ಸಂಚಾರಿ ವ್ಯವಸ್ಥೆ ಸುಧಾರಣೆಯಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯ…..
ಇಂದು ವಿಜಯಪುರದಲ್ಲಿ, ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ, ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ ಮಂಜೂರಾದ 5 ಕೋಟಿ 25 ಲಕ್ಷ ರೂ. ವೆಚ್ಚದಲ್ಲಿ ಸಂಚಾರಿ ವ್ಯವಸ್ಥೆ ಸುಧಾರಣಾ ಕಾಮಗಾರಿಗೆ ಭೂಮಿಪೂಜೆ ನೆರವೇರಿಸುವ ಮೂಲಕ ವಿಜಯಪುರ ಜಿಲ್ಲೆಯ ಉಸ್ತುವಾರಿ ಹಾಗೂ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಚಾಲನೆ ನೀಡಿದರು. ಈ ಕಾಮಗಾರಿಯಲ್ಲಿ ಒಟ್ಟು 22 ಸ್ಥಳಗಳಲ್ಲಿ ಹಾಗೂ ನಗರದ ಆಗಮನ-ನಿರ್ಗಮನಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಕೆ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು. ಎಲ್ಲಾ ಕಡೆ ಕಣ್ಗಾವಲು ಮಟ್ಟ ಸುಧಾರಿಸಲು 3 ವಿವಿಧ ಕ್ಯಾಮೆರಾ(PTZ, ANPR, Bullet Camera) ಗಳನ್ನು ಅಳವಡಿಕೆ ಮಾಡಲಾಗುವುದು. ಇದರಿಂದ ನಗರದಲ್ಲಿ ಅಪರಾಧ ಮಟ್ಟ ತಗ್ಗಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಸಕರು, ಸ್ಥಳೀಯ ಮುಖಂಡರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.
ವರದಿ – ಮಹೇಶ ಶರ್ಮಾ