ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳೊಂದಿಗೆ ನಡೆದ ಪರಿಶೀಲನಾ ಸಭೆ..
ಬೆಳಗಾವಿ ಜಿಲ್ಲೆಯ ಸುವರ್ಣ ಸೌಧದಲ್ಲಿ ಇಂದು ಬೆಳಗಾವಿ ಜಿಲ್ಲೆಯ ಕೋವಿಡ್ 19 ಹಾಗೂ ಪ್ರವಾಹ ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳೊಂದಿಗೆ ನಡೆದ ಪರಿಶೀಲನಾ ಸಭೆಯಲ್ಲಿ ಕಾಗವಾಡ ಮತಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ರಾಜ್ಯ ಸರಕಾರದ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ (ತಾತ್ಯಾ) ಪಾಟೀಲ ಅವರು ಪಾಲ್ಗೊಂಡು ಸಮಾಲೋಚನೆ ನಡೆಸಿ, ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಾದರೆ ಆಕ್ಸಿಜನ್ ತಕ್ಷಣವೇ ಪೂರೈಸಲು ಅನುಕೂಲವಾಗುವಂತೆ ಬಾಟ್ಲಿಂಗ್ ಯುನಿಟ್ ಸ್ಥಾಪಿಸಲು ಹಾಗೂ ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ಹೆಚ್ಚಾದರೆ ಗಡಿಯಲ್ಲಿರುವ ನಮ್ಮ ಕಾಗವಾಡ ಹಾಗೂ ಅಥಣಿ ತಾಲ್ಲೂಕಿನ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಆದ್ದರಿಂದ ತುರ್ತು ಚಿಕಿತ್ಸೆಗೆ ಅನೂಕೂಲ ಕಲ್ಪಿಸಬೇಕು ಹಾಗೂ ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಮಾನ್ಯ ಮುಖ್ಯಮಂತ್ರಿಳಿಗೆ ಮನವಿ ಮಾಡಿದರು ಈ ಸಮಯದಲ್ಲಿ ಜಿಲ್ಲೆಯ ಸಚಿವರು, ಸಂಸದರು, ವಿಧಾನಪರಿಷತ್ ಸದಸ್ಯರು, ಶಾಸಕರು ಹಾಗೂ ಮತ್ತಿತರ ಗಣ್ಯರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ – ಮಹೇಶ ಶರ್ಮಾ