ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ನಮ್ಮ ಜವಾಬ್ದಾರಿ……
ಸಿದ್ನಾಳ ಗ್ರಾಮದಲ್ಲಿ, ನೆರೆ ಪೀಡಿತ ಪ್ರದೇಶಗಳಿಗೆ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಭೇಟಿ ನೀಡಿ, ಪರಿಶೀಲನೆ ನಡೆಸಿ ಜೊಲ್ಲೆ ಉದ್ಯೋಗ ಸಮೂಹದ ವತಿಯಿಂದ 224 ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ವಿತರಿಸಿದರು. ನೆರೆಯಿಂದ ಮನೆ, ಬೆಳೆ ಕಳೆದುಕೊಂಡ ಸಂತ್ರಸ್ತರ ಸಮಸ್ಯೆಗಳನ್ನು ನಾನು ಮನಗಂಡಿದ್ದೇನೆ. ಹೀಗಾಗಿ ನಿಮ್ಮೆಲ್ಲರ ಸಮಸ್ಯೆಗೆ ಶೀಘ್ರದಲ್ಲಿ ಬಿಜೆಪಿ ಸರ್ಕಾರದ ವತಿಯಿಂದ ಸಿಗುವ ಪರಿಹಾರವನ್ನು ಸೂಕ್ತ ರೀತಿಯಲ್ಲಿ ತಲುಪಿಸಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.
ವರದಿ – ಮಹೇಶ ಶರ್ಮಾ