ಪಟ್ಟಣದ ಜೆ ಎಚ್ ಪಟೇಲ್ ಶಿಕ್ಷಣ ಮಹಾವಿದ್ಯಾಲಯ  ಹಮ್ಮಿಕೊಂಡ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು….

Spread the love

ಪಟ್ಟಣದ ಜೆ ಎಚ್ ಪಟೇಲ್ ಶಿಕ್ಷಣ ಮಹಾವಿದ್ಯಾಲಯ  ಹಮ್ಮಿಕೊಂಡ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು….

ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿ ಎಚ್ ಟಿ ಕುಲಕರ್ಣಿ ಗುರುಗಳು ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರಷ್ಟೇ ಪೋಷಕರು ಕೂಡ ಮುಖ್ಯ. ಹೀಗಾಗಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಕಾಳಜಿ ವಹಿಸಬೇಕು. ಪ್ರಶಿಕ್ಷಣಾರ್ಥಿಗಳು ಹೆಚ್ಚಾಗಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಕ್ಷಕರು ಶೈಕ್ಷಣಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಕಾಳಜಿ ವಹಿಸಿ ಅವರ ಪ್ರಗತಿಗೆ ಪೂರಕವಾಗಿ ಕಾರ್ಯೋನ್ಮುಖರಾಗಬೇಕು. ವಿದ್ಯಾರ್ಥಿಗಳ ಸಮಸ್ಯೆ, ಕಷ್ಟ ದುಃಖಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು.  ಶಿಕ್ಷಕರು, ವಿದ್ಯಾರ್ಥಿಗಳಾಗಲಿ ಶಿಸ್ತನ್ನು ಮೈಗೂಡಿಸಿಕೊಳ್ಳದಿದ್ದರೇ ನಮ್ಮ ಧ್ಯೇಯವನ್ನು ಸುಲಭವಾಗಿ ಈಡೇರಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಶಿಸ್ತಿಗೆ ಆದ್ಯತೆ ನೀಡಬೇಕು ಎಂದರು..ಸಿ ಎಂ ಮನಗೂಳಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಮಹಾವಿದ್ಯಾಲಯ ಪ್ರಚಾರ್ಯರಾದ ಎ ಬಿ ಸಿಂದಗಿ ಮಾತನಾಡಿ, ಪ್ರಶಿಕ್ಷಣಾರ್ಥಿಗಳು ಶಾಲೆಯ ಉತ್ತಮ ಫಲಿತಾಂಶಕ್ಕೆ ಹೆಚ್ಚು ಮನ್ನಣೆ ನೀಡಬೇಕು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕನ ಪಾತ್ರ ಮಹತ್ತರವಾದದ್ದು, ಸತತ ಅಧ್ಯಯನಶೀಲರಾಗಬೇಕು, ಈಗಿನ ವಿದ್ಯಾರ್ಥಿಗಳಲ್ಲಿ ಶಿಕ್ಷಕರ ಮೇಲಿನ ಗೌರವದ ಕೊರತೆ ಎದ್ದು ಕಾಣುತ್ತಿದೆ ಮೇಲಾಗಿ ಸಮಾಜದ ಬದಲಾವಣೆಯಲ್ಲಿ ಶೈಕ್ಷಣಿಕ ಪ್ರಪಂಚದಲ್ಲಿ ಪ್ರತಿಯೊಬ್ಬರ ಪಾತ್ರವು ಪ್ರಮುಖವಾಗಿದೆ ಎಂದರು.ಇದೇ ಸಂದರ್ಭದಲ್ಲಿ ಪ್ರಾಚಾರ್ಯರಾದ ಬಿ ಎಂ ಹುರಕಡ್ಲಿ, ಎಸ್ ಬಿ ಅಂಕಲಗಿ, ಪ್ರದೀಪ ಕತ್ತಿ, ಸರೋಜಿನಿ ಹಿರೇಮಠ ಎಚ್ ಸಿ ಕೆಂಭಾವಿ ಹಾಗೂ ಮಂಜುನಾಥ ಪರಮಾನಂದ ಸೇರಿದಂತೆ ಎಲ್ಲ ಉಪನ್ಯಾಸಕರು ಉಪಸ್ಥಿತರಿದ್ದರು. ಪುಷ್ಪಾ ಗಬಸಾವಳಗಿ ಸ್ವಾಗತಿಸಿದರು. ತಾಯಮ್ಮ ಮಾದರ ಪ್ರಾರ್ಥಿಸಿದರು. ಆಕಾಶ ಕುಲಕರ್ಣಿ ವಂದಿಸಿದರು..

ವರದಿಮಹೇಶ ಶರ್ಮಾ

Leave a Reply

Your email address will not be published. Required fields are marked *