ಕೃಷ್ಣಾ ನದಿಯ ಪ್ರವಾಹ ಮುನ್ನೆಚ್ಚರಿಕೆ ಕ್ರಮವಾಗಿ ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ನದಿತೀರದ ಗ್ರಾಮಗಳಿಗೆ ಬೇಟೆ ನೀಡಿ ಅಧಿಕಾರಿಗಳಿಗೆ ಮುನ್ನಚ್ಚರಿಕೆ ನೀಡಿ ಕಾಳಜಿ ಕೇಂದ್ರ ಸ್ಥಾಪಿಸಿದ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ (ತಾತ್ಯಾ) ಪಾಟೀಲ…
ಜಿಲ್ಲೆಯಾದ್ಯಂತ ವಿವಿಧ ಕಡೆ ಹಾಗೂ ಮಹಾರಾಷ್ಟ್ರದಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದರಿಂದ ಕೃಷ್ಣಾ ನದಿಯ ಪ್ರವಾಹ ಮುನ್ನೆಚ್ಚರಿಕೆ ಕ್ರಮವಾಗಿ ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ನದಿತೀರದ ಗ್ರಾಮಗಳ ಸಾರ್ವಜನಿಕರಿಗಾಗಿ ಈಗಾಗಲೇ ಯಾವುದೇ ರೀತಿಯ ತೊಂದರೆಯಾಗಬಾರದ ಹಾಗೆ ಕಾಗವಾಡ ಮತಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ರಾಜ್ಯ ಸರಕಾರದ ಕೈಮಗ್ಗ ಮತ್ತು ಜವಳಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ (ತಾತ್ಯಾ) ಪಾಟೀಲ ಅವರು ಹಲವು ಕಡೆಗಳಲ್ಲಿ ಕಾಳಜಿ ಕೇಂದ್ರ ಪ್ರಾರಂಭಿಸಿದ್ದು, ಇಂದು ಶಿರಗುಪ್ಪಿ ಗ್ರಾಮದಲ್ಲಿ ಪ್ರಾರಂಭಿಸಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ನಿಮಗೆ ಯಾವುದೇ ರೀತಿಯ ತೊಂದರೆಯಾಗದ ಹಾಗೆ ನಾನು ಸದಾ ನಿಮ್ಮೊಂದಿಗಿದ್ದೇನೆ, ಈಗಾಗಲೇ ನದಿತೀರದ ಸಾರ್ವಜನಿಕರನ್ನು ಸುರಕ್ಷಿತ ಸ್ಥಳಗಳಿಗೆ ತೆರಳಲು ಎಲ್ಲ ರೀತಿಯ ವ್ಯವಸ್ಥೆಯನ್ನು ಮಾಡಲಾಗಿದ್ದು, ಯಾರು ಭಯಪಡುವ ಅಗತ್ಯವಿಲ್ಲ, ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು. ಇದೇ ಸಮಯದಲ್ಲಿ ಚಿಕ್ಕೋಡಿ ಜಿಲ್ಲಾ ಉಪವಿಭಾಗಾಧಿಕಾರಿಗಳ ಹಾಗೂ ತಾಲೂಕ ಆಡಳಿತ ಮತ್ತು ಎಲ್ಲ ನೋಡಲ್ ಅಧಿಕಾರಿಗಳೊಂದಿಗೆ ಮತ್ತು ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಿ, ಎಲ್ಲಾ ಅಧಿಕಾರಿಗಳಿಳು ದಿನಾಲು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಗೆ ಹಾಗೂ ಅವರ ಜನ ಜಾನುವಾರುಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಇದರಲ್ಲಿ ಯಾವುದೇ ಅಧಿಕಾರಿಗಳು ನಿರ್ಲಕ್ಷತನ ತೋರಿದರೆ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಖಡಕ್ ಸೂಚನೆ ನೀಡಿದರು ಮತ್ತು ನಿಮಗೆ ಯಾವುದೇ ಸಂದರ್ಭದಲ್ಲಿ ನನ್ನಿಂದ ಸಹಾಯ ಸೌಕರ್ಯ ಬೇಕಾದರೆ ನನ್ನ ಗಮನಕ್ಕೆ ತನ್ನಿ, ನಾನು ಸದಾ ನಿಮ್ಮೊಂದಿಗೆದ್ದೇನೆ ಎಂದು ಹೇಳಿದರು. ಈ ಸಭೆಯಲ್ಲಿ ಚಿಕ್ಕೋಡಿ ಉಪವಿಭಾಗಾಧಿಕಾರಿ ಶ್ರೀ ಯುಕೇಶ್ ಕುಮಾರ, ಕಾಗವಾಡ ತಹಶೀಲ್ದಾರ ಶ್ರೀಮತಿ ಪ್ರಮೀಳಾ ದೇಶಪಾಂಡೆ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ವೀರನಗೌಡ ಎಗನಗೌಡರ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಮಲಪ್ಪಾ ಮುಂಜೆ, ಸಿಡಿಪಿಓ ಶ್ರಿ ಸಂಜೀವ ಕುಮಾರ್ ಸದಲಗಿ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ನೀರಾವರಿ ಇಲಾಖೆ ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು, ನೋಡಲ್ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರಾದ ಶ್ರೀ ಅಭಯಕುಮಾರ ಅಕ್ಕಿವಾಟೆ, ಶ್ರೀ ಅಣ್ಣಾಸಾಬ ಪಾಟೀಲ, ಶ್ರೀ ಸುಭಾಸ ಮೋನೆ, ಶ್ರೀ ಅರುಣ ಗಣೇಶವಾಡಿ ಸೇರಿದಂತೆ ಹಲವಾರು ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ – ಮಹೇಶ ಶರ್ಮಾ