ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಮಾಡಿರುವುದು ಖಂಡನೀಯ ಎಂದ ಸಚಿವೆ ಸೌ. ಶಶಿಕಲಾ ಜೊಲ್ಲೆ ಜಿ ಯವರು..
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ, ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಜಿ, ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಚರ್ಚೆ ನಡೆಸಿ, ಬಳಿಕ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದರು. ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಮಾಡಿರುವುದು ಖಂಡನೀಯ. ಸಂತ್ರಸ್ತೆ ಯುವತಿ ಹಾಗೂ ಆಕೆಯ ಕುಟುಂಬದೊಂದಿಗೆ ನಾನು ಹಾಗೂ ಬಿಜೆಪಿ ಸರ್ಕಾರವಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈ ರೀತಿಯ ದುಷ್ಕೃತ್ಯ ನಡೆದಿರುವುದು ನೋವಿನ ಸಂಗತಿ. ಒಂದು ಹೆಣ್ಣಿನ ನೋವು ಒಬ್ಬಳು ಹೆಣ್ಣಾಗಿ ನನಗೆ ಅರ್ಥ ಆಗುತ್ತದೆ. ಈ ಪ್ರಕರಣದ ಆರೋಪಿಗಳ ಪತ್ತೆಗೆ ಈಗಾಗಲೇ ಮುಖ್ಯಮಂತ್ರಿಗಳು, ಗೃಹ ಸಚಿವರು ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ರಚನೆ ಮಾಡಿದ್ದಾರೆ. ನಾನೂ ಕೂಡ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಯಾಗುವಂತೆ ಗೃಹ ಸಚಿವರಿಗೆ ಮನವಿ ಮಾಡುತ್ತೇನೆ ಎಂದು ಹೇಳಿದರು.
ವರದಿ – ಮಹೇಶ ಶರ್ಮಾ