ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನಾ ವತಿಯಿಂದ ಡಿಜಿಟಲ್ ಸೇವಾ ಕಾಮನ್ ಸರ್ವಿಸ್ ಸೆಂಟರ್ ಉದ್ಘಾಟನಾ ಕಾರ್ಯಕ್ರಮ ಮತ್ತು ಕೊರೋನ ವಾರಿಯರ್ಸ್ ಪತ್ರಕರ್ತರಿಗೆ ಅಭಿನಂದನೆ ಕಾರ್ಯಕ್ರಮ ನಡೆಸಲಾಯಿತು…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾ ವತಿಯಿಂದ ಡಿಜಿಟಲ್ ಸೇವಾ ಕಾಮನ್ ಸರ್ವೀಸ್ ಸೆಂಟರ್ ಉದ್ಘಾಟನಾ ಕಾರ್ಯಕ್ರಮ ಮಳವಳ್ಳಿ ಪಟ್ಟಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಮೈಸೂರು ಪ್ರಾದೇಶಿಕ ನಿರ್ದೇಶಕರಾದ ಪಿ. ಗಂಗಾಧರ ರೈರವರು ಉದ್ಘಾಟಿಸಿ ಮಾತನಾಡಿ ಸರ್ಕಾರ ಸವಲತ್ತುಗಳನ್ನು ಸಾರ್ವಜನಿಕರಿಗೆ ತಲುಪಿಸುವ ದೃಷ್ಟಿಯಿಂದ ಡಿಜಿಟಲ್ ಸೇವಾ ಕೇಂದ್ರವನ್ನು ತೆರೆದಿದ್ದು , ಅದನ್ನು ತಾಲೂಕಿನ ಜನರು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು. ಮುಂದಿನ ದಿನಗಳಲ್ಲಿ ಹೋಬಳಿ ಮಟ್ಟದಲ್ಲೂ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಭರವಸೆ ನೀಡಿದರು. ಇದೆ ಸಂದರ್ಭದಲ್ಲಿ ಶಿವಕುಮಾರ್ ಅವರು ಮಾತನಾಡಿ ಕೋರೋನ ಸಮಯದಲ್ಲಿ ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನಾ ವತಿಯಿಂದ ಮಳವಳ್ಳಿ ತಾಲೂಕಿನ ಕೆಲ ಕಡುಬಡವರಿಗೆ ಆಹಾರ ಕಿಟ್ ದಿನಸಿ ಪದಾರ್ಥಗಳನ್ನು ವಿತರಣೆ ಮಾಡಿದ್ದಾರೆ ಮತ್ತು ತಾಲೂಕಿನ ಕೆಲ ಅಂಗವಿಕಲರಿಗೆ ವೀಲ್ ಚೇರ್ ವ್ಯವಸ್ಥೆ ಮಾಡಿದ್ದಾರೆ ಮತ್ತು ಇನ್ನೂ ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಲೇ ಬಂದಿದ್ದಾರೆ ಎಂದು ತಿಳಿಸಿದರು. ಇದೇವೇಳೆ ಮೈಸೂರು ಪ್ರಾದೇಶಿಕ ನಿರ್ದೇಶಕರು ಆದಂತಹ ಶ್ರೀ ಪಿ. ಗಂಗಾಧರ್ ರೈ,ಜಿಲ್ಲಾ ನಿರ್ದೇಶಕ ವಿನಯ್ ಕುಮಾರ್ ಸುವರ್ಣ , ತಾಲೂಕು ಯೋಜನಾಧಿಕಾರಿ ಶ್ರೀಮತಿ ಲೀಲಾವತಿ, ಜ್ಞಾನ ವಿಕಾಸ ಸಮನ್ವಧಿಕಾರಿ ಶ್ರೀಮತಿ ಪದ್ಮಾವತಿ,ಸಂಸ್ಥೆಯ ಮೇಲ್ವಿಚಾರಕಿ ಶ್ರೀಮತಿ ಶೋಭಾ,ಜನಜಾಗೃತಿ ವೇದಿಕೆ ಮಾಗನೂರುಶಿವಕುಮಾರ, ಶ್ರೀಕಂಠಸ್ವಾಮಿ, ಸೇರಿದಂತೆ ತಾಲೂಕಿನ ಎಲ್ಲಾ ಪತ್ರಕರ್ತರು ಹಾಜರಿದ್ದರು.
ವರದಿ – ಮಹೇಶ ಶರ್ಮಾ