೆ. ಪ್ರವಾಹ ಪೀಡಿತ ಕುಟುಂಬಗಳಿಗೆ ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿ, ಅವರಿಗೆ ಆಶ್ರಯ ನೀಡಲು ಸೂಚಿಸಲಾಗಿದೆ. ಯಾರೂ ಭಯಪಡಬೇಡಿ, ನಿಮ್ಮ ರಕ್ಷಣೆ ನಮ್ಮ ಜವಾಬ್ದಾರಿ ಎಂದು ಹೇಳಿದರು.
ವರದಿ – ಮಹೇಶ ಶರ್ಮಾ