ಪ್ರಾಮಾಣಿಕ ಕರ್ತವ್ಯ ನಿರ್ವಹಣೆಯೇ ದೇಶ ಸೇವೆ: ಪ್ರೊ. ಹಲಸೆ#….
ವೃತ್ತಿ ನಿಷ್ಠೆ, ಪ್ರಾಮಾಣಿಕ ಕರ್ತವ್ಯ ಮತ್ತು ಜನಪರ ಕಾಳಜಿಯಿಂದ ಕೆಲಸ ಮಾಡುವುದೇ ದೇಶಕ್ಕೆ ನೀಡುವ ನಿಜವಾದ ಕೊಡುಗೆ. ಇದು ದೇಶದ ಸ್ವಾತಂತ್ರö್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಹಿರಿಯರಿಗೆ ಸಲ್ಲಿಸುವ ಗೌರವ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅಭಿಪ್ರಾಯಪಟ್ಟರು. ದಾವಣಗೆರೆ ವಿಶ್ವವಿದ್ಯಾನಿಲಯ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ 75ನೇ ಸ್ವಾತಂತ್ರö್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ದೇಶದ ಸ್ವಾತಂತ್ರö್ಯಕ್ಕೆ ಬಲಿದಾನ ಮಾಡಿದ ಹಿರಿಯರ ಋಣ ನೆಮ್ಮೆಲ್ಲರ ಮೇಲಿದೆ. ಹೀಗಾಗಿ ದೇಶಕ್ಕಾಗಿ ಬದ್ಧತೆಯಿಂದ ಸಮರ್ಪಣಾ ಮನೋಭಾವದಿಂದ ಮತ್ತು ಆತ್ಮಸಾಕ್ಷಿಯಿಂದ ಪ್ರಾಮಾಣಿಕವಾಗಿ ಕೆಲಸ ಮಾಡಲು ಎಲ್ಲರೂ ಸಂಕಲ್ಪ ಮಾಡಬೇಕಾಗಿದೆ. ಇದು ಸ್ವಾತಂತ್ರೊö್ಯÃತ್ಸವದ ಸುವರ್ಣ ಮಹೋತ್ಸವದ ಈ ದಿನದಿಂದಲೇ ಶುರುವಾಗಬೇಕು ಎಂದು ನುಡಿದರು. ಕೆಲಸದಲ್ಲಿ ಮೇಲು- ಕೀಳು ಎಂಬುದಿಲ್ಲ. ಯಾವುದೇ ಕೆಲಸ ಮಾಡಿದರೂ ಆತ್ಮತೃಪ್ತಿ ಇರಬೇಕು. ವೃತ್ತಿ ಕೌಶಲ್ಯ ಬಹಳ ಮುಖ್ಯ. ಅದನ್ನು ರೂಢಿಸಿಕೊಂಡರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಸ್ವಾಭಿಮಾನಿ ರಾಷ್ಟç ನಿರ್ಮಾಣಕ್ಕೆ ಪ್ರತಿಯೊಬ್ಬರ ಸಹಕಾರವೂ ಮುಖ್ಯ. ಪರಸ್ಪರ ವೈರತ್ವ ಬಿಟ್ಟು, ಪ್ರೀತಿ, ವಿಶ್ವಾಸದಿಂದ ಇಡೀ ಜಗತ್ತನ್ನು ಗೆಲ್ಲಲು ಮುಂದಾಗಬೇಕಾಗಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಶಿಕ್ಷಣ ನೀತಿ ಜಾರಿಗೆ ತರುವ ಮೂಲಕ ಸ್ವಚ್ಛ, ಸದೃಢ, ಸ್ವಾಭಿಮಾನಿ ರಾಷ್ಟç ನಿರ್ಮಾಣಕ್ಕೆ ಚಾಲನೆ ನೀಡಿದ್ದಾರೆ. ಅವರ ಆಶಯದಂತೆ ಯೋಜನೆಯನ್ನು ಸಮರ್ಪಕವಾಗಿ ಜಾರಿಗೆ ತರಲು ಎಲ್ಲರೂ ಸಜ್ಜಾಗಬೇಕು ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಸ್ವಾತಂತ್ರೊö್ಯÃತ್ಸವದ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಹಾಗೂ ಸ್ವಾತಂತ್ರೊö್ಯÃತ್ಸವ ಸುವರ್ಣ ಮಹೋತ್ಸವದ ಪ್ರಯುಕ್ತ ವಿಶ್ವವಿದ್ಯಾನಿಲಯ ಆವರಣದಲ್ಲಿ ಎನ್‌ಎಸ್‌ಎಸ್ ಘಟಕದ ವತಿಯಿಂದ 75 ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಕುಲಸಚಿವೆ ಪ್ರೊ. ಗಾಯತ್ರಿ ದೇವರಾಜ, ಪರೀಕ್ಷಾಂಗ ಕುಲಸಚಿವೆ ಪ್ರೊ. ಅನಿತಾ ಎಚ್.ಎಸ್, ಹಣಕಾಸು ಅಧಿಕಾರಿ ಪ್ರಿಯಾಂಕ ಡಿ, ಡೀನ್‌ರಾದ ಪ್ರೊ. ಕೆ.ಬಿ.ರಂಗಪ್ಪ, ಪ್ರೊ. ಜೆ.ಕೆ.ರಾಜು, ಪ್ರೊ. ವಿ.ಕುಮಾರ್, ಡಾ. ವೆಂಕಟೇಶ, ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ಗಿರೀಶ, ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು.
ವರದಿ – ಮಹೇಶ ಶರ್ಮಾ