ಪ್ರವಾಹ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರ ರಕ್ಷಣೆಗೆ ಸದಾ ಸಿದ್ಧ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ (ತಾತ್ಯಾ) ಪಾಟೀಲ ಅವರು……

Spread the love

ಪ್ರವಾಹ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರ ರಕ್ಷಣೆಗೆ ಸದಾ ಸಿದ್ಧ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ (ತಾತ್ಯಾ) ಪಾಟೀಲ ಅವರು……

ರಾಜ್ಯದ ವಿವಿಧೆಡೆ ಹಾಗೂ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದಾಗಿ ಕೃಷ್ಣಾ ನದಿಗೆ ಮಹಾಪೂರ ಬಂದು, ಇದರಲ್ಲಿ ಹಲವು ಗ್ರಾಮಗಳು ಪ್ರವಾಹದ ವ್ಯಾಪ್ತಿಯಲ್ಲಿ ಬರುವುದರಿಂದ ನದಿತೀರದ ಸಾವಿರಾರು ಸಂತ್ರಸ್ತರಿಗೆ ಈಗಾಗಲೇ ಕಾಗವಾಡ ಮತಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ರಾಜ್ಯ ಸರಕಾರದ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ (ತಾತ್ಯಾ) ಪಾಟೀಲ ಅವರು ಹಲವು ಗ್ರಾಮಗಳಲ್ಲಿ ಕಾಳಜಿ ಕೇಂದ್ರ ಪ್ರಾರಂಭಿಸಿ, ಜನ ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ    ರವಾನಿಸಲು ಎಲ್ಲ ರೀತಿಯ ವ್ಯವಸ್ಥೆಯನ್ನು ಮಾಡಿ, ಸಾರ್ವಜನಿಕರಿಗೆ ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರಿಗೆ ದಿನನಿತ್ಯ ಊಟದ ಸಲುವಾಗಿ ಉಪಯುಕ್ತವಾಗುವಷ್ಟು ಆಹಾರಧಾನ್ಯ ಹಾಗೂ ದನ-ಕರುಗಳಿಗೆ ಹಿಂಡಿ ಹಾಗೂ ಮೇವಿನ ವ್ಯವಸ್ಥೆಯನ್ನು ಮಾಡಿ, ಕಷ್ಟದ ಕಾಲದಲ್ಲಿ ಸಾರ್ವಜನಿಕರಿಗೆ ಬೆಂಬಲವಾಗಿ ನಿಂತು ಅವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸಚಿವರು ಸದಾ ಆಯಾ ಗ್ರಾಮದ ಸ್ಥಳೀಯ ಮುಖಂಡರೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು ಅವರ ಶ್ರೀಮಂತ ಪಾಟೀಲ ಫೌಂಡೇಶನ್ ವತಿಯಿಂದ  ನೆರೆ ಸಂತ್ರಸ್ತರಿಗೆ ಅವಶ್ಯವಿರುವಷ್ಟು ಎಲ್ಲ ರೀತಿಯ ಸೌಲಭ್ಯವನ್ನು ಒದಗಿಸುತ್ತಿದ್ದಾರೆ.ಇವತ್ತು ಉಗಾರ ಬುದ್ರುಕ, ಉಗಾರ ಖುರ್ದ್,ಕಾಗವಾಡ, ಐನಾಪುರ ಪಟ್ಟಣದ ಕೆಸರಾಳ ಹಾಗೂ ಬಾರಿಗಡ್ಡಿ, ಕಾತ್ರಾಳ ಹಾಗೂ ಮತ್ತಿತರರ ಗ್ರಾಮಗಳಲ್ಲಿ ಪ್ರಾರಂಭಿಸಿರುವ ಕಾಳಜಿ ಕೇಂದ್ರಕ್ಕೆ ಸಚಿವರು ಅವರ ಶ್ರೀಮಂತ ಪಾಟೀಲ್ ಫೌಂಡೇಶನ್ ವತಿಯಿಂದ ನೀಡಿರುವ ಆಹಾರ ಧಾನ್ಯ ಹಾಗೂ ದನಕರುಗಳಿಗೆ ಮೇವು ಹಾಗೂ ಹಿಂಡಿಯನ್ನು ಸಚಿವರ ಆದೇಶದ ಮೇರೆಗೆ ಅವರ ಬಿಜೆಪಿ ಪಕ್ಷದ ಮುಖಂಡರು, ಅಭಿಮಾನಿಗಳು ಸಚಿವರ ಆಪ್ತ ಸಹಾಯಕರು ನೆರೆಯ ಸಂತ್ರಸ್ತ ಪ್ರತಿಯೊಬ್ಬರಿಗೂ ಮುಟ್ಟುವ ರೀತಿಯಲ್ಲಿ ಪ್ರಾಮಾಣಿಕವಾಗಿ ನಿರಂತರ ಕಾರ್ಯ ನಿರ್ವಹಿಸುತ್ತಿದ್ದಾರೆ.  ಈ ಸಮಯದಲ್ಲಿ ಸ್ಥಳೀಯ ಮುಖಂಡರು, ತಾಲೂಕು ಆಡಳಿತದ ಅಧಿಕಾರಿಗಳು, ಆಯಾ ಗ್ರಾಮಗಳಿಗೆ ಸಂಬಂಧಪಟ್ಟ ಬಿಜೆಪಿ ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ – ಮಹೇಶ ಶರ್ಮಾ

Leave a Reply

Your email address will not be published. Required fields are marked *