ಕೋಡಿಗೆಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ….
ಬೆಂಗಳೂರು ಆಗಸ್ಟ್ 15: ಬೆಂಗಳೂರು ಪೂರ್ವ ತಾಲ್ಲೂಕು ಬಿಬಿಎಂಪಿ ಮಹದೇವಪುರ ವಲಯ ವ್ಯಾಪ್ತಿಯ ಹೂಡಿ ವಾರ್ಡ್ ನ ಕೊಡಿಗೇಹಳ್ಳಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸರಕಾರಿ ಪ್ರಾಥಮಿಕ ಶಾಲೆಯ ಶಾಲಾಭಿವೃದ್ದಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಶ್ರೀ ಹೆಚ್ ವೆಂಕಟೇಶ್ ಅವರು ಸತತ 84 ನೇ ಬಾರಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕೋವಿಡ್ ನಿಂದಾಗಿ ಗ್ರಾಮಾಂತರ ಪ್ರದೇಶಗಳಲ್ಲಿರುವ ಸರಕಾರಿ ಶಾಲೆಗಳು ಮುಚ್ಚಿವೆ. ಇದರಿಂದ ಬಡ ಮಕ್ಕಳು ಶಾಲೆಯಿಲ್ಲದೆ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಅಲ್ಲದೆ, ಬಹುತೇಕ ಮಕ್ಕಳು ಬಾಲ್ಯ ಕಾರ್ಮಿಕರಾಗಿ ಹಾಗೂ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳಿಗೆ ಬಾಲ್ಯವಿವಾಹಗಳು ಹೆಚ್ಚಾಗುತ್ತಿರುವುದು ಬಹಳ ಆತಂಕಕಾರಿ ವಿಷಯ. ಈ ಹಿನ್ನಲೆಯಲ್ಲಿ ರಾಜ್ಯ ಸರಕಾರ 2 ವರ್ಷಗಳ ನಂತರವಾದರೂ ಸ್ಪಷ್ಟ ನಿಲುವನ್ನು ತಗೆದುಕೊಳ್ಳುವ ಮೂಲಕ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತಹ ಕ್ರಮಗಳನ್ನು ತಗೆದುಕೊಳ್ಳಬೇಕು ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ವಿಮಲಾ ಬಾಯಿ ಕೊಡಿಗೇಹಳ್ಳಿ ಹಾಗೂ ಬಡಾವಣೆಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಾದ ವರದರಾಜು, ಪ್ರತಾಪ್ ಸಿಂಗ್, ಮಹಬೂಬ್ ಪಾಷಾ, ಪ್ರಶಾಂತ್ ಕುಮಾರ್ ಹಾಗೂ ಎಸ್ ಡಿಎಂಸಿ ಸದಸ್ಯರು ಮತ್ತು ವಕೀಲರಾದ ಪ್ರಭಾಕರ್ ಮತ್ತು ರಾಜ್ಯ ಯುವ ಕಾಂಗ್ರೆಸ್ ಮುಖಂಡರಾದ ವಿ ವಿವೇಕ್ ರವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ – ಹರೀಶ ಶೇಟ್ಟಿ ಬೆಂಗಳೂರು