ಕೇಂದ್ರ ಪುರಸ್ಕೃತ ಯೋಜನೆಗಳು ಜಿಲ್ಲಾ ಮಟ್ಟದಲ್ಲಿ ಕಾರ್ಯಗತಗೊಳಿಸಲು ಸಹಕರಿಸಿ; ಸುಮಲತಾ ಅಂಬರೀಶ್…..
ಮಂಡ್ಯ: ಕೇಂದ್ರ ಸರ್ಕಾರದ ಪುರಸ್ಕೃತ ಯೋಜನೆಗಳನ್ನು ಜಿಲ್ಲೆಯ ಎಲ್ಲಾ ಹಂತಗಳಲ್ಲಿಯೂ ಕಾರ್ಯಗತಗೊಳಿಸುವಂತೆ ಹಾಗೂ ಜಿಲ್ಲಾ ಅಭಿವೃದ್ಧಿಗೆ ಸಹಕರಿಸುವಂತೆ ಅಧಿಕಾರಿಗಳಿಗೆ ಲೋಕಸಭಾ ಸಂಸದರು ಮತ್ತು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಅಧ್ಯಕ್ಷರಾದ ಸುಮಲತಾ ಅಂಬರೀಶ್ ಸೂಚಿಸಿದರು. ಇಂದು ಜಿಲ್ಲಾಪಂಚಾಯಿತಿ ಕಛೇರಿಯ ಕಾವೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ ಮತ್ತು ಕೇಂದ್ರ ವಲಯ ಅಥವಾ ಕೇಂದ್ರ ಪುರಸ್ಕøತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್ ಮೂರನೇ ಅಲೆ ತಡೆಗಟ್ಟುವಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಕೈಗೊಂಡಿರುವ ಕ್ರಮದ ಕುರಿತು ಚರ್ಚಿಸಿದರು. ಜಿಲ್ಲೆಯ ವಿವಿಧ ತಾಲ್ಲೂಕಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಆಕ್ಸಿಜನ್ ಪ್ಲಾಂಟ್‌ಗಳ ಪ್ರಗತಿ ಕುರಿತು ಚರ್ಚಿಸಿದರು.ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಕ್ಷಿಪ್ರಗತಿಯಲ್ಲಿ ಸಾಗಲಿ ಎಂದರು.ಮಂಡ್ಯ ಜಿಲ್ಲೆಯ ಅಮೃತ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಕ್ರಮ ಗಣಿಗಾರಿಕೆಯ ಸ್ಥಗಿತಗೊಂಡಿದೆ ಎಂಬ ದೂರಿನ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದರು ಹಾಗೂ ಯಾವುದೇ ಸಕ್ರಮ ಕಾಮಗಾರಿಗಳ ಕೆಲಸಗಳು ತೊಂದರೆಯಿಲ್ಲದೆ ಸಾಗಲಿ ಎಂದರು.ಗಣಿಗಾರಿಕೆಗೆ ಸಂಬಂಧಿಸಿದಂತೆ ಪಾವತಿಸಬೇಕಾದ ರಾಜಧನದ ಸಂಗ್ರಹಣೆ, ಅಕ್ರಮ ಗಣಿಗಾರಿಕೆ ಮಾಡುವವರ ವಿರುದ್ಧ ದಾಖಲಾಗಿರುವ ಕೇಸ್ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದರು. ಸಭೆಗೆ ಹಾಜರಾಗುವ ಮುನ್ನ ಅಧಿಕಾರಿಗಳು ಸಂಬಂಧಿಸಿದ ಪೂರ್ಣ ಮಾಹಿತಿಯನ್ನು ಹೊಂದಿರಬೇಕು ಎಂದರು. ಜಿಲ್ಲೆಯಲ್ಲಿ ದಿನಗೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಯಾವುದೇ ರೀತಿಯಲ್ಲಿಯೂ ತೊಂದರೆಯಾಗಬಾರದೆಂದು ತಿಳಿಸಿದರು. ಇದೇ ಸಂದರ್ಭದಲ್ಲಿ 75ನೇ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಪ್ರಧಾನ ಮಂತ್ರಿಗಳ ಮಹಾತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಗ್ರಾಮ್ ಸಡಕ್ ಯೋಜನೆಯ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಸಂಸದರು ಉಧ್ಘಾಟಿಸಿದರು. ಸದರಿ ಸಭೆಯಲ್ಲಿ ಶಾಸಕರಾದ ಶ್ರೀನಿವಾಸ್, ಪುಟ್ಟರಾಜು, ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ವಿಧಾನಪರಿಷತ್ ಸದಸ್ಯರಾದ ಕೆ.ಟಿ ಶ್ರೀಕಂಠೇಗೌಡ, ಅಪ್ಪಾಜಿಗೌಡ, ಜಿ.ಪಂ ಸಿಇಓ ದಿವ್ಯಪ್ರಭು, ಪೊಲೀಸ್ ವರಿಷ್ಠಾಧಿಕಾರಿ ಡಾ. ಅಶ್ವಿನಿ, ಅಪರ ಜಿಲ್ಲಾಧಿಕಾರಿ ವಿ.ಆರ್ ಶೈಲಜಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಧನಂಜಯ್, ಉಪವಿಭಾಗಾಧಿಕಾರಿಗಳಾದ ಶಿವಾನಂದಮೂರ್ತಿ, ಐಶ್ವರ್ಯ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ವರದಿ – ಮಹೇಶ ಶರ್ಮಾ