ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾಗಲು ಸಾಧ್ಯ…
ಇಂದು ಚಿಕ್ಕೋಡಿಯಲ್ಲಿ, 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ, ಚಿಕ್ಕೋಡಿ ವಿಭಾಗದ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಒಂದು ದಿನದ ಕಾರ್ಯಾಗಾರಕ್ಕೆ ಮಾನ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಶ್ರೀ ಕೆ.ಎಸ್ ಈಶ್ವರಪ್ಪ ಜಿ ಅವರೊಂದಿಗೆ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಗ್ರಾಮೀಣ ಭಾಗಗಳು ಅಭಿವೃದ್ಧಿಯಾದರೆ ದೇಶ ಪ್ರಗತಿಯ ಪಥದತ್ತ ಸಾಗುತ್ತದೆ. ಹೀಗಾಗಿ ಗ್ರಾಮದ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಾ, ಅಭಿವೃದ್ಧಿ ವಿಷಯದಲ್ಲಿ ಉತ್ತಮ ನಿರ್ಣಯ ಕೈಗೊಳ್ಳುವ ಮೂಲಕ ಗ್ರಾಮವನ್ನು ಅಭಿವೃದ್ಧಿ ಮಾಡೋಣ ಎಂದು ಕರೆ ನೀಡಿದರು.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರು ಶಾಸಕರು, ಜನಪ್ರತಿನಿಧಿಗಳು, ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. .
ವರದಿ – ಮಹೇಶ ಶರ್ಮಾ